ಇರಾನ್ ಸಂಘರ್ಷ | ಭಾರತದ 1.09 ಲಕ್ಷ ಕೋಟಿ ರೂ. ಮೌಲ್ಯದ ಅಕ್ಕಿ ರಫ್ತಿಗೆ ಅಡ್ಡಿ

Date:

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ಜಂಟಿ ದಾಳಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ ಮತ್ತು ಅನಿಶ್ಚಿತತೆ ಉಂಟಾಗಿದೆ. ಇರಾನ್ ಮೇಲೆ ಇಸ್ರೇಲ್‌-ಅಮೆರಿಕ ದಾಳಿ ನಡೆಸಿದ್ದರೆ, ಇರಾನ್ ಪ್ರತಿದಾಳಿಯಾಗಿ ಇಸ್ರೇಲ್ ಮತ್ತು ಸುತ್ತಲಿನ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ಸಂಘರ್ಷವು ಈಗಾಗಲೇ ಭಾರತದ ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರಲು ಆರಂಭಿಸಿದೆ ಎಂದು ವರದಿಗಳು ಹೇಳುತ್ತಿವೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಏರಿಕೆಯಾಗಿವೆ. ಜೊತೆಗೆ, ಭಾರತೀಯ ಬಾಸ್ಮತಿ ಅಕ್ಕಿಗೆ ಅತಿದೊಡ್ಡ ಮಾರುಕಟ್ಟೆಯಾಗಿರುವ ಇರಾನ್‌ನಲ್ಲಿ ಅಂತಾರಾಷ್ಟ್ರೀಯ ವಹಿವಾಟುಗಳು ಸ್ಥಗಿತಗೊಳ್ಳುತ್ತಿರುವ ಹಿನ್ನೆಲೆ, ಭಾರತದ ಅಕ್ಕಿ ರಫ್ತಿನ ಮೇಲೂ ನೇರ ಪರಿಣಾಮ ಬೀಳುತ್ತಿದೆ ಎಂದು ಹೇಳಲಾಗುತ್ತಿದೆ.

“ಯುದ್ಧ ಪ್ರಾರಂಭವಾಗುವ ಮೊದಲು ಕಳೆದ ಎರಡು ತಿಂಗಳುಗಳಲ್ಲಿ ಇರಾನಿನ ಆಮದುದಾರರು ಭಾರತದಿಂದ ಹೆಚ್ಚಿನ ಪ್ರಮಾಣದ ಬಾಸ್ಮತಿ ಅಕ್ಕಿಗೆ ಆರ್ಡರ್‌ಗಳನ್ನು ನೀಡಿದ್ದರು. ಪರಿಣಾಮವಾಗಿ, ಸ್ಥಳೀಯ ಭಾರತೀಯ ಮಾರುಕಟ್ಟೆಗಳಲ್ಲಿ ಬಾಸ್ಮತಿ ಅಕ್ಕಿಯ ಬೆಲೆಯಲ್ಲಿ ಪ್ರತಿ ಕೆ.ಜಿ.ಗೆ ಸುಮಾರು 10 ರೂ.ಗಳಷ್ಟು ಏರಿಕೆಯಾಗಿದೆ. ಆದರೆ, ಈಗ ಯುದ್ಧ ಪ್ರಾರಂಭವಾಗಿದ್ದು, ಭಾರತೀಯ ಬಾಸ್ಮತಿ ಅಕ್ಕಿ ರಫ್ತುಗಳು ವಾಸ್ತವಿಕವಾಗಿ ಸ್ಥಗಿತಗೊಂಡಿವೆ. ಇದು, ಮಾರುಕಟ್ಟೆಯಲ್ಲಿ ಅನಿಶ್ಚಿತತೆಯನ್ನು ಹುಟ್ಟುಹಾಕಿದೆ” ಎಂದು ಫಾರ್ಚೂನ್ ರೈಸ್ ಲಿಮಿಟೆಡ್‌ನ ನಿರ್ದೇಶಕ ಮತ್ತು ಅಖಿಲ ಭಾರತ ಅಕ್ಕಿ ರಫ್ತುದಾರರ ಸಂಘದ ಪ್ರಧಾನ ಕಾರ್ಯದರ್ಶಿ ಅಜಯ್ ಭಲೋಟಿಯಾ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಖಿಲ ಭಾರತ ಅಕ್ಕಿ ರಫ್ತುದಾರರ ಸಂಘದ ಪ್ರಕಾರ; ಭಾರತದ ಒಟ್ಟು ಬಾಸ್ಮತಿ ಅಕ್ಕಿ ರಫ್ತಿನಲ್ಲಿ ನಾಲ್ಕನೇ ಒಂದು ಭಾಗ (25%) ಇರಾನ್‌ಗೆ ಹೋಗುತ್ತದೆ. 20% ಅಕ್ಕಿ ಇರಾಕ್‌ಗೆ ರಫ್ತಾಗಿದೆ. ಒಟ್ಟಾರೆಯಾಗಿ, ಈ ರಫ್ತುಗಳು 20 ಲಕ್ಷ ಟನ್‌ಗಳಿಗಿಂತ ಹೆಚ್ಚು ಬಾಸ್ಮತಿ ಅಕ್ಕಿಯನ್ನು ಹೊಂದಿವೆ. ಇದರ ಒಟ್ಟು ಮೌಲ್ಯವು 1.09 ಲಕ್ಷ ಕೋಟಿ ರೂ.ಗಿಂತಲೂ ಹೆಚ್ಚಿದೆ. ಇರಾನ್‌ನಲ್ಲಿನ ಸಂಘರ್ಷವು ಇರಾಕ್‌ಗೆ ಹೋಗಬೇಕಾದ ಅಕ್ಕಿ ರಫ್ತಿನ ಮೇಲೂ ಪರಿಣಾಮ ಬೀರಲಿದೆ. ಈಗ, ಈ 1.09 ಲಕ್ಷ ಕೋಟಿ ರೂ. ಮೌಲ್ಯದ ವಹಿವಾಟು ಆತಂಕಕ್ಕೆ ಸಿಲುಕಿದೆ.

ಇರಾನ್ ಸಂಘರ್ಷದ ಪ್ರಭಾವವು ಭಾರತದ ಮೇಲೆ ಕೇವಲ ಅಕ್ಕಿ ರಫ್ತಿನಲ್ಲಿ ಮಾತ್ರವಲ್ಲ, ಚಹಾ ರಫ್ತಿನ ಮೇಲೂ ಬೀರಲಿದೆ. 2024-25ರಲ್ಲಿ, ಭಾರತದಿಂದ ಇರಾನ್‌ಗೆ ಸುಮಾರು 7,000 ಕೋಟಿ ರೂ. ಮೌಲ್ಯದ ಚಹಾವನ್ನು ರಫ್ತು ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ...