ಕತಾರ್, ಬಹರೈನ್, ಸೌದಿ ಅರೇಬಿಯಾ, ಯುಎಇ ಮೇಲೆ ಇರಾನ್‌ ಸರಣಿ ದಾಳಿ

Date:

ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿದೆ. ಕತಾರ್, ಬಹರೈನ್, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಗುರಿಯಾಗಿಸಿಕೊಂಡು ಇರಾನ್ ಸರಣಿ ದಾಳಿಯನ್ನು ನಡೆಸಿರುವ ಬಗ್ಗೆ aljazeera ವರದಿ ಮಾಡಿದೆ.

ಕತಾರ್ ಮೇಲೆ ಬೆಳಗಿನ ಜಾವ 3 ಗಂಟೆಗೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕ್ಷಿಪಣಿಗಳನ್ನು ಆಕಾಶದಲ್ಲೇ ತಡೆಯಲಾಗಿದೆ. ದೋಹಾದಲ್ಲಿ ಆಕಾಶದಲ್ಲೇ 12 ಅಥವಾ ಅದಕ್ಕಿಂತ ಹೆಚ್ಚು ಭಾರೀ ಸ್ಫೋಟಗಳ ಶಬ್ದ ಕೇಳಿಸಿದೆ. ಹೊಗೆ ದೃಶ್ಯವೂ ಕಂಡು ಬಂದಿದೆ ಎಂದು ವರದಿಯು ತಿಳಿಸಿದೆ.

ಸಿತ್ರಾ ಪ್ರದೇಶದಲ್ಲಿ ಡ್ರೋನ್ ದಾಳಿಯಲ್ಲಿ 32 ನಾಗರಿಕರು ಗಾಯಗೊಂಡಿದ್ದಾರೆ ಎಂದು ಬಹರೈನ್ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ‘ಯಾವುದೇ ದೇಶವನ್ನು ಆಕ್ರಮಿಸುವ ಉದ್ದೇಶವಿಲ್ಲ’ ಎಂದು ಗಲ್ಫ್ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷ

ಶೈಬಾ ತೈಲಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಡ್ರೋನ್ ದಾಳಿಯನ್ನು ತಡೆಹಿಡಿಯಲಾಗಿದೆ ಎಂದು ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯ ಹೇಳಿದೆ. ರಿಯಾದ್‌ನ ಉತ್ತರಕ್ಕೆ ಎರಡು ಡ್ರೋನ್‌ಗಳನ್ನು ಹೊಡೆದುರುಳಿಸಿರುವುದಾಗಿಯೂ ತಿಳಿಸಿದೆ.

ಯುಎಇ ಫುಜೈರಾ ಪ್ರದೇಶದಲ್ಲಿ ಕ್ಷಿಪಣಿಯ ಅವಶೇಷಗಳು ಬಿದ್ದ ಪರಿಣಾಮ ದೊಡ್ಡ ಮಟ್ಟದ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಯುಎಇ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ...