ಅತ್ಯಾಚಾರ ಪ್ರಕರಣ | ಭಾರತೀಯ ಮೂಲದ ನ್ಯೂಜಿಲೆಂಡ್‌ನ ಊಬರ್ ಚಾಲಕನಿಗೆ 8 ವರ್ಷ ಜೈಲು

Date:

16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ದೋಷಿಯೆಂದು ತೀರ್ಪು ನೀಡಿದ ನ್ಯೂಜಿಲೆಂಡ್ ನ್ಯಾಯಾಲಯ ಭಾರತೀಯ ಮೂಲದ ಉಬರ್ ಚಾಲಕ ಸತ್ವಂದರ್ ಸಿಂಗ್‌ (37)ಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಆರೋಪಿಯ ವಕೀಲರು “ಸಿಖ್ ಧರ್ಮದ ನಿಯಮಗಳ ಪ್ರಕಾರ ಕೇಶವನ್ನು ಕತ್ತರಿಸಲಾಗದು, ಗಡ್ಡ ಬಿಡಲೇ ಬೇಕು. ಜೈಲಿನಲ್ಲಿ ಇದು ಕಷ್ಟ” ಎಂದು ಶಿಕ್ಷಾ ಸಡಿಲಿಕೆಗೆ ಮನವಿ ಮಾಡಿದ್ದರು. ಆದರೆ ಈ ವಾದವನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ.

2023ರ ಆಗಸ್ಟ್‌ನಲ್ಲಿ ಆಕ್ಲ್ಯಾಂಡ್‌ನಲ್ಲಿ ನಡೆದ ಈ ಘಟನೆಯಲ್ಲಿ ರಾತ್ರಿ ವೇಳೆ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ಚಾಲಕ ಸತ್ವಂದರ್ ಸಿಂಗ್‌ ತನ್ನ ಕಾರಿನಲ್ಲಿ ಅಪಹರಿಸಿ, ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿಯು ತೀವ್ರ ಹೋರಾಟ ಮಾಡಿದರೂ ಆತ ಆಕೆಯನ್ನು ಬೆದರಿಕೆ ಹಾಕಿ ನಿಗ್ರಹಿಸಿದ್ದಾನೆ ಎಂದು ತನಿಖೆಯಲ್ಲಿ ಬಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿ.6 – ಭಾರತದ ಜಾತ್ಯತೀತ ಇತಿಹಾಸದ ಕರಾಳ ದಿನ

ನ್ಯಾಯಾಲಯದಲ್ಲಿ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದರೂ, ಶಿಕ್ಷೆಯ ಪ್ರಮಾಣ ನಿರ್ಧರಿಸುವ ಸಂದರ್ಭದಲ್ಲಿ ಧಾರ್ಮಿಕ ಕಾರಣಗಳನ್ನು ಮುಂದಿಟ್ಟು ಕಾರಾಗೃಹದ ಬದಲು ‘ಹೋಮ್ ಡಿಟೆನ್ಷನ್’ ಅಥವಾ ಕಡಿಮೆ ಶಿಕ್ಷೆ ನೀಡಬೇಕೆಂದು ವಕೀಲರು ವಾದಿಸಿದ್ದರು. ಆದರೆ ನ್ಯಾಯಮೂರ್ತಿಗಳು “ಅಪರಾಧದ ತೀವ್ರತೆ, ಬಾಲಕಿಯ ಮೇಲಾದ ದುಷ್ಪರಿಣಾಮ ಮತ್ತು ಸಮಾಜದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ರಿಯಾಯಿತಿ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...