ರಷ್ಯಾ ಉಕ್ರೇನ್ ಯುದ್ಧ: ರಷ್ಯಾ ಸೇನಾ ಶಿಬಿರದಲ್ಲಿದ್ದ ಭಾರತೀಯ ಶೆಲ್ ದಾಳಿಗೆ ಬಲಿ

Date:

ರಷ್ಯಾ ಉಕ್ರೇನ್ ಯುದ್ಧದ ನಡುವೆ ರಷ್ಯಾದ ಮಿಲಿಟರಿ ಶಿಬಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯರೊಬ್ಬರು ಬಲಿಯಾಗಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

36 ವರ್ಷದ ಸಂದೀಪ್ ತ್ರಿಶೂರ್ ಜಿಲ್ಲೆಯ ತ್ರಿಕ್ಕೂರ್ ಪಂಚಾಯತ್‌ನ ನಾಯರಂಗಡಿ ಮೂಲದವರಾಗಿದ್ದರು. ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ಅವರು ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡಲು ಏಪ್ರಿಲ್‌ನಲ್ಲಿ ರಷ್ಯಾಕ್ಕೆ ತೆರಳಿದ್ದರು.

“ಎರಡು ದಿನಗಳ ಹಿಂದೆ, ತ್ರಿಶೂರ್‌ನ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ಮಲಯಾಳಿ ಸಂಘದಿಂದ ನಮಗೆ ಸಂದೇಶ ಬಂದಿತ್ತು. ಈ ರಷ್ಯಾದ ಮಿಲಿಟರಿ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವುದಾಗಿ ಉಲ್ಲೇಖಿಸಲಾಗಿತ್ತು. ಮೃತ ವ್ಯಕ್ತಿಯನ್ನು ಗುರುತಿಸಲು ಸಂಘವು ಬಯಸಿತ್ತು. ನಂತರ, ನಾವು ವಿವರಗಳನ್ನು ಪರಿಶೀಲಿಸಿದ್ದೇವೆ ಮತ್ತು ಅದು ಸಂದೀಪ್ ಎಂದು ತಿಳಿಯಿತು” ಎಂದು ಸಂದೀಪ್ ಅವರ ಸೋದರಸಂಬಂಧಿ ಸರಣ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಉಕ್ರೇನ್ ಯುದ್ಧ | ರಷ್ಯಾ ಸೇನೆಯಲ್ಲಿದ್ದ ಭಾರತೀಯ ಯುವಕ ಸಾವು: ಬಲವಂತದ ನೇಮಕಾತಿ ಆರೋಪ

ಇತ್ತೀಚೆಗೆ ಸಂದೀಪ್ ಜತೆ ಸಂಪರ್ಕ ಕಳೆದುಕೊಂಡಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. “ಸಂದೀಪ್ ಮಾಸ್ಕೋದಲ್ಲಿ ಉದ್ಯೋಗಿಯಾಗಿದ್ದ. ಒಂದು ತಿಂಗಳ ಸಂಬಳವನ್ನು ಮನೆಗೆ ಕಳುಹಿಸಿದ್ದ. ಒಂದು ತಿಂಗಳ ನಂತರ, ಅಪರೂಪವಾಗಿ ಕುಟುಂಬದ ಸಂಪರ್ಕಕ್ಕೆ ಸಿಗುತ್ತಿದ್ದರು. ಅವರನ್ನು ಮಾಸ್ಕೋದಿಂದ ಹೊರಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿತ್ತು. ಉಕ್ರೇನ್ ಪಡೆಗಳ ದಾಳಿಗೆ ತುತ್ತಾದ ಸೇನಾ ಕ್ಯಾಂಟೀನ್‌ನಲ್ಲಿ ಸಂದೀಪ್ ಕೂಡಾ ಇದ್ದ ಎಂದು ನಂತರ ನಮಗೆ ತಿಳಿಯಿತು” ಎಂದು ಸರನ್ ತಿಳಿಸಿದ್ದಾರೆ.

ಸಂದೀಪ್ ವಿವಾಹಿತರಲ್ಲ. ಅವರು ತನ್ನ ತಂದೆ ಚಂದ್ರನ್ ಮತ್ತು ತಾಯಿ ವಲ್ಸಲಾ ಅವರನ್ನು ಅಗಲಿದ್ದಾರೆ. ಇವರ ತಂದೆ ತಾಯಿ ಇಬ್ಬರೂ ಕೃಷಿ ಕಾರ್ಮಿಕರಾಗಿದ್ದಾರೆ. ಸಂದೀಪ್ ಮೃತದೇಹವನ್ನು ಕೇರಳಕ್ಕೆ ತರಲು ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಮಧ್ಯಸ್ಥಿಕೆಗಾಗಿ ಕುಟುಂಬವು ಕಾಯುತ್ತಿದೆ ಎಂದು ಸರನ್ ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...