ಇಸ್ರೇಲ್‌ನ ಮೊಸಾದ್ ಬೇಹುಗಾರಿಕೆ ಸಂಸ್ಥೆಯ ಕೇಂದ್ರವನ್ನು ಹೊಡೆದುರುಳಿಸಿದ್ದೇವೆ: ಇರಾನ್

Date:

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಹೆಚ್ಚಾಗುತ್ತಿರುವ ನಡುವೆ ಮಂಗಳವಾರ ಇಸ್ರೇಲ್‌ನ ಮೊಸಾದ್ ಬೇಹುಗಾರಿಕೆ ಸಂಸ್ಥೆಯ ಕೇಂದ್ರವನ್ನು ಹೊಡೆದುರುಳಿಸಿರುವುದಾಗಿ ಇರಾನ್ ಹೇಳಿದೆ.

“ಐಆರ್‌ಜಿಸಿ ಟೆಲ್ ಅವಿವ್‌ನಲ್ಲಿರುವ ಜಿಯೋನಿಸ್ಟ್ ಆಡಳಿತದ ಮೊಸಾದ್ ಬೇಹುಗಾರಿಕೆ ಸಂಸ್ಥೆಯ ಪ್ರಮುಖ ಕೇಂದ್ರದ ಮೇಲೆ ಯಶಸ್ವಿಯಾಗಿ ಕ್ಷಿಪಣಿ ದಾಳಿಯನ್ನು ನಡೆಸಲಾಗಿದೆ ಎಂದು ಇರಾನ್ ಘೋಷಿಸಿದೆ” ಎಂದು ಸುದ್ದಿ ಸಂಸ್ಥೆ ತಸ್ನಿಮ್ ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಟಿವಿಯಲ್ಲಲ್ಲ, ಮನೆಯ ಹೊರಗೆ ಯುದ್ಧ ನಡೆಯುತ್ತಿದೆ: ಇರಾನ್-ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏರೋಸ್ಪೇಸ್ ಫೋರ್ಸ್ ಘಟಕಗಳು ಕ್ಷಿಪಣಿ ದಾಳಿಯನ್ನು ನಡೆಸಿದೆ. ಹತ್ಯೆ ಮತ್ತು ದುಷ್ಟ ಕೃತ್ಯಗಳ ಯೋಜನೆ ರೂಪಿಸುವ ಮೊಸಾದ್‌ನ ಕೇಂದ್ರ ಮತ್ತು ಇಸ್ರೇಲ್‌ನ ಮಿಲಿಟರಿ ಗುಪ್ತಚರ ನಿರ್ದೇಶನಾಲಯ AMAN ಅನ್ನು ಹೊಡೆದುರುಳಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಇಸ್ರೇಲ್ ಇನ್ನೂ ಈ ದಾಳಿಯನ್ನು ದೃಢಪಡಿಸಿಲ್ಲ.

ಆದರೆ ಇರಾನಿನ ದಾಳಿಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದ್ದು, ಮೊಸಾದ್ ಕೇಂದ್ರವು ಹೊಗೆಯಿಂದ ಆವರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈಗಾಗಲೇ ಇಸ್ರೇಲ್ ತನ್ನ ಮಿಲಿಟರಿಯ ಭಾಗವಾಗಿ ಇರಾನಿನ ಮಿಲಿಟರಿ ನೆಲೆಗಳು ಮತ್ತು ಪರಮಾಣು ಸೌಲಭ್ಯಗಳ ಮೇಲೆ ದಾಳಿ ನಡೆಸಿದ ನಂತರ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದೆ.

ಉಭಯ ದೇಶಗಳಲ್ಲಿ ನಡೆದ ದಾಳಿ ಪ್ರತಿದಾಳಿಯಲ್ಲಿ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್‌ನಲ್ಲಿ ಕನಿಷ್ಠ 24 ಮಂದಿ, ಇರಾನ್‌ನಲ್ಲಿ 224 ಮಂದಿ ಮೃತಪಟ್ಟಿದ್ದಾರೆ. ಇರಾನ್‌ನಲ್ಲಿ ಬಹುತೇಕ ಮಹಿಳೆಯರು, ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಇರಾನ್ ಹೇಳಿದೆ.

ಇಸ್ರೇಲ್‌ನಿಂದ ಗ್ರೀಸ್, ಸೈಪ್ರಸ್‌ ತೆರಳುತ್ತಿರುವ ಜನರು

ಇರಾನ್‌ನ ಕ್ಷಿಪಣಿ ದಾಳಿಗಳಿಂದ ತಪ್ಪಿಸಿಕೊಳ್ಳಲು ಇಸ್ರೇಲಿಗಳು ಮತ್ತು ಇಸ್ರೇಲಿನಲ್ಲಿ ನೆಲೆಸಿರುವ ವಿದೇಶಿಗರು ಹೆರ್ಜ್ಲಿಯಾ, ಹೈಫಾ, ಮತ್ತು ಅಶ್ಕೆಲಾನ್ ಬಂದರುಗಳಿಂದ ಸಾವಿರಾರು ಡಾಲರ್‌ ತೆತ್ತು ಸೈಪ್ರಸ್‌, ಗ್ರೀಸ್ ತಲುಪುತ್ತಿದ್ದಾರೆ.

ಇಸ್ರೇಲ್‌ನ ವಾಯುಪ್ರದೇಶವು ಅನಿರ್ದಿಷ್ಟಾವಧಿಗೆ ಮುಚ್ಚಲ್ಪಟ್ಟಿರುವುದರಿಂದ ವಿದೇಶಗಳಲ್ಲಿ ಸಿಲುಕಿರುವ ಹತ್ತಾರು ಸಾವಿರ ನಾಗರಿಕರು ಸೈಪ್ರಸ್ ಅಥವಾ ಗ್ರೀಸ್‌ಗೆ ವೇಗವಾಗಿ ಧಾವಿಸಬೇಡಿ ಎಂದು ಇಸ್ರೇಲ್ ಅಧಿಕಾರಿಗಳು ಭಾನುವಾರ ಎಚ್ಚರಿಕೆ ನೀಡಿದ್ದರು. ಆದರೆ ಇದೀಗ ಇಸ್ರೇಲ್‌ನಿಂದ ಗ್ರೀಸ್‌ ಮತ್ತು ಸೈಪ್ರಸ್‌ಗೆ ಜನರು ಸಾವಿರಾರು ಡಾಲರ್ ತೆತ್ತು ಹೋಗುತ್ತಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...