ಅಮೆರಿಕ | ಗುಜರಾತ್ ಮೂಲದ ತಂದೆ, ಪುತ್ರಿಗೆ ಗುಂಡಿಕ್ಕಿ ಹತ್ಯೆ

Date:

ಅಮೆರಿಕದ ವರ್ಜೀನಿಯಾದಲ್ಲಿರುವ ಡಿಪಾರ್ಟ್‌ಮೆಂಟಲ್ ಸ್ಟೋರ್ ಒಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 56 ವರ್ಷದ ಭಾರತೀಯ ವ್ಯಕ್ತಿ ಮತ್ತು ಅವರ 24 ವರ್ಷದ ಪುತ್ರಿ ಸಾವನ್ನಪ್ಪಿದ್ದಾರೆ. ಅಕೋಮ್ಯಾಕ್ ಕೌಂಟಿಯಲ್ಲಿ ಸ್ಟೋರ್ ತೆರೆದ ಕೊಂಚ ಸಮಯದಲ್ಲೇ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಜಾರ್ಜ್ ಫ್ರೇಜಿಯರ್ ಡೆವೊನ್ ವಾರ್ಟನ್ (44) ಎಂಬವರನ್ನು ಬಂಧಿಸಿದ್ದಾರೆ. ವರದಿಗಳ ಪ್ರಕಾರ ಆರೋಪಿ ಗುರುವಾರ ಮುಂಜಾನೆ ಮದ್ಯ ಖರೀದಿಸಲೆಂದು ಅಂಗಡಿಗೆ ಬಂದಿದ್ದು, ರಾತ್ರಿ ಯಾಕೆ ಅಂಗಡಿ ಮುಚ್ಚಿತ್ತು ಎಂದು ಕೇಳಿದ್ದಾನೆ. ಬಳಿಕ ತಂದೆ-ಮಗಳ ಮೇಲೆ ಗುಂಡು ಹಾರಿಸಿದ್ದಾನೆ.

ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ| ಚಾಕುವಿನಿಂದ ಇರಿದು ಹತ್ಯೆ ಪ್ರಕರಣ, ಇಬ್ಬರು ಭಾರತೀಯರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಂಡಿನ ದಾಳಿಯಿಂದಾಗಿ ಪ್ರದೀಪ್ ಪಟೇಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪುತ್ರಿ ಉರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರದೀಪ್ ಪಟೇಲ್, ಅವರ ಪತ್ನಿ ಹಂಸಬೆನ್ ಮತ್ತು ಅವರ ಮಗಳು ಉರ್ಮಿ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯವರಾಗಿದ್ದು, ಆರು ವರ್ಷಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು ಎಂದು ಹೇಳಲಾಗಿದೆ.

ಈ ಕುಟುಂಬವು ತಮ್ಮ ಸಂಬಂಧಿ ಪರೇಶ್ ಪಟೇಲ್ ಒಡೆತನದ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ವರ್ಜಿನಿಯಾದ ಮಾಧ್ಯಮಕ್ಕೆ ಮಾಹಿತಿ ನೀಡಿದ ಪರೇಶ್ ಪಟೇಲ್, “ನನ್ನ ಸೋದರಸಂಬಂಧಿಯ ಪತ್ನಿ ಮತ್ತು ಅವಳ ತಂದೆ ಇಂದು ಬೆಳಿಗ್ಗೆ ಕೆಲಸ ಮಾಡುತ್ತಿದ್ದರು. ಯಾರೋ ಇಲ್ಲಿಗೆ ಬಂದು ಗುಂಡು ಹಾರಿಸಿದ್ದಾರೆ. ಏನು ಮಾಡಬೇಕೆಂದು ನನಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕುವೈತ್ ಅಗ್ನಿ ದುರಂತ| ಮೂವರು ಭಾರತೀಯರು, ನಾಲ್ವರು ಈಜಿಪ್ಟ್ ಪ್ರಜೆಗಳ ಬಂಧನ

ಪ್ರದೀಪ್ ಪಟೇಲ್ ಮತ್ತು ಹಂಸಬೆನ್ ಅವರಿಗೆ ಇನ್ನೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಒಬ್ಬರು ಕೆನಡಾದಲ್ಲಿ ವಾಸಿಸುತ್ತಿದ್ದಾರೆ, ಇನ್ನೊಬ್ಬರು ಅಹಮದಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ. ಆರೋಪಿ ವಾರ್ಟನ್ ವಿರುದ್ಧ ಕೊಲೆ, ಅಪರಾಧ, ಶಸ್ತ್ರಾಸ್ತ್ರ ಕಾನೂನು ಸೇರಿದಂತೆ ಹಲವು ವಿಭಾಗಗಳ ಪ್ರಕರಣಗಳನ್ನು ದಾಖಲಿಸಲಾಗಿದೆ.

“ವೈರಲ್ ವೀಡಿಯೊದಿಂದ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂಬ ಮಾಹಿತಿ ನಮಗೆ ತಿಳಿಯಿತು. ನಾವು ಅವರ ಮಗಳೊಂದಿಗೆ ಮಾತನಾಡಿದ್ದು, ಆಕೆ ಎಲ್ಲಾ ಮಾಹಿತಿ ನೀಡಿದಳು” ಎಂದು ಮೆಹ್ಸಾನಾದಲ್ಲಿರುವ ಪಟೇಲ್ ಕುಟುಂಬಸ್ಥರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...