ಅಮೆರಿಕ ದಿವಾಳಿಯಾಗಲಿದೆ ಎಂದು ಟ್ರಂಪ್‌ಗೆ ಎಚ್ಚರಿಕೆ ನೀಡಿದ ಎಲಾನ್ ಮಸ್ಕ್‌

Date:

ಶ್ವೇತ ಭವನದಲ್ಲಿ ನಡೆದ ಅಮೆರಿಕದ ಮೊದಲ ಸಂಪುಟ ಸಭೆಯಲ್ಲಿ ಉದ್ಯಮಿ ಹಾಗೂ ವಿವಾದಾತ್ಮಕ ಇಲಾಖೆಯಾದ ಸರ್ಕಾರದ ದಕ್ಷತೆ ಇಲಾಖೆಯ(ಡಿಒಜಿಇ)ಯ ಮುಖ್ಯಸ್ಥರಾಗಿ ನೇಮಕಗೊಂಡಿರುವ ಎಲಾನ್‌ ಮಸ್ಕ್‌ ಸರ್ಕಾರವು ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಅಮೆರಿಕ ದಿವಾಳಿಯಾಗಲಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ.

ಕಳೆದ ಬುಧವಾರ ಡೊನಾಲ್ಡ್‌ ಟ್ರಂಪ್‌ ಅವರು ಅನಗತ್ಯ ಒಪ್ಪಂದಗಳನ್ನು ಪರಿಶೀಲಿಸಲು ಹಾಗೂ ವಜಾಗೊಳಿಸಲು ಏಜನ್ಸಿಗಳು ಡಿಒಜಿಇನೊಂದಿಗೆ ಕೆಲಸ ಮಾಡುವಂತೆ ನಿರ್ದೇಶಿಸಿದರು ಹಾಗೂ ಸರ್ಕಾರದ ರಿಯಲ್‌ ಎಸ್ಟೇಟ್‌ ಯೋಜನೆಯನ್ನು ನಿರ್ವಹಿಸುವ ಸಾಮಾನ್ಯ ಸೇವೆಗಳ ಆಡಳಿತಕ್ಕೆ ಯಾವುದೇ ಅನಗತ್ಯ ಆಸ್ತಿಯನ್ನು ವಿಲೇವಾರಿ ಮಾಡುವ ಯೋಜನೆಯನ್ನು ರಚಿಸಲು ಸೂಚನೆ ನೀಡಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕ ಸರಕಾರದ ದಕ್ಷತೆಯ ಇಲಾಖೆ ಮುಖ್ಯಸ್ಥರಾಗಿರುವ ಉದ್ಯಮಿ ಎಲಾನ್ ಮಸ್ಕ್ ಅವರು ಆಡಳಿತ ವೆಚ್ಚವನ್ನು ಕಡಿತಗೊಳಿಸಲು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ ನಂತರ ಟ್ರಂಪ್‌ ಈ ನಿರ್ಧಾರ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾಬಿನೆಟ್‌ ಸಭೆಯಲ್ಲಿ ಎಲಾನ್‌ ಮಸ್ಕ್‌ ಅವರು ಸರ್ಕಾರಿ ಉದ್ಯೋಗಗಳನ್ನು ಕಡಿತಗೊಳಿಸುವ ನಿರ್ಧಾರ ಹಾಗೂ ಪ್ರಯತ್ನಗಳನ್ನು ಸಮರ್ಥಿಸಿಕೊಂಡ ಟ್ರಂಪ್, ಎಲಾನ್‌ ಮಸ್ಕ್‌ ಬಗ್ಗೆ ಯಾರಾದರೂ ಅತೃಪ್ತರಾಗಿದ್ದಾರೆಯೆ? ಒಂದು ವೇಳೆ ಅತೃಪ್ತರಾಗಿದ್ದರೆ ನಾವು ಅವರನ್ನು ಹೊರ ಹಾಕುತ್ತೇವೆ. ಕೆಲವರು ಒಂದಿಷ್ಟು ಭಿನ್ನಾಭಿಪ್ರಾಯ ಹೊಂದಿರಬಹುದು ಆದರೆ ಎಲ್ಲ ಕ್ಯಾಬಿನೆಟ್‌ ಸದಸ್ಯರು ಕೇವಲ ಖುಷಿ ಮಾತ್ರವಲ್ಲ ಅಪಾರ ಸಂತಸಗೊಂಡಿದ್ದಾರೆ ಎಂದು ತಿಳಿಸಿದರು.

ಟ್ರಂಪ್‌ ಆದೇಶಕ್ಕೆ ತಡೆ

ಈ ನಡುವೆ ಇತ್ತೀಚೆಗೆ ನೇಮಕಗೊಂಡ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುವಂತೆ ಫೆಡರಲ್ ಏಜೆನ್ಸಿಗಳಿಗೆ ನಿರ್ದೇಶಿಸಿದ ಡೊನಾಲ್ಡ್ ಟ್ರಂಪ್ ಸರಕಾರದ ಆದೇಶಕ್ಕೆ ಯುಎಸ್ ಫೆಡರಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶವನ್ನು ಹೊರಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

ಸಾಮಾನ್ಯವಾಗಿ ಒಂದು ವರ್ಷಕ್ಕಿಂತ ಕಡಿಮೆ ಅನುಭವ ಹೊಂದಿರುವ ಪ್ರೊಬೇಷನರಿ ಉದ್ಯೋಗಿಗಳು ಸೇರಿದಂತೆ ಯಾವುದೇ ಉದ್ಯೋಗಿಗಳನ್ನು ವಜಾಗೊಳಿಸುವಂತೆ ಸರಕಾರಿ ಏಜೆನ್ಸಿಗಳಿಗೆ ಆದೇಶ ನೀಡುವ ಅಧಿಕಾರ ʼಅಮೆರಿಕದ ಸಿಬ್ಬಂದಿ ನಿರ್ವಹಣೆʼ ಇಲಾಖೆಗೆ ಇಲ್ಲ ಎಂದು ಸ್ಯಾನ್ ಫ್ರಾನ್ಸಿಸ್ಕೋ ಜಿಲ್ಲಾ ನ್ಯಾಯಾಧೀಶ ವಿಲಿಯಂ ಅಲ್ಸುಪ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕ ಸರಕಾರದ ದಕ್ಷತೆಯ ಇಲಾಖೆ ಮುಖ್ಯಸ್ಥರಾಗಿರುವ ಉದ್ಯಮಿ ಎಲಾನ್ ಮಸ್ಕ್ ಅವರು ಆಡಳಿತ ವೆಚ್ಚವನ್ನು ಕಡಿತಗೊಳಿಸಲು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಸ್ಯಾನ್ ಫ್ರಾನ್ಸಿಸ್ಕೋದ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.

ತರಬೇತಿ ನಿರತ ಸಿಬ್ಬಂದಿಗಳು ನಮ್ಮ ಸರಕಾರದ ಜೀವಾಳ, ಸಿಬ್ಬಂದಿ ನಿರ್ವಹಣೆ ಇಲಾಖೆಯ ಅಧಿಕಾರಿಗಳಿಗೆ ಜನವರಿ 20ರಂದು ನೀಡಲಾದ ಸೂಚನೆ ಮತ್ತು ಫೆಬ್ರವರಿ 14ರಿಂದ ಉದ್ಯೋಗಿಗಳಿಗೆ ಇದಕ್ಕೆ ಸಂಬಂಧಿಸಿ ಕಳುಹಿಸಿರುವ ಇಮೇಲ್ ಅನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿರುವುದಾಗಿ ನ್ಯಾಯಾಧೀಶ ಅಲ್ಸುಪ್ ಅವರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...