ಸುಂಕಗಳಿಂದ ಭಾರತ ನಮ್ಮನ್ನು ಕೊಲ್ಲುತ್ತಿದೆ: ಟ್ರಂಪ್ ಟೀಕೆ

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಭಾರತವನ್ನು ಗುರಿಯಾಗಿಸಿಕೊಂಡಿದ್ದು, ಭಾರತವೇ “ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರ” ಎಂದು ಟೀಕಿಸಿದ್ದಾರೆ.

ಸ್ಕಾಟ್ ಜೆನ್ನಿಂಗ್ಸ್ ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಚೀನಾ, ಭಾರತ, ಬ್ರೆಜಿಲ್ — ಎಲ್ಲರೂ ನಮ್ಮನ್ನು ಸುಂಕಗಳಿಂದ ಕೊಲ್ಲುತ್ತಿದ್ದಾರೆ. ಆದರೆ ನನ್ನ ತೀಕ್ಷ್ಣ ನಿಲುವಿನಿಂದ ಭಾರತ ಸುಂಕ ರಹಿತ ವ್ಯಾಪಾರಕ್ಕೆ ಸಮ್ಮತಿಸಿತು” ಎಂದು ಹೇಳಿದರು.

“ನಾನು ಸುಂಕವನ್ನು ವಿಧಿಸದಿದ್ದರೆ ಭಾರತ ಯಾವತ್ತೂ ಇಂತಹ ಕೊಡುಗೆ ನೀಡುತ್ತಿರಲಿಲ್ಲ. ಸುಂಕವೇ ನಮಗೆ ಬಲಿಷ್ಠವಾದ ಮಾತುಕತೆಯ ಶಕ್ತಿ ನೀಡುತ್ತಿದೆ” ಎಂದು ಟ್ರಂಪ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷವನ್ನು ಪ್ರೀತಿಯಿಂದ ಗೆಲ್ಲಬೇಕೆಂದ ಉಮರ್ ಪರಮ ಪಾತಕಿಯೇ?

ಅಮೆರಿಕದ ಹಾರ್ಲೆ ಡೇವಿಡ್‌ಸನ್ ಬೈಕ್‌ಗೆ ಭಾರತವು ವಿಧಿಸಿದ್ದ ಶೇ. 200 ಸುಂಕವನ್ನು ಉದಾಹರಣೆಯಾಗಿ ನೀಡಿದ ಟ್ರಂಪ್, ಇಂತಹ ಅಡ್ಡಿಗಳು ಅಮೆರಿಕ ಕಂಪನಿಗಳನ್ನು ಭಾರತ ಪ್ರವೇಶಿಸಲು ಹಿಂಜರಿಯುವಂತೆ ಮಾಡಿವೆ ಎಂದರು.

ಇತ್ತ ಭಾರತ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ವ್ಯಾಪಾರ ಮಾತುಕತೆಗಳು ಮುಂದುವರಿಯುತ್ತಿವೆ ಎಂದು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಅಮೆರಿಕವು ಭಾರತದ ಆಮದುಗಳ ಮೇಲೆ ಶೇ. 50 ಸುಂಕ ವಿಧಿಸಿರುವುದರ ಹಿಂದೆ, ನವದೆಹಲಿಯ ರಷ್ಯಾದ ಕಚ್ಚಾ ತೈಲ ಖರೀದಿ ನಿರ್ಧಾರವೇ ಕಾರಣವಾಗಿದೆ. ಆದರೆ ಭಾರತ, “ನಾವು ತೈಲ ಖರೀದಿಯನ್ನು ಮಾರುಕಟ್ಟೆ ಪರಿಸ್ಥಿತಿ ಹಾಗೂ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟು ಮಾಡುತ್ತಿದ್ದೇವೆ” ಎಂದು ಅಮೆರಿಕದ ಟೀಕೆಗೆ ತಿರುಗೇಟು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...