ಇಸ್ರೇಲ್-ಇರಾನ್‌ ಸಂಘರ್ಷ | ಟೆಹ್ರಾನ್‌ನಲ್ಲಿ ಭಾರತೀಯರು: ತಕ್ಷಣವೇ ರಾಯಭಾರಿ ಕಚೇರಿ ಸಂಪರ್ಕಿಸಲು ಸೂಚನೆ

Date:

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವವರು ನಗರವನ್ನು ತೊರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಕರೆಕೊಟ್ಟಿದ್ದಾರೆ. ಈ ಬೆನ್ನಲ್ಲೇ, ಇಸ್ರೇಲ್‌ ಕೂಡ ಶೀಘ್ರವೇ ಟೆಹ್ರಾನ್ ತೊರೆಯಿರಿ ಎಂದಿದ್ದು, ಟೆಹ್ರಾನ್‌ ಮೇಲೆ ದಾಳಿ ನಡೆಸುವ ಸೂಚನೆ ನೀಡಿದೆ. ಹೀಗಾಗಿ, ಇರಾನ್‌ನ ರಾಜಧಾನಿಯಲ್ಲಿರುವವರು ನಗರವನ್ನು ತೊರೆಯುತ್ತಿದ್ದಾರೆ. ಅಲ್ಲಿ, ಭಾರತೀಯರು ಕೂಡ ಸಿಲುಕಿಕೊಂಡಿದ್ದು, ಅವರೆಲ್ಲರೂ ಭಾರತೀಯ ರಾಯಭಾರಿ ಕಚೇರಿಯನ್ನು ತ್ವರಿತವಾಗಿ ಸಂಪರ್ಕಿಸುವಂತೆ ಸೂಚಿಸಲಾಗಿದೆ.

ಟೆಹ್ರಾನ್‌ನಲ್ಲಿರುವ ಎಲ್ಲ ಭಾರತೀಯ ಪ್ರಜೆಗಳು ತಕ್ಷಣವೇ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಬೇಕು. ತಮ್ಮ ಸ್ಥಳ ಮತ್ತು ಸಂಪರ್ಕ ಸಂಖ್ಯೆಗಳನ್ನು ಒದಗಿಸಬೇಕು ಎಂದು ಭಾರತೀಯ ರಾಯಭಾರ ಕಚೇರಿಯು ಮಂಗಳವಾರ ಘೋಷಿಸಿದೆ. ತಮ್ಮಲ್ಲಿರುವ ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಂಡು ಟೆಹರಾನ್‌ನಿಂದ ಹೊರಹೋಗಲು ಸಾಧ್ಯವಿರುವವರು ನಗರವನ್ನು ತೊರೆಯಬೇಕು. ಆಗದೇ ಇರುವವರು ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ನೆರವು ಪಡೆಯಬೇಕು ಎಂದು ಸಲಹೆ ನೀಡಿದೆ.

“ಭಾರತೀಯ ಪ್ರಜೆಗಳು ತಕ್ಷಣ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಲು +989010144557; +989128109115; +989128109109, ಟೋಲ್ ಫ್ರೀ ಸಂಖ್ಯೆ, 1800118797, ಅಥವಾ ವಾಟ್ಸ್‌ಆ್ಯಪ್ ಸಂಖ್ಯೆ +91-11-23012113, +91-11-23014104, +91-11-23017905 +91-9968291988 ಹಾಗೂ situationroom@mea.gov.in ಮೂಲಕ ಸಂಪರ್ಕಿಸಬಹುದು ಎಂದು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಇರಾನ್-ಇಸ್ರೇಲ್ ಸಂಘರ್ಷ ಶುರುವಾಗಿದ್ದು ಎಲ್ಲಿಂದ? ಇತಿಹಾಸದ ಹಿನ್ನೋಟ!

ಜೊತೆಗೆ, ಟೆಹರಾನ್‌ನ ತುರ್ತು ಸಹಾಯವಾಣಿ ಸಂಖ್ಯೆ: +98 9128109115, +98 9128109109; ವಾಟ್ಸ್‌ಆ್ಯಪ್ ಸಂಖ್ಯೆ: +98 901044557, +98 9015993320, +91 8086871709, +98 9177699036, +98 9396356649 ಸಂಖ್ಯೆಗಳ ಮೂಲಕವೂ ಸಂಪರ್ಕಿಸಬಹುದು ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...