ವಿಮಾನ ನಿಲ್ದಾಣದಲ್ಲಿ ಇರಾನ್‌ನ ಪುಟ್ಟ ಬಾಲಕನನ್ನು ಮೇಲಕ್ಕೆತ್ತಿ ನೆಲಕ್ಕೆ ಬಡಿದ ಯಹೂದಿ ವ್ಯಕ್ತಿ: ಸ್ಥಿತಿ ಗಂಭೀರ

Date:

ಇಸ್ರೇಲ್ ಹಾಗೂ ಇರಾನ್‌ನ ನಡುವೆ ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ಕದನಕ್ಕೆ ಜೂನ್ 25ರಂದು ವಿರಾಮ ಘೋಷಣೆ ಮಾಡಲಾಗಿದೆ. ಈ ನಡುವೆ ರಷ್ಯಾದ ವಿಮಾನ ನಿಲ್ದಾಣವೊಂದರಲ್ಲಿ ಯಹೂದಿ ವ್ಯಕ್ತಿಯೋರ್ವ ಇರಾನ್‌ನ ಪುಟ್ಟ ಬಾಲಕನನ್ನು ಮೇಲಕ್ಕೆತ್ತಿ ನೆಲಕ್ಕೆ ಬಡಿದಿರುವ ಆಘಾತಕಾರಿ ಘಟನೆ ನಡೆದಿದೆ.

ರಷ್ಯಾದ ಮಾಸ್ಕೋದ ಶೆರೆಮೆಟಿಯೆವೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೆಲಕ್ಕೆ ಬಡಿದ ನಂತರ ಇರಾನಿನ ಎರಡು ವರ್ಷದ ಪುಟ್ಟ ಬಾಲಕ ಕೋಮಾದ ಸ್ಥಿತಿಗೆ ತಲುಪಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

“ಮಾಸ್ಕೋ ವಿಮಾನ ನಿಲ್ದಾಣದ ಆಗಮನದ ವಿಭಾಗದಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಯನ್ನು ಬೆಲಾರೂಸ್‌ನ 31 ವರ್ಷದ ವ್ಲಾಡಿಮಿರ್ ವಿಟ್ಕೋವ್ ಎಂದು ಗುರುತಿಸಲಾಗಿದೆ. ಪರಾರಿಯಾಗಲು ಯತ್ನಿಸಿದ ವೇಳೆ ಆತನನ್ನು ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ. ಸಂತ್ರಸ್ತ ಎರಡು ವರ್ಷದ ಬಾಲಕನ ತಲೆಬುರುಡೆ ಮುರಿತಕ್ಕೊಳಗಾಗಿದ್ದು ಮತ್ತು ಬೆನ್ನುಮೂಳೆಗೂ ಗಂಭೀರ ಗಾಯಗಳಾಗಿವೆ. ಬಾಲಕ ಕೋಮಾದಲ್ಲಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇರಾನ್‌ನ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮಗು ಮತ್ತು ಆತನ ತಾಯಿ ನಂತರ ರಷ್ಯಾಕ್ಕೆ ಬಂದಿದ್ದರು ಎಂದು ವರದಿಗಳು ತಿಳಿಸಿವೆ.

ಗರ್ಭಿಣಿಯಾಗಿದ್ದ ತಾಯಿ, ತನ್ನ ಎರಡು ವರ್ಷದ ಪುಟ್ಟ ಮಗನೊಂದಿಗೆ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಆ ಬಳಿಕ ತಮ್ಮ ಬ್ಯಾಗ್‌ಗಳನ್ನು ಇರಿಸಿಕೊಳ್ಳಲೆಂದು ಟ್ರೋಲಿಯನ್ನು ತರಲೆಂದು ಹೋಗಿದ್ದರು. ಈ ವೇಳೆ ತನ್ನ ಟ್ರಾಲಿ ಬ್ಯಾಗ್‌ ಅನ್ನು ಕೈಯ್ಯಲ್ಲಿ ಹಿಡಿದುಕೊಂಡು ಬಾಲಕ ತನ್ನ ಕೆಲಸದಲ್ಲಿ ನಿರತನಾಗಿದ್ದ. ಇದೇ ವೇಳೆ ಹಿಂಬದಿಯಲ್ಲಿ ನಿಂತಿದ್ದ ದುಷ್ಕರ್ಮಿ ವ್ಲಾಡಿಮಿರ್ ವಿಟ್ಕೋವ್, ಬಾಲಕನನ್ನು ಮೇಲಕ್ಕೆತ್ತಿ ಬಡಿದಿದ್ದಾನೆ. ಆ ಬಳಿಕ ತನ್ನ ನೆತ್ತಿಯ ಮೇಲಿದ್ದ ಕಪ್ಪು ಕನ್ನಡಕವನ್ನು ಹಾಕಿ ಏನೂ ಮಾಡಿಲ್ಲ ಎಂಬಂತೆ ನೆಲದಲ್ಲಿ ಕೂತು ವಿಚಿತ್ರವಾಗಿ ವರ್ತಿಸಿದ್ದಲ್ಲದೇ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಇನ್ನೊಬ್ಬ ಪ್ರಯಾಣಿಕನೋರ್ವ ಕೂಡಲೇ ಮಗುವನ್ನೆತ್ತಿಕೊಂಡು ಓಡುತ್ತಿರುವ ಆಘಾತಕಾರಿ ಸಿಸಿಟಿವಿ ದೃಶ್ಯವು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ದುಷ್ಕರ್ಮಿ ವ್ಲಾಡಿಮಿರ್ ವಿಟ್ಕೋವ್ ವಿರುದ್ಧ ಕೊಲೆ ಪ್ರಯತ್ನ ಕೇಸು ದಾಖಲಿಸಿಕೊಳ್ಳಲಾಗಿದೆ. ಮಗುವಿನ ವಿರುದ್ಧದ ಈ ಕೃತ್ಯಕ್ಕೆ ಜನಾಂಗೀಯ ದ್ವೇಷ ಅಥವಾ ಇತರ ಯಾವುದಾದರೂ ಕಾರಣ ಪ್ರೇರಣೆ ಇದೆಯೇ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...