ಇಸ್ರೇಲ್ ಕಡೆಗೆ ಹಲವು ಡ್ರೋನ್‌ಗಳನ್ನು ಹಾರಿಸಿದ ಇರಾನ್: ಯುದ್ಧದ ಭೀತಿ

Date:

ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರ ಕಚೇರಿಯ ಮೇಲೆ ಕಳೆದ ವಾರ ಇಸ್ರೇಲ್ ದಾಳಿ ಮಾಡಿ, ಅಲ್ಲಿನ ಅಧಿಕಾರಿಗಳನ್ನು ಹತ್ಯೆಗೈದಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್, ಇಸ್ರೇಲ್ ಮೇಲೆ ಡ್ರೋನ್‌ ದಾಳಿ ಆರಂಭಿಸಿದೆ.

ಇಸ್ರೇಲ್‌ ಮೇಲೆ ಇರಾನ್‌ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಅಮೇರಿಕ ತಿಳಿಸಿದ ಬೆನ್ನಲ್ಲೇ ಇಸ್ರೇಲ್ ಕಡೆಗೆ ಇರಾನ್ ದೇಶವು ಹಲವು ಡ್ರೋನ್‌ಗಳನ್ನು ಹಾರಿಸಿದೆ ಎಂದು ವರದಿಯಾಗಿದೆ.

ಅಲ್ಲದೇ, ಇರಾನ್ ಹಾರಿಸಿರುವ ಡ್ರೋನ್‌ಗಳು ಇಸ್ರೇಲ್ ಅನ್ನು ಗುರಿಯಾಗಿಸಿ ಬರುತ್ತಿರುವುದನ್ನು ಇಸ್ರೇಲ್ ಸೇನೆ ಕೂಡ ಖಚಿತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಐಡಿಎಫ್ ಅಧಿಕೃತ ಹೇಳಿಕೆ ನೀಡಿದ್ದು, “ಇರಾನ್ ತನ್ನ ಭೂಪ್ರದೇಶದಿಂದ ಇಸ್ರೇಲ್ ಕಡೆಗೆ ಮಾನವರಹಿತ ಡ್ರೋನ್‌ಗಳನ್ನು ಹಾರಿಸಿದೆ‌. ಇವು ಇಸ್ರೇಲಿನ ಭೂಭಾಗವನ್ನು ತಲುಪಲು ಹಲವಾರು ಗಂಟೆಗಳ ಕಾಲ ತೆಗೆದುಕೊಳ್ಳುತ್ತದೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಮತ್ತು ಸೇನೆಯ ಅಧಿಕಾರಿಗಳು ನೀಡುವ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಇರಾನಿನ ಡ್ರೋನ್‌ಗಳು ಇಸ್ರೇಲಿನ ಪ್ರದೇಶವನ್ನು ತಲುಪದಂತೆ ತಡೆಯಲು ನಾವು ಪ್ರಯತ್ನಿಸುತ್ತೇವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇರಾನ್ ಕೇವಲ ಡ್ರೋನ್‌ಗಳು ಮಾತ್ರವಲ್ಲದೇ, ಕ್ಷಿಪಣಿಗಳನ್ನು ಕೂಡ ಹಾರಿಸಿರುವುದಾಗಿ ವರದಿಯಾಗಿದೆ.

ಈ ಡ್ರೋನ್‌ಗಳ ದಾಳಿಯ ಬೆನ್ನಲ್ಲೇ ಟೆಹ್ರಾನ್‌ನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜೋರ್ಡಾನ್ ಕೂಡ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿರುವುದಾಗಿ ರಾಯಿಟರ್ಸ್‌‌‌ ವರದಿ ಮಾಡಿದೆ.

ಕ್ಷಿಪಣಿ ಮತ್ತು ಡ್ರೋನ್‌ ಮೂಲಕ ಇರಾನ್‌ ಇಸ್ರೇಲ್‌ ಮೇಲೆ ದಾಳಿ ಮಾಡಿದೆ. ಇರಾನ್‌ ಬಳಿ ಬ್ಯಾಲಿಸ್ಟಿಕ್‌ ಮತ್ತು ಕ್ರೂಸ್‌ ಕ್ಷಿಪಣಿಗಳಿದ್ದು, ಇವು 2 ಸಾವಿರ ಕಿ.ಮೀ ದೂರದಲ್ಲಿರುವ ಗುರಿಯನ್ನು ಧ್ವಂಸ ಮಾಡುವ ಸಾಮರ್ಥ್ಯ ಹೊಂದಿದೆ.

ಡಮಾಸ್ಕಸ್‌ನಲ್ಲಿನ ದೂತಾವಾಸದಲ್ಲಿ ಕಳೆದ ವಾರ ಇರಾನಿನ ಹಿರಿಯ ಸೇನಾಧಿಕಾರಿಯೊಬ್ಬರ ಸಹಿತ ಇತರ  ಅಧಿಕಾರಿಗಳನ್ನು ಹತ್ಯೆಗೈದಿದ್ದಕ್ಕೆ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮೇಲೆ ದಾಳಿ ನಡೆಸಿದೆ.

ರವಿವಾರದೊಳಗೆ ಪ್ರತೀಕಾರದ ದಾಳಿ ನಡೆಯಬಹುದು ಎಂದು ಅಮೆರಿಕ ಹಾಗೂ ಗುಪ್ತಚರ ಮೂಲಗಳು ಮುನ್ನೆಚ್ಚರಿಕೆ ನೀಡಿದ್ದವು. ಈ ದಾಳಿಯು ಪೂರ್ಣ ಪ್ರಮಾಣದ ಪ್ರಾಂತೀಯ ಯುದ್ಧಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಮಾಹಿತಿ ನೀಡಿದ್ದ ಅಮೆರಿಕವು ಈಗಾಗಲೇ ತನ್ನ ಯುದ್ಧ ನೌಕೆಯನ್ನು ಇಸ್ರೇಲ್‌ಗೆ ಕಳುಹಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...