ಇರಾನ್‌ – ಇಸ್ರೇಲ್ ಯುದ್ಧ: ತನ್ನ ಮಿತ್ರ ದೇಶದ ನೆಲದಲ್ಲೇ ಅಮೆರಿಕದ ಯುದ್ಧ ವಿಮಾನ ಪತನ

Date:

ಕುವೈತ್‌ನ ವಾಯುಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಅಮೆರಿಕದ ಎಫ್-15 (F-15) ಯುದ್ಧವಿಮಾನವೊಂದು ಪತನಗೊಂಡಿದೆ ಎಂದು ಇರಾನ್‌ನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮಧ್ಯಪ್ರಾಚ್ಯದಾದ್ಯಂತ (ಬಹ್ರೇನ್, ದುಬೈ, ದೋಹಾ) ಸ್ಫೋಟ ಮತ್ತು ದಾಳಿಗಳ ವರದಿಯಾಗಿವೆ. ವಿಮಾನದ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಪೈಲಟ್‌ಗೆ ಕಾರಿನ ಡಿಕ್ಕಿಯೊಳಗೆ ಆಶ್ರಯ ನೀಡುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

​ವಿಮಾನ ಪತನದ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿದ್ದರೂ, ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಅಮೆರಿಕದ ‘ಪ್ಯಾಟ್ರಿಯಾಟ್’ ವಾಯು ರಕ್ಷಣಾ ವ್ಯವಸ್ಥೆಯಿಂದಲೇ ಆಕಸ್ಮಿಕವಾಗಿ ಹೊಡೆದುರುಳಿಸಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಪ್ಯಾಟ್ರಿಯಾಟ್ ಎಂಬುದು ಅಮೆರಿಕ ನಿರ್ಮಿತ ವಾಯು ರಕ್ಷಣಾ ವ್ಯವಸ್ಥೆಯಾಗಿದ್ದು, ಇದು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಶತ್ರು ವಿಮಾನಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ. ಆದರೆ, ಅಪರೂಪದ ಸಂದರ್ಭಗಳಲ್ಲಿ ರೇಡಾರ್ ಗೊಂದಲ, ಸಂವಹನ ವೈಫಲ್ಯ ಅಥವಾ ‘ಸ್ನೇಹಿತ ಅಥವಾ ಶತ್ರು’ ಗುರುತಿಸುವಿಕೆಯ ದೋಷದಿಂದಾಗಿ ತನ್ನದೇ ವಿಮಾನವನ್ನು ಶತ್ರುವೆಂದು ತಪ್ಪಾಗಿ ಭಾವಿಸುವ ಸಾಧ್ಯತೆಗಳಿರುತ್ತವೆ.

ಕುವೈತ್ ಇಂಟಿಗ್ರೇಟೆಡ್ ಪೆಟ್ರೋಲಿಯಂ ಇಂಡಸ್ಟ್ರೀಸ್ ಕಂಪನಿ ನೀಡಿರುವ ಮಾಹಿತಿಯ ಪ್ರಕಾರ, ವಿಮಾನದ ಅವಶೇಷಗಳು ಸೋಮವಾರ ಮಿನಾ ಅಲ್ ಅಹ್ಮದಿ ಸಂಸ್ಕರಣಾಗಾರದ ಒಳಗೆ ಬಿದ್ದಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಘಟನೆಯ ಬೆನ್ನಲ್ಲೇ ತುರ್ತು ರಕ್ಷಣಾ ತಂಡಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ವಿಮಾನ ಪತನಗೊಳ್ಳುವ ಮುನ್ನವೇ ಪೈಲಟ್ ಎಜೆಕ್ಟ್ ಆಗಿದ್ದಾರೆ ಎಂದು ವರದಿಗಳು ತಿಳಿಸಿವೆಯಾದರೂ, ಪೈಲಟ್‌ನ ಸ್ಥಿತಿಗತಿಯ ಕುರಿತು ಅಮೆರಿಕ ಅಥವಾ ಕುವೈತ್ ಅಧಿಕಾರಿಗಳಿಂದ ಅಧಿಕೃತ ದೃಢೀಕರಣ ಇನ್ನೂ ಹೊರಬಿದ್ದಿಲ್ಲ.

ಇದನ್ನು ಓದಿದ್ದೀರಾ? ತಾನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತಲ್ಲೋ: ಅಫ್ಘಾನ್ ಜೊತೆ ಪಾಕ್ ದೋಸ್ತಿ ಹಳಸಿದ್ದೆಲ್ಲಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇರಾನ್ ಬೆಂಬಲಿತ ಹಿಜ್ಬುಲ್ಲಾ ಉಗ್ರರ ವಿರುದ್ಧ ಲೆಬನಾನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ವಿಸ್ತರಿಸಿರುವ ಇಸ್ರೇಲ್, ಸೋಮವಾರ ಟೆಹ್ರಾನ್ ಗುರಿಯಾಗಿಸಿಕೊಂಡು ಹೊಸದಾಗಿ ವೈಮಾನಿಕ ದಾಳಿಗಳನ್ನು ನಡೆಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಇಸ್ರೇಲ್‌ನತ್ತ ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ಉಡಾವಣೆ ಮಾಡಿರುವುದಾಗಿ ಹಿಜ್ಬುಲ್ಲಾ ಒಪ್ಪಿಕೊಂಡಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್, ಬೈರೂತ್‌ನ ದಕ್ಷಿಣ ಉಪನಗರಗಳಲ್ಲಿ ಹಿಜ್ಬುಲ್ಲಾ ನಿಯಂತ್ರಿತ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದು, ಲೆಬನಾನ್ ರಾಜಧಾನಿಯಲ್ಲಿ ಭಾರಿ ಸ್ಫೋಟಗಳು ಸಂಭವಿಸಿವೆ.

ಅಮೆರಿಕಕ್ಕೆ ಮೊದಲ ಸಾವು-ನೋವು
ಈ ಮಿಲಿಟರಿ ಕಾರ್ಯಾಚರಣೆಯಲ್ಲಿ ಕುವೈತ್‌ನ ಸೇನಾ ನೆಲೆಯಲ್ಲಿದ್ದ ಮೂವರು ಅಮೆರಿಕನ್ ಯೋಧರು ಮೃತಪಟ್ಟಿದ್ದು, ಇದು ಅಮೆರಿಕದ ಮೊದಲ ಸಾವು-ನೋವಿನ ವರದಿಯಾಗಿದೆ. ಗಲ್ಫ್ ಪ್ರದೇಶದಲ್ಲಿನ ಮಿಲಿಟರಿ ನೆಲೆಗಳು ಮತ್ತು ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಲಾಗಿದೆ ಎಂದು ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಹೇಳಿಕೊಂಡಿದೆ. ಇದರಿಂದಾಗಿ ಹಾರ್ಮುಜ್ ಜಲಸಂಧಿ ಸುತ್ತಮುತ್ತ ಹಡಗು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಈ ಉದ್ವಿಗ್ನತೆಯಿಂದಾಗಿ ಮಧ್ಯಪ್ರಾಚ್ಯದ ಪ್ರಮುಖ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದ್ದು, ಜಾಗತಿಕ ವಿಮಾನಯಾನದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಅಸ್ಥಿರತೆಯ ಭೀತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ...