ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ಸಿಬ್ಬಂದಿಗಳ ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ

Date:

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದ್ದು ಈ ಸಿಬ್ಬಂದಿಗಳನ್ನು ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿದೆ.

ಹಾರ್ಮುಜ್ ಜಲಸಂಧಿ ಬಳಿ ಇರಾನ್ ಮಿಲಿಟರಿ ವಶಪಡಿಸಿಕೊಂಡ ಸರಕು ಹಡಗಿನ 17 ಭಾರತೀಯ ಸಿಬ್ಬಂದಿಯನ್ನು ಭೇಟಿ ಮಾಡಲು ಟೆಹ್ರಾನ್ ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡಲಿದೆ ಎಂದು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದೊಲ್ಲಾಹಿಯಾನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೀರ್-ಅಬ್ದುಲ್ಲಾಹಿಯಾನ್ ಅವರು ಭಾನುವಾರ ದೂರವಾಣಿ ಮಾತುಕತೆ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಈ ಮಾಹಿತಿ ನೀಡಿದ್ದಾರೆ ಎಂದು ಇರಾನ್‌ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ?   17 ಭಾರತೀಯ ಸಿಬ್ಬಂದಿಗಳಿದ್ದ ಇಸ್ರೇಲ್‌ ಮೂಲದ ಸರಕು ಹಡಗು ವಶಪಡಿಸಿಕೊಂಡ ಇರಾನ್

ಮಾತುಕತೆ ವೇಳೆ ಜೈಶಂಕರ್ ಅವರು ಹಡಗು ಎಂಎಸ್‌ಸಿ ಏರೀಸ್‌ನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

“ನಾವು ವಶಪಡಿಸಿಕೊಂಡ ಹಡಗಿನ ವಿವರಗಳನ್ನು ನೀಡಲಾಗುತ್ತದೆ. ಶೀಘ್ರದಲ್ಲೇ ಭಾರತ ಸರ್ಕಾರದ ಪ್ರತಿನಿಧಿಗಳು ಹೇಳಿದ ಹಡಗಿನ ಸಿಬ್ಬಂದಿಯನ್ನು ಭೇಟಿ ಮಾಡಲು ಅವಕಾಶ ನೀಡಲಾಗುತ್ತದೆ” ಎಂದು ಅಮೀರ್-ಅಬ್ದುಲ್ಲಾಹಿಯಾನ್ ಅವರು ತಿಳಿಸಿರುವುದಾಗಿ ಇರಾನ್ ಮಾಧ್ಯಮ ವರದಿ ಮಾಡಿದೆ.

ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಇರಾನ್‌ನಿಂದ ಸಹಾಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?  ಇಸ್ರೇಲ್ ಮೇಲೆ ಇರಾನ್ ಡ್ರೋನ್ ಹಾರಾಟ: ಮುಚ್ಚಿದ್ದ ಜೋರ್ಡಾನ್, ಲೆಬನಾನ್, ಇರಾಕ್ ವಾಯು ಮಾರ್ಗ ಮತ್ತೆ ಆರಂಭ

ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಸದಸ್ಯರು ಹೆಲಿಕಾಪ್ಟರ್‌ನಿಂದ ಇಳಿದು ಹಾರ್ಮುಜ್ ಜಲಸಂಧಿ ಬಳಿ ಎಂಎಸ್‌ಸಿ ಏರಿಸ್ ಹಗಡನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದ್ದು ಇದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ತಿಂಗಳ ಆರಂಭದಲ್ಲಿ ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿರುವ ಮಾಜಿ ಕಾನ್ಸುಲೇಟ್ ಮೇಲೆ ದಾಳಿ ನಡೆದ ಬಳಿಕ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ದಾಳಿಯನ್ನು ಇಸ್ರೇಲ್ ನಡೆಸಿದೆ ಎಂದು ಇರಾನ್ ಆರೋಪಿಸಿದೆ. ಈ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ.

ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪ್ರತಿಜ್ಞೆ ಮಾಡಿತ್ತು. ಇಸ್ರೇಲ್‌ ಮೇಲೆ ಇರಾನ್‌ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ ಇಸ್ರೇಲ್ ಮೇಲೆ ಡ್ರೋನ್ ದಾಳಿಯನ್ನು ಆರಂಭಿಸಿದೆ. ಈಗ ಸರಕು ಸಾಗಣೆ ಹಡಗನ್ನು ವಶಕ್ಕೆ ಪಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...