ತಾಯಿಗೆ ಅನಾರೋಗ್ಯ: ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ಬೆಂಗಳೂರಿಗೆ ಬರಲು ವಿಸಾ ನಿರಾಕರಣೆ

Date:

ಬೆಂಗಳೂರಿನಲ್ಲಿರುವ ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗಲು ಭಾರತ ಸರಕಾರ ವಿಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಹೇಳಿದ್ದಾರೆ.

ಅಮೆರಿಕದಲ್ಲಿ ನೆಲೆಸಿರುವ ಕ್ಷಮಾ ಸಾವಂತ್ ಅವರು 2014 ರಿಂದ 2023ರವರೆಗೆ ಸಿಯಾಟಲ್ ನಗರ ಮಂಡಳಿಯ ಪ್ರತಿನಿಧಿಯಾಗಿ ಚುನಾಯಿತರಾಗಿದ್ದರು. ಅವರು ಸಿಯಾಟಲ್ ನಗರ ಮಂಡಳಿಯಲ್ಲಿ ಮಂಡಿಸಿದ ಜಾತಿ ತಾರತಮ್ಯ ನಿಷೇಧ ನಿರ್ಣಯವನ್ನು ಅಂಗೀಕರಿಸಲಾಗಿತ್ತು. ಇದರೊಂದಿಗೆ 2023 ಫೆಬ್ರವರಿಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸಿದ ಅಮೆರಿಕದ ಮೊದಲ ನಗರ ಎಂಬ ಹೆಗ್ಗಳಿಕೆಗೆ ಸಿಯಾಟಲ್ ಪಾತ್ರವಾಗಿತ್ತು.

ತನ್ನ ವಿಸಾ ನಿರಾಕರಣೆಯನ್ನು ಬಿಜೆಪಿ ಸರಕಾರದ ರಾಜಕೀಯ ಪ್ರತೀಕಾರ ಎಂದು ಸಾವಂತ್ ಹೇಳಿದ್ದಾರೆ. ಭಾರತ ಸರಕಾರದ ಈ ನಡೆಯ ವಿರುದ್ಧ ಪ್ರತಿಭಟಿಸಿ ಅವರು ಅನ್‌ಲೈನ್ ದೂರು ಅಭಿಯಾನ ಆರಂಭಿಸಿದ್ದಾರೆ. ‘‘ಭಾರತಕ್ಕೆ ಪ್ರವೇಶಿಸುವುದನ್ನು ರದ್ದುಗೊಳಿಸುವ ಹಾಗೂ ನಿರಾಕರಿಸುವ ಮೂಲಕ ಮೋದಿ ಇತರ ಹೋರಾಟಗಾರರು ಹಾಗೂ ಪತ್ರಕರ್ತರ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದ್ದಾರೆ. ನನ್ನ 82 ವರ್ಷದ ತಾಯಿಯ ಆರೋಗ್ಯ ತೀವ್ರವಾಗಿ ಕುಸಿಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ

‘‘ಮಾನವೀಯ ನೀತಿಯನ್ನು ಅನುಸರಿಸುವಂತೆ ನಾವು ಮೋದಿ ಸರಕಾರವನ್ನು ಆಗ್ರಹಿಸುತ್ತೇವೆ. ಕ್ಷಮಾ ಅವರ ತಾಯಿಯನ್ನು ನೋಡಲು ಭಾರತಕ್ಕೆ ಪ್ರಯಾಣಿಸಲು ಸಾಧ್ಯವಾಗುವಂತೆ ಕ್ಷಮಾ ಸಾವಂತ್ ಹಾಗೂ ಅವರ ಪತಿ ಕೆಲ್ವಿನ್ ಪ್ರಿಯೆಸ್ಟ್‌ಗೆ ತುರ್ತಾಗಿ ವಿಸಾ ಮಂಜೂರು ಮಾಡಿ’’ ಆನ್‌ಲೈನ್ ದೂರಿನಲ್ಲಿ ಹೇಳಲಾಗಿದೆ.

‘‘ಅವರ ಅಧಿಕಾರದ ಅವಧಿಯಲ್ಲಿ ಮೋದಿ ಹಾಗೂ ಬಿಜೆಪಿ ಸರಕಾರದ ಮುಸ್ಲಿಂ ವಿರೋಧಿ, ಬಡವರ ವಿರೋಧಿ ಸಿಎಎ-ಎನ್‌ಆರ್‌ಸಿ (ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಿದ್ದರು. ಅಲ್ಲದೆ, ಮೋದಿ ಅವರ ಕ್ರೂರ ಹಾಗೂ ಶೋಷಕ ನೀತಿಯ ವಿರುದ್ಧದ ರೈತರ ಚಳುವಳಿಗೆ ಬೆಂಬಲ ವ್ಯಕ್ತಪಡಿಸಿದ್ದರು’’ ಎಂದು ದೂರಿನಲ್ಲಿ ಹೇಳಲಾಗಿದೆ.

ಪುಣೆ ಹಾಗೂ ಮುಂಬೈನಲ್ಲಿ ಬಾಲ್ಯ, ಶಿಕ್ಷಣ ಪೂರೈಸಿದ ಕ್ಷಮಾ ವಸಂತ್‌ ಅವರು ಉದ್ಯೋಗದ ನಿಮಿತ್ತ ಅಮೆರಿಕಕ್ಕೆ ತೆರಳಿದ್ದರು.2014 ರಿಂದ ಸಿಯಾಟಲ್ ನಗರ ಮಂಡಳಿಯ ಪ್ರತಿನಿಧಿಯಾಗಿ ಚುನಾಯಿತರಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...