ರಸ್ತೆ ಅಪಘಾತದಲ್ಲಿ ಪ್ರಾಧ್ಯಾಪಕರ ಸಾವು: ಸಿಂಗಾಪುರದಲ್ಲಿ ಭಾರತೀಯ ಪ್ರಜೆಗೆ ಜೈಲು ಶಿಕ್ಷೆ, ದಂಡ

Date:

2023ರಲ್ಲಿ ರಸ್ತೆ ಅಪಘಾತದಲ್ಲಿ ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ(NUS) ಹಿರಿಯ ಕಾನೂನು ಪ್ರಾಧ್ಯಾಪಕರ ಸಾವಿಗೆ ಕಾರಣವಾದ ಆರೋಪದ ಮೇಲೆ ಸಿಂಗಾಪುರ ನ್ಯಾಯಾಲಯವು ಶುಕ್ರವಾರ ಭಾರತೀಯ ಪ್ರಜೆಯೊಬ್ಬರಿಗೆ ಎರಡು ವರ್ಷ, ಒಂದು ತಿಂಗಳ ಜೈಲು ಶಿಕ್ಷೆ ಮತ್ತು SGD2,000 ದಂಡ ವಿಧಿಸಿದೆ.

2023ರ ಜುಲೈ 7ರಂದು ನಿರ್ಮಾಣ ಕೆಲಸಗಾರ ನಟರಾಜನ್ ಮೋಹನರಾಜ್(28) ಲಾರಿ ಚಾಲನೆ ಮಾಡುವಾಗ ತನ್ನ ಮೊಬೈಲ್ ಫೋನ್ ಬಳಸಿದ್ದರು. ಈ ವೇಳೆ ಲಾರಿ ನಿಯಂತ್ರಣ ತಪ್ಪಿ ಎಮೆರಿಟಸ್ ಪ್ರೊಫೆಸರ್ ಟಾನ್ ಯೋಕ್ ಲಿನ್ (70) ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಭಾರೀ ಪ್ರತಿಭಟನೆಯಾದರೆ ಮಾತ್ರ ತ್ವರಿತ ವಿಚಾರಣೆಯೇ?!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ತೀವ್ರವಾಗಿ ಗಾಯಗೊಂಡಿದ್ದ ಅವರು ಕೆಲವು ದಿನಗಳ ನಂತರ ನಿಧನರಾದರು. ನಟರಾಜನ್ ಈ ಹಿಂದೆಯೂ ಅಜಾಗರೂಕರಾಗಿ ವಾಹನ ಚಲಾಯಿಸುತ್ತಿದ್ದರು ಎಂದು ಹೇಳಲಾಗಿದೆ.

2023ರ ಜೂನ್ ತಿಂಗಳಲ್ಲಿ ನಾಗರಾಜನ್‌ಗೆ ನೋಟಿಸ್ ಹೊರಡಿಸಿದ್ದ ಸಂಚಾರ ಪೊಲೀಸರು ಜುಲೈ 25ರ ಮೊದಲು ತನ್ನ ಪರವಾನಗಿಯನ್ನು ಹಿಂದಿರುಗಿಸುವಂತೆ ನೋಟಿಸ್ ನೀಡಿದ್ದರು. ಆದರೆ ಈ ನಡುವೆ ಜುಲೈ 7ರಂದು ಅಪಘಾತ ನಡೆದಿದೆ.

ಇನ್ನು ಅಪಘಾತದ ಬಳಿಕ ನಟರಾಜನ್ ಅವರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಆದರೂ 2024ರಲ್ಲಿ ಎರಡು ಬಾರಿ ನಟರಾಜನ್ ಲಾರಿ ಓಡಿಸುವುದು ಕಂಡುಬಂದಿದೆ. ಹಾಗೆಯೇ ಹಲವು ಆರೋಪಗಳಲ್ಲಿ ತಪ್ಪೊಪ್ಪಿಕೊಂಡಿದ್ದರು.

ನ್ಯಾಯಾಲಯವು ನಟರಾಜನ್ ಜೀವಮಾನವಿಡೀ ವಾಹನ ಚಲಾಯಿಸುವುದನ್ನು ನಿಷೇಧಿಸಿದೆ ಎಂದು ಸಿಂಗಾಪುರ ದಿನಪತ್ರಿಕೆ ತನ್ನ ವರದಿಯಲ್ಲಿ ತಿಳಿಸಿದೆ. ನಾಗರಾಜನ್ ಸಿಂಗಾಪುರದಲ್ಲಿ ಯಾವುದೇ ಮೋಟಾರು ವಾಹನವನ್ನು ಓಡಿಸುವುದನ್ನು ಸಹ ನಿಷೇಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...