ಇಸ್ರೇಲ್ ಮೇಲೆ ಶೀಘ್ರ ಇರಾನ್ ದಾಳಿ ಸಾಧ್ಯತೆ: ಬೈಡನ್ ಎಚ್ಚರಿಕೆ

Date:

ಸಿರಿಯಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಇರಾನ್ ಶೀಘ್ರವೇ ಇಸ್ರೇಲ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತದೆ ಎಂಬ ನಿರೀಕ್ಷೆಯನ್ನು ಹೊಂದಿರುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಹೇಳಿದ್ದಾರೆ. ಜೊತೆಗೆ ದಾಳಿ ಮಾಡದಂತೆ ಇರಾನ್‌ಗೆ ಎಚ್ಚರಿಕೆ ನೀಡಿದರು.

“ನಾವು ಇಸ್ರೇಲ್ ರಕ್ಷಣೆಗೆ ಬದ್ಧರಾಗಿದ್ದೇವೆ, ನಾವು ಇಸ್ರೇಲ್ ಅನ್ನು ಬೆಂಬಲಿಸುತ್ತೇವೆ, ನಾವು ಇಸ್ರೇಲ್ ಅನ್ನು ರಕ್ಷಿಸಲು ಸಹಾಯ ಮಾಡುತ್ತೇವೆ ಮತ್ತು ಇರಾನ್ ಯುದ್ಧದಲ್ಲಿ ಯಶಸ್ವಿಯಾಗದು” ಎಂದು ಜೋ ಬೈಡನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಪ್ರಾದೇಶಿಕ ಸಂಘರ್ಷದ ಆತಂಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಮಾಸ್ಕಸ್ ಇರಾನ್ ರಾಯಭಾರ ಕಚೇರಿಯ ಮೇಲೆ ನಡೆದ ದಾಳಿಯನ್ನು ತನ್ನ ಸ್ವಂತ ಪ್ರದೇಶದಲ್ಲಿ ನಡೆದ ದಾಳಿಗೆ ಸಮಾನವೆಂದು ಇರಾನ್ ಪರಿಗಣಿಸಿದೆ. ಈ ಕಾರಣದಿಂದಾಗಿ ಇರಾನ್‌ ಇಸ್ರೇಲ್ ನೆಲದ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ.

ಆದರೆ ಈ ದಾಳಿಯ ಹೊಣೆಯನ್ನು ಇಸ್ರೇಲ್ ಒಪ್ಪಿಕೊಂಡಿಲ್ಲ. ಇದಾದ ಬಳಿಕವೂ ಇಸ್ರೇಲ್ ಮೇಲೆ ದಾಳಿಯ ಆರೋಪ ಮಾಡಿರುವ ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಇಸ್ರೇಲ್ ಮೇಲೆ ಪ್ರತಿದಾಳಿಯ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಭಾರತ, ಫ್ರಾನ್ಸ್ ಮತ್ತು ರಷ್ಯಾ ಸೇರಿದಂತೆ ಹಲವು ದೇಶಗಳು ತಮ್ಮ ನಾಗರಿಕರಿಗೆ ಇಸ್ರೇಲ್ ಮತ್ತು ಇರಾನ್ ದೇಶಕ್ಕೆ ಪ್ರಯಾಣಿಸದಂತೆ ಎಚ್ಚರಿಕೆ ನೀಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...