ಭವಿಷ್ಯದ ನಗರ ಬೆಂಗಳೂರಿಗೆ ಬನ್ನಿ, ಬಂಡವಾಳ ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್

Date:

“ಬೆಂಗಳೂರು ಭವಿಷ್ಯದ ನಗರ. ಇಲ್ಲಿನ ಹವಾಗುಣ, ಸಂಸ್ಕೃತಿ, ಮಾನವ ಸಂಪನ್ಮೂಲ ಅತ್ಯುತ್ತಮವಾಗಿದೆ. ವಿಶ್ವದ ಅನೇಕ ಕಂಪನಿಗಳು ಇಲ್ಲಿ ಕೆಲಸ ಮಾಡಿ ಬೆಳೆಯುತ್ತಿವೆ. ನೀವೆಲ್ಲರೂ ಬೆಂಗಳೂರಿಗೆ ಬನ್ನಿ, ಬಂಡವಾಳ ಹೂಡಿಕೆ ಮಾಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವದ ಉದ್ಯಮಿಗಳಿಗೆ ಆಹ್ವಾನಿಸಿದರು.

ಬುಧವಾರ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದರು. “ಬೆಂಗಳೂರಿನಲ್ಲಿ ಅತ್ಯುತ್ತಮ ಮಾನವ ಸಂಪನ್ಮೂಲವಿದ್ದು, ವಿಶ್ವದ ಪ್ರತಿಷ್ಠಿತ 500 ಕಂಪನಿಗಳು ಬೆಂಗಳೂರಿನಲ್ಲಿವೆ. ಏರೋಸ್ಪೆಸ್, ಐಟಿ, ಮೆಡಿಕಲ್ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಇಲ್ಲಿನ ಮಾನವ ಸಂಪನ್ಮೂಲ ಕೌಶಲ್ಯ ಹೊಂದಿದೆ” ಎಂದರು.

ಇದನ್ನು ಓದಿದ್ದೀರಾ? ಬೆಂಗಳೂರು | ಸಾಂಪ್ರದಾಯಿಕ ಗರಡಿ ಮನೆಗೆ ಹೂಡಿಕೆ ಮಾಡಿದ ಕ್ರಿಕೆಟಿಗ ಧೋನಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿ 70 ಮೆಡಿಕಲ್ ಕಾಲೇಜುಗಳಿದ್ದು, ಪ್ರತಿವರ್ಷ 1.50 ಲಕ್ಷ ಆರೋಗ್ಯ ಕ್ಷೇತ್ರದ ಸಿಬ್ಬಂದಿ ತಯಾರಾಗುತ್ತಿದ್ದಾರೆ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು. ಎಲ್ಲರೂ ಒಟ್ಟಾಗಿ ಸೇರಿ ಪ್ರಗತಿಯತ್ತ ಸಾಗೋಣ” ಎಂದು ತಿಳಿಸಿದರು.

“ಭಾರತ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರತಿಭಾವಂತರ ದೇಶ. ನಮ್ಮ ದೇಶ ಮುಂದಿನ 25 ವರ್ಷಗಳಿಗೆ ತಯಾರಿ ನಡೆಸುತ್ತಿದೆ. ನಾನು ಬೆಂಗಳೂರಿನಿಂದ ಬಂದಿದ್ದು, ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಬೆಂಗಳೂರು ಏಷ್ಯಾದ ಐಟಿ ರಾಜಧಾನಿಯಾಗಿದೆ. ಭಾರತದಲ್ಲಿ ನಗರಗಳಲ್ಲಿನ ಜನಸಂಖ್ಯೆ ಸುಮಾರು ಶೇ.40ಕ್ಕೆ ತಲುಪಿದ್ದು, ಮುಂದಿನ 25 ವರ್ಷಗಳಲ್ಲಿ ಶೇ.50ಕ್ಕೆ ಏರಿಕೆಯಾಗುವ ನಿರೀಕ್ಷೆ ಇದೆ. ಇದಕ್ಕೆ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ” ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿ ಕೆ ಶಿವಕುಮಾರ್

“ಜಾಗತಿಕ ಐಟಿ ರಾಜಧಾನಿ ಕ್ಯಾಲಿಫೋರ್ನಿಯದಲ್ಲಿ 13 ಲಕ್ಷ ಇಂಜಿನಿಯರ್ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 25 ಲಕ್ಷ ಇಂಜಿನಿಯರಿಂಗ್ ವೃತ್ತಿಪರರು ಇದ್ದಾರೆ. ಇದು ಬೆಂಗಳೂರಿನ ಶಕ್ತಿ. ವಿಶ್ವದ ನಾಯಕರು ಹಾಗೂ ಉದ್ಯಮಿಗಳು ಬೆಂಗಳೂರಿನತ್ತ ಆಕರ್ಷಿತರಾಗಿದ್ದಾರೆ. ಹೀಗಾಗಿ ಬೆಂಗಳೂರಿನ ಸಂಚಾರ ಹಾಗೂ ಮೂಲಭೂತ ಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ” ಎಂದು ತಿಳಿಸಿದರು.

“ಮುಂದಿನ ವರ್ಷದ ವೇಳೆಗೆ ಬೆಂಗಳೂರಿನಲ್ಲಿ ಮೆಟ್ರೋ ಸಂಪರ್ಕ 153 ಕಿ.ಮೀ.ಗೆ ವಿಸ್ತರಣೆಯಾಗಲಿದೆ. ಇನ್ನು ಬೆಂಗಳೂರಿನ ಸಾರ್ವಜನಿಕ ಸಾರಿಗೆಯಲ್ಲಿ ಬಸ್ ವ್ಯವಸ್ಥೆ ಅತ್ಯುತ್ತಮವಾಗಿದೆ. 6000 ಬಸ್ ಗಳು ಬೆಂಗಳೂರಿನಲ್ಲಿದ್ದು, ಇದರಲ್ಲಿ 2500 ಎಲೆಕ್ಟ್ರಿಕ್ ಬಸ್‌ಗಳು ಇವೆ. ಕರ್ನಾಟಕದಲ್ಲಿ ದಕ್ಷ ಆಡಳಿತವಿದ್ದು, ಎಲ್ಲಾ ರೀತಿಯ ಸಹಕಾರ ನೀಡಲಾಗುವುದು” ಎಂದರು.

“ಕರ್ನಾಟಕದಲ್ಲಿ ಬೆಂಗಳೂರಿನ ಜತೆಗೆ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲೂ ಉತ್ತಮ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ನಾವು 2045ರ ಗುರಿ ಇಟ್ಟುಕೊಂಡು ಇಡೀ ರಾಜ್ಯದಲ್ಲಿ ಸಾರಿಗೆ ಸಂಪರ್ಕ ಅಭಿವೃದ್ಧಿಪಡಿಸಲಾಗುತ್ತಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...