ಪರಮಾಣು ಔಷಧಿಯಲ್ಲಿ ಮುಂಚೂಣಿಯಲ್ಲಿರುವ ಇರಾನ್: 10 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ

Date:

ಇರಾನ್ ತನ್ನ ನಾಗರಿಕ ಪರಮಾಣು ಕಾರ್ಯಕ್ರಮದ ಹೆಸರಿನಲ್ಲಿ ರಹಸ್ಯವಾಗಿ ಪರಮಾಣು ಶಸ್ತ್ರಾಸ್ತ್ರಗಳನ್ನು (ಅಣುಬಾಂಬ್) ತಯಾರಿಸಲು ಪ್ರಯತ್ನಿಸುತ್ತಿದೆ ಎಂಬುದು ಅಮೆರಿಕ ಮತ್ತು ಇಸ್ರೇಲ್‌ನ ಆರೋಪ. ತನ್ನ ಯುದ್ಧಕೋರತನವನ್ನು ಪ್ರದರ್ಶಿಸುತ್ತಾ ಅಮೆರಿಕ ಇರಾನ್ ಮೇಲೆ ದಾಳಿ ಮಾಡುತ್ತಾ ನೀಡಿದ ಕಾರಣಗಳೂ ಇವೇ ಆಗಿದೆ. ಆದರೆ ಪರಮಾಣುಗಳನ್ನು ಪರಮಾಣು ಔಷಧಿ ತಯಾರಿಕೆಗೆ ಬಳಸುತ್ತಿರುವುದಾಗಿ ಇರಾನ್ ನಿರಂತರವಾಗಿ ಹೇಳುತ್ತಲೇ ಬಂದಿದೆ. ಇತ್ತೀಚಿನ ವರ್ಷಗಳಲ್ಲಿ ಇರಾನ್ ರೇಡಿಯೋ ಫಾರ್ಮಾಸ್ಯುಟಿಕಲ್ಸ್ (Radiopharmaceuticals) ಉತ್ಪಾದನೆಯಲ್ಲಿ ವಿಶ್ವದ ಮೊದಲ ಮೂರು ದೇಶಗಳಲ್ಲಿ ಒಂದೆಂದು ಗುರುತಿಸಿಕೊಂಡಿದೆ.

ಇರಾನ್ ಇತ್ತೀಚಿನ ವರ್ಷಗಳಲ್ಲಿ ರೇಡಿಯೋ ಫಾರ್ಮಾಸ್ಯುಟಿಕಲ್ಸ್ ಉತ್ಪಾದನೆಯಲ್ಲಿ ಗಣನೀಯ ಸಾಧನೆ ಮಾಡಿದ್ದು, ವಿಶ್ವದ ಅಗ್ರಗಣ್ಯ ದೇಶಗಳ ಸಾಲಿನಲ್ಲಿ ನಿಂತಿದೆ. ಇರಾನ್‌ನ ಪರಮಾಣು ಶಕ್ತಿ ಸಂಸ್ಥೆಯ (AEOI) ಪ್ರಕಾರ, ದೇಶವು ದೇಶವು ಸುಮಾರು 50ಕ್ಕೂ ಹೆಚ್ಚು ವಿಧದ ರೇಡಿಯೋ ಫಾರ್ಮಾಸ್ಯುಟಿಕಲ್ ಉತ್ಪನ್ನಗಳನ್ನು ತಯಾರಿಸುತ್ತಿದೆ. ವಿಶೇಷವಾಗಿ ಅಂತಾರಾಷ್ಟ್ರೀಯ ನಿರ್ಬಂಧಗಳ ನಡುವೆಯೂ ಕ್ಯಾನ್ಸರ್ ಚಿಕಿತ್ಸೆ ಮತ್ತು ರೋಗನಿರ್ಣಯಕ್ಕಾಗಿ ಈ ಪರಮಾಣುಗಳನ್ನು ಬಳಸಿಕೊಳ್ಳುತ್ತಿದೆ.

ಇದನ್ನು ಓದಿದ್ದೀರಾ? ಇರಾನ್-ಇಸ್ರೇಲ್ ಸಂಘರ್ಷದಲ್ಲಿ ರಷ್ಯಾದ ಅಧ್ಯಕ್ಷ ಪುಟಿನ್ ಪಾತ್ರವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೆಹ್ರಾನ್ ರಿಸರ್ಚ್ ರಿಯಾಕ್ಟರ್ (TRR) ಇರಾನ್‌ನ ವೈದ್ಯಕೀಯ ರೇಡಿಯೊಐಸೋಟೋಪ್‌ಗಳ ಉತ್ಪಾದನೆಯ ಕೇಂದ್ರಬಿಂದುವಾಗಿದ್ದು ಕ್ಯಾನ್ಸರ್ ಪತ್ತೆ ಮತ್ತು ಚಿಕಿತ್ಸೆಗೆ ಅಗತ್ಯವಾದ ಐಸೋಟೋಪ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ. ಇನ್ನು ಬೋನಾಬ್ ಪರಮಾಣು ಸಂಶೋಧನಾ ಕೇಂದ್ರದಲ್ಲಿ ಕೃಷಿ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳು ನಡೆಯುತ್ತಿದೆ. ಹಾಗೆಯೇ ಇರಾನ್ ತನ್ನ ಈ ಔಷಧಿಗಳನ್ನು ಇರಾಕ್, ಲೆಬನಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಿಗೂ ರಫ್ತು ಮಾಡುತ್ತಿದೆ.

ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಗೆ ಇರಾನ್ ನಡೆಸುತ್ತಿರುವ ಉತ್ಪಾದನೆಗಳು

Molybdenum-99 / Technetium-99m: ಇದು ಜಗತ್ತಿನಾದ್ಯಂತ ರೋಗನಿರ್ಣಯಕ್ಕಾಗಿ (Diagnosis) ಬಳಸಲಾಗುವ ಅತ್ಯಂತ ಸಾಮಾನ್ಯ ರೇಡಿಯೊಐಸೋಟೋಪ್. ಹೃದಯ ಸಂಬಂಧಿ ಕಾಯಿಲೆ ಮತ್ತು ಕ್ಯಾನ್ಸರ್ ಹರಡುವಿಕೆಯನ್ನು ಪತ್ತೆಹಚ್ಚಲು ಇದನ್ನು ಬಳಸಲಾಗುತ್ತದೆ.

Iodine-131: ಥೈರಾಯ್ಡ್ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.

Lutetium-177: ಇದು ಇತ್ತೀಚಿನ ಅತ್ಯಾಧುನಿಕ ಚಿಕಿತ್ಸೆಯಾಗಿದ್ದು, ಪ್ರೊಸ್ಟೇಟ್ ಕ್ಯಾನ್ಸರ್ ಮತ್ತು ನರಕೋಶದ ಗೆಡ್ಡೆಗಳ (Neuroendocrine tumors) ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ.

ಇರಾನ್ ಅಣುಬಾಂಬ್ ತಯಾರಿಸುತ್ತಿದೆ ಎಂದು ಅಮೆರಿಕ, ಇಸ್ರೇಲ್ ಸಾಕಷ್ಟು ಬಾರಿ ಆರೋಪಿಸುತ್ತಾ ಬಂದಿದೆ. ಆದರೆ ಇರಾನ್ ನೇರವಾಗಿ ಅಣುಬಾಂಬ್ ತಯಾರಿಸುತ್ತಿದೆ ಎಂಬುದಕ್ಕೆ ಪ್ರಸ್ತುತ ಯಾವುದೇ ಅಧಿಕೃತ ಸಾಕ್ಷ್ಯಗಳಿಲ್ಲ ಎಂದು ಅಂತಾರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ (IAEA) ಹೇಳಿದೆ. ಆದರೂ ಅಮೆರಿಕ ಮತ್ತು ಇತರೆ ದೇಶಗಳು ಇರಾನ್‌ನ ಬ್ಯಾಂಕಿಂಗ್ ವಲಯದ ಮೇಲೆ, ವೈದ್ಯಕೀಯ ಕಚ್ಚಾ ವಸ್ತುಗಳ ಆಮದಿನ ಮೇಲೆ ನಿರ್ಬಂಧ ಹೇರಿದೆ. ಈ ನಿರ್ಬಂಧಗಳಿಂದಾಗಿ ಇರಾನ್‌ಗೆ ಅಂತಾರಾಷ್ಟ್ರೀಯ ಹಣಕಾಸು ವರ್ಗಾವಣೆ ಕಷ್ಟಕರವಾಗಿದೆ.

ಔಷಧಗಳು ತಾಂತ್ರಿಕವಾಗಿ ನಿರ್ಬಂಧದ ಪಟ್ಟಿಯಲ್ಲಿ ಇಲ್ಲದಿದ್ದರೂ, ಬ್ಯಾಂಕಿಂಗ್ ಮತ್ತು ಸಾರಿಗೆ ನಿರ್ಬಂಧಗಳಿಂದಾಗಿ ಕ್ಯಾನ್ಸರ್ ಚಿಕಿತ್ಸೆಗೆ ಅಗತ್ಯವಿರುವ ರೇಡಿಯೋ ಫಾರ್ಮಾಸ್ಯುಟಿಕಲ್ಸ್‌ಗಳ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಅಂದರೆ ಅಮೆರಿಕದ ರಾಜಕೀಯಕ್ಕಾಗಿ ಹಲವು ಜೀವಗಳು ನಲುಗುವಂತಾಗಿದೆ ಎಂಬುದು ಸ್ಪಷ್ಟ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ...