ಅಮೆರಿಕ | ಕೌಟುಂಬಿಕ ಕಲಹಕ್ಕೆ ನಾಲ್ವರು ಭಾರತೀಯರು ಬಲಿ; ಗುಂಡಿಕ್ಕಿದ ಆರೋಪಿ ಬಂಧನ

Date:

ಅಮೆರಿಕದ ಜಾರ್ಜಿಯಾ ರಾಜ್ಯದ ಲಾರೆನ್ಸ್‌ವಿಲ್ಲೆ ನಗರದಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಈ ಹತ್ಯಾಕಾಂಡ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ಮುಂಜಾನೆ ಸುಮಾರು 2.30ರ ಸುಮಾರಿಗೆ ಲಾರೆನ್ಸ್‌ವಿಲ್ಲೆಯ ಬ್ರೂಕ್ ಐವಿ ಕೋರ್ಟ್ ಪ್ರದೇಶದ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿ ವಿಜಯ್ ಕುಮಾರ್ (51) ಎಂಬಾತ ತನ್ನ ಪತ್ನಿ ಮತ್ತು ಮೂವರು ಸಂಬಂಧಿಕರ ಮೇಲೆ ಗುಂಡಿನ ಸುರಿಮಳೆಗೈದಿದ್ದಾನೆ. ಅಟ್ಲಾಂಟಾದಲ್ಲಿರುವ ಭಾರತೀಯ ದೂತಾವಾಸ ಕಚೇರಿಯು ಈ ಘಟನೆಯನ್ನು ದೃಢಪಡಿಸಿದ್ದು, ಮೃತರ ಕುಟುಂಬಕ್ಕೆ ನೆರವು ನೀಡುವುದಾಗಿ ತಿಳಿಸಿದೆ.

ಇದನ್ನು ಒದಿದ್ದೀರಾ? ಈ ದಿನ ಸಂಪಾದಕೀಯ | ರಾಜಭವನಗಳು ರಾಜಕೀಯ ಪಕ್ಷಪಾತದ ನೆಲೆವೀಡು; ರಾಜ್ಯಪಾಲ ಹುದ್ದೆಯ ಮರುವಿಮರ್ಶೆ ನಡೆಯಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯ ಪತ್ನಿ ಮೀಮು ಡೋಗ್ರಾ (43), ​ಸಂಬಂಧಿಕರಾದ ಗೌರವ್ ಕುಮಾರ್ (33), ​ನಿಧಿ ಚಂದರ್ (37), ​ಹರೀಶ್ ಚಂದರ್ (38) ಮೃತರು. ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗುಂಡಿನ ದಾಳಿ ನಡೆದ ಸಮಯದಲ್ಲಿ ಮನೆಯೊಳಗೆ ಮೂವರು ಮಕ್ಕಳು ಇದ್ದರು. ಘಟನೆಯಿಂದ ಭಯಭೀತರಾದ ಮಕ್ಕಳು ಪ್ರಾಣ ಉಳಿಸಿಕೊಳ್ಳಲು ಮನೆಯೊಳಗಿನ ಕಪಾಟಿನಲ್ಲಿ ಅಡಗಿಕೊಂಡಿದ್ದರು. ಈ ಪೈಕಿ ಒಂದು ಮಗು ಧೈರ್ಯ ಪ್ರದರ್ಶಿಸಿ 911 ತುರ್ತು ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ಸದ್ಯ ಅವರು ಸಂಬಂಧಿಕರ ಆಶ್ರಯದಲ್ಲಿದ್ದಾರೆ. ಘಟನಾ ಸ್ಥಳದಲ್ಲೇ ಆರೋಪಿ ವಿಜಯ್ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ಧ ಗಂಭೀರ ಪ್ರಕರಣಗಳನ್ನು ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...