ಭಾರತದಿಂದ ಸೇನಾ ದಾಳಿ ಸನ್ನಿಹಿತ: ಪಾಕ್‌ ರಕ್ಷಣಾ ಸಚಿವ

Date:

ಪಹಲ್ಗಾಮ್‌ ದಾಳಿಯ ನಂತರ ಭಾರತದಿಂದ ಸೇನಾ ದಾಳಿ ಸನ್ನಿಹಿತವಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮೊಹಮ್ಮದ್‌ ಆಸೀಫ್‌ ಆತಂಕ ವ್ಯಕ್ತಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ನಮ್ಮ ಪಡೆಗಳನ್ನು ಸಜ್ಜುಗೊಳಿಸಲು ಕಾರಣವೆಂದರೆ ಅದು ಈಗ ಸನ್ನಿಹಿತವಾಗಿದೆ, ಪ್ರಸ್ತುತ ಸಂದರ್ಭದಲ್ಲಿ ಕೆಲವು ಕಾರ್ಯಾಚರಣೆಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದ್ದು, ಈ ನಿರ್ಧಾರಗಳನ್ನೆ ತೆಗೆದುಕೊಳ್ಳಲಾಗುತ್ತಿದೆ. ಪಾಕಿಸ್ತಾನದ ಸೈನ್ಯ ಬಲಪಡಿಸುವಿಕೆ ಅಂತಹ ನಿರ್ಧಾರಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.

ಭಾರತದ ಕಾರ್ಯತಂತ್ರಗಳು ಹೆಚ್ಚಾಗುತ್ತಿದ್ದು, ಸರ್ಕಾರವು ಭಾರತ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಸೇನೆಗೆ ಮಾಹಿತಿ ನೀಡಿದೆ. ಭಾರತದಿಂದ ಯಾವ ರೀತಿಯಲ್ಲಿ ಸೇನಾ ದಾಳಿಯಾಗುವ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಆಸೀಫ್ ನಿರಾಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ದಾಳಿಯ ಬಗ್ಗೆ ಪಾಕಿಸ್ತಾನದ ಮಿಲಿಟರಿ ಮತ್ತು ಸರ್ಕಾರಕ್ಕೆ ಮಾಹಿತಿ ನೀಡಿದೆ. ಈ ಕಾರಣಕ್ಕೆ ಪಾಕಿಸ್ತಾನವು ಎಚ್ಚರಿಕೆಯಿಂದಿದ್ದು, ತನ್ನ ಅಸ್ತಿತ್ವಕ್ಕೆ ಅಪಾಯವಾದರೆ ಮಾತ್ರ ಪರಮಾಣು ಅಸ್ತ್ರಗಳನ್ನು ಬಳಸಲಿದೆ” ಎಂದು ಖವಾಜಾ ಆಸೀಫ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳಮೀಸಲಾತಿ ಗಣತಿ ಚಾರಿತ್ರಿಕ ದಾಖಲೆ, ತಪ್ಪದೇ ಭಾಗಿಯಾಗಿರಿ

“ಪಹಲ್ಗಾಮ್‌ ದಾಳಿಯಲ್ಲಿ ಪಾಕಿಸ್ತಾನದ ಪಾತ್ರ ಇದೆ ಎಂದು ಭಾರತ ಆರೋಪಿಸುತ್ತಿದೆ. ಆದರೆ ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ನಾವು ಸ್ಪಷ್ಟಪಡಿಸಿದ್ದೇವೆ. ಆದರೆ ಭಾರತ ಈಗ ನಮ್ಮ ಮಾತನ್ನು ಕೇಳುವ ಸ್ಥಿತಿಯಲ್ಲಿ ಇಲ್ಲ. ಅದು ಖಂಡಿತವಾಗಿಯೂ ನಮ್ಮ ಮೇಲೆ ದಾಳಿ ನಡೆಸಲಿದೆ. ಹೀಗಾಗಿ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ” ಎಂದು ಪಾಕ್‌ ರಕ್ಷಣಾ ಸಚಿವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ.

ಇನ್ನು ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ಭಾರತದ ಕ್ರಮ ಹೆಚ್ಚಾಗುತ್ತಿದ್ದಂತೆಯೇ ಪಹಲ್ಗಾಮ್ ದಾಳಿಯಲ್ಲಿ ಯಾವುದೇ ಪಾತ್ರವಿಲ್ಲ ಎಂದು ನಿರಾಕರಿಸಿತ್ತು. ಸೈಬರ್ ಹ್ಯಾಕ್ ನಡೆದಿದ್ದು, ದಾಳಿ ಹೊಣೆ ಹೊತ್ತುಕೊಂಡಿದ್ದೇವೆಂದು ಪೋಸ್ಟ್ ಮಾಡಲಾಗಿದೆ ಎಂದು ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...