ಅಮೆರಿಕದ ಕಟ್ಟಡದಲ್ಲಿ ಬೆಂಕಿ ಅವಘಡ: ಭಾರತೀಯ ಮೂಲದ ಯುವಕ ಸಾವು

Date:

ಅಮೆರಿಕದ ನ್ಯೂಯಾರ್ಕ್‌ನ ಹಾರ್ಲೆಮ್ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಭಾರತೀಯ ಮೂಲದ ಯುವಕನೊಬ್ಬ ಮೃತಪಟ್ಟಿದ್ದಾನೆ.

ಮೃತ ಯುವಕ 27 ವರ್ಷದ ಫಾಜಿಲ್ ಖಾನ್‌ ಎಂದು ಭಾರತೀಯ ರಾಯಭಾರಿ ಕಚೇರಿ ಗುರುತಿಸಿದ್ದು, ಕಚೇರಿಯ ಸಿಬ್ಬಂದಿ ಯುವಕನ ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ.

ಹಾರ್ಲೆಮ್ ವಸತಿ ಕಟ್ಟಡದಲ್ಲಿ ಇ-ಬೈಕ್‌ನ ಬ್ಯಾಟರಿ ಸ್ಪೋಟಗೊಂಡು ದುರಂತ ಸಂಭವಿಸಿದೆ ಎಂದು ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಖಾನ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಖಾನ್‌ ಅವರ ಪಾರ್ಥೀವ ಶರೀರವನ್ನು ಭಾರತಕ್ಕೆ ತಲುಪಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದೆ.

“ನ್ಯೂಯಾರ್ಕ್‌ನ ಹಾರ್ಲೆಮ್ ವಸತಿ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ದುರಂತದಿಂದಾಗಿ 27 ವರ್ಷದ ಭಾರತೀಯ ಪ್ರಜೆ ಫಾಜಲ್ ಖಾನ್ ಮೃತಪಟ್ಟಿರುವುದು ಅತ್ಯಂತ ದುಃಖಕರವಾಗಿದೆ. ಭಾರತದ ರಾಯಭಾರ ಕಚೇರಿಯು ಫಾಜಲ್ ಖಾನ್ ಅವರ ಕುಟುಂಬ ಹಾಗೂ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದೆ. ಭಾರತಕ್ಕೆ ಆತನ ಮೃತದೇಹವನ್ನು ಮರಳಿಸಲು ನಾವು ಎಲ್ಲ ರೀತಿಯ ನೆರವು ನೀಡುತ್ತೇವೆ” ಎಂದು ಭಾರತೀಯ ರಾಯಭಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಖಾನ್‌ ಕೊಲಂಬಿಯಾ ಜರ್ನಲಿಸಂ ಶಾಲೆಯ ಪದವೀಧರನಾಗಿದ್ದು,ಕಟ್ಟಡದ ಕೊನೆಯ ಮಹಡಿಯಲ್ಲಿರುವಾಗ ದುರಂತ ಸಂಭವಿಸಿದೆ.ಘಟನೆಯಲ್ಲಿ 17 ಇತರ ಮಂದಿ ಕೂಡ ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...