ಆಸ್ಟ್ರೇಲಿಯಾ| ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿಯ ಹತ್ಯೆ

Date:

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಸೋಮವಾರ ಹೇಳಿದ್ದಾರೆ.

ಮೆಲ್ಬೋರ್ನ್‌ನಲ್ಲಿ ಸ್ಥಳೀಯ ಕಾಲಮಾನ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದ ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ ಎಂದೂ ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಯಶ್ವೀರ್ ಮಾಹಿತಿ ನೀಡಿದ್ದಾರೆ.

ಬಾಡಿಗೆ ವಿಚಾರದಲ್ಲಿ ಭಾರತೀಯ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯುತ್ತಿದ್ದಾಗ ನವಜೀತ್ ಸಂಧು ಎಂಬ ವಿದ್ಯಾರ್ಥಿ ಮಧ್ಯಪ್ರವೇಶ ಮಾಡುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ವಿದ್ಯಾರ್ಥಿಯೋರ್ವ ಚಾಕುವಿನಿಂದ ಇರಿದಿದ್ದಾನೆ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

“ನವಜೀತ್‌ನ ಬಳಿ ಕಾರು ಇತ್ತು, ಅದರಿಂದಾಗಿ ಆತನ ಸ್ನೇಹಿತ (ಮತ್ತೊಬ್ಬ ಭಾರತೀಯ ವಿದ್ಯಾರ್ಥಿ) ನವಜೀತ್ ಜೊತೆಗಿದ್ದ. ಸ್ನೇಹಿತ ಒಳಗೆ ಹೋದಾಗ, ನವಜೀತ್‌ಗೆ ಕೂಗಾಟ ಕೇಳಿಬಂದಿದೆ. ಗಲಾಟೆ ನೋಡಿ ಜಗಳ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭದಲ್ಲಿ ನವಜೀತ್ ಎದೆಗೆ ಚಾಕುವಿನಿಂದ ಮಾರಣಾಂತಿಕವಾಗಿ ಇರಿದಿದ್ದಾನೆ” ಎಂದು ಯಶ್ವಿರ್ ಹೇಳಿದರು.

“ನವಜೀತ್ ಹಾಗೂ ಆರೋಪಿ ಇಬ್ಬರೂ ಕೂಡಾ ಕರ್ನಾಲ್ ಮೂಲದವರು. ಭಾನುವಾರ ಮುಂಜಾನೆ ಈ ಘಟನೆಯ ಬಗ್ಗೆ ಕುಟುಂಬಕ್ಕೆ ಮಾಹಿತಿ ಲಭಿಸಿದೆ. ಘಟನೆಯಲ್ಲಿ ನವಜೀತ್ ಅವರ ಜೊತೆಗಿದ್ದ ಸ್ನೇಹಿತನಿಗೂ ಗಾಯಗಳಾಗಿವೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ?   ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಓಹಿಯೋದಲ್ಲಿ ಶವವಾಗಿ ಪತ್ತೆ: ಈ ವರ್ಷದಲ್ಲಿ 11ನೇ ಪ್ರಕರಣ

“ಕುಟುಂಬ ಈಗ ಆಘಾತಕ್ಕೆ ಒಳಗಾಗಿದೆ. ನವಜೀತ್ ಉತ್ತಮ ವಿದ್ಯಾರ್ಥಿ, ಜುಲೈನಲ್ಲಿ ರಜೆಯಿದ್ದು ಭಾರತಕ್ಕೆ ಬರಲಿದ್ದ. ನವಜೀತ್ ಒಂದೂವರೆ ವರ್ಷಗಳ ಹಿಂದೆ ಸ್ಟಡಿ ವೀಸಾದ ಮೇಲೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಕೃಷಿಕರಾಗಿರುವ ನವಜೀತ್ ತಂದೆ ಶಿಕ್ಷಣಕ್ಕಾಗಿ ತಮ್ಮ ಒಂದೂವರೆ ಎಕರೆ ಜಮೀನನ್ನು ಮಾರಾಟ ಮಾಡಿದ್ದರು” ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಯಶ್ವೀರ್ ಬೇಸರ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಆದಷ್ಟು ಬೇಗ ಮೃತದೇಹವನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...