ಗಾಜಾ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿ; 80ಕ್ಕೂ ಹೆಚ್ಚು ಮಂದಿ ಸಾವು

Date:

ಪ್ಯಾಲೆಸ್ತೀನ್‌ ಮೇಲೆ ತನ್ನ ಕ್ರೌರ್ಯವನ್ನು ಇಸ್ರೆಲ್ ಮುಂದುವರೆಸಿದೆ. ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯಲ್ಲಿರುವ ನಿರಾಶ್ರಿತರ ಶಿಬಿರಗಳ ಮೇಲೆ ಬುಧವಾರ ರಾತ್ರಿ ಇಸ್ರೇಲ್ ದಾಳಿ ನಡೆಸಿದೆ. ಭೀಕರ ದಾಳಿಯಲ್ಲಿ 80ಕ್ಕೂ ಹೆಚ್ಚು ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ತಮ್ಮ ನಿವಾಸಗಳಿಂದ ಸ್ಥಳಾಂತರಗೊಂಡು, ನಿರಾಶ್ರಿತರ ಶಿಬಿರಗಳಲ್ಲಿ ಡೇರೆಗಳು ಮತ್ತು ತಾತ್ಕಾಲಿಕ ಆಶ್ರಯಗಳಲ್ಲಿ ನೆಲೆಸಿದ್ದರು. ಆ ಸ್ಥಳಗಳ ಮೇಲೂ ಇಸ್ರೇಲ್ ದಾಳಿ ನಡೆಸಿದೆ ಎಂದು ಗಾಜಾದ ಆಸ್ಪತ್ರೆಗಳು ತಿಳಸಿವೆ. ಆಹಾರ, ವೈದ್ಯಕೀಯ ನೆರವಿಗಾಗಿ ಸರತಿಯಲ್ಲಿ ನಿಂತಿದ್ದ ಜನರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎಂದು ಅರೋಪಿಸಲಾಗಿದೆ.

ಗಾಜಾದ ದರಾಜ್ ಜಿಲ್ಲೆಯ ಜನನಿಬಿಡ ‘ಫಿರಾಸ್ ಮಾರುಕಟ್ಟೆ’ಯ ಬಳಿ ವಿನಾಶಕಾರಿ ಬಾಂಬ್‌ಗಳು ಬಿದ್ದಿವೆ. ಪರಿಣಾಮವಾಗಿ ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ನುಸೇರತ್ ನಿರಾಶ್ರಿತರ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 12 ಜನರು ಮತ್ತು ದೇರ್ ಅಲ್-ಬಲಾಹ್‌ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲಿ ಮಿಲಿಟರಿಯು ತನ್ನ ಕಾರ್ಯಾಚರಣೆಗಳು ಹಮಾಸ್ ಹೋರಾಟಗಾರರನ್ನು ಗುರಿಯಾಗಿಸಿಕೊಂಡಿತ್ತು ಎಂದು ಸಮರ್ಥಿಸಿಕೊಂಡಿದೆ. ಹಮಾಸ್ ಹೋರಾಟಗಾರರು ಯುದ್ಧಸಾಮಗ್ರಿಗಳನ್ನು ಹೊಂದಿದ್ದಾರೆ ಮತ್ತು ಜನರ ನಡುವೆ ತಲೆಮರೆಸಿಕೊಂಡಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ಆರೋಪಿಸಿದೆ.

ಈ ಲೇಖನ ಓದಿದ್ದೀರಾ?: ಎಚ್1ಬಿ ವೀಸಾದಿಂದ ಅಮೆರಿಕಕ್ಕಾದ ಲಾಭವೇನು, ಭಾರತಕ್ಕಾದ ನಷ್ಟವೇನು?

ಆದಾಗ್ಯೂ, ಇತ್ತೀಚಿನ ತಿಂಗಳುಗಳಲ್ಲಿ ಆಹಾರ ಮತ್ತು ಇತರ ಅಗತ್ಯಗಳ ನೆರವಿಗಾಗಿ ಕಾಯುತ್ತಿದ್ದ ಜನರ ಮೇಲೆ ಇತ್ತೀಚೆಗೆ ಹೆಚ್ಚು ದಾಳಿಗಳು ನಡೆದಿದ್ದು, ನೂರಾರು ಜನರನ್ನು ಇಸ್ರೇಲ್ ಕೊಂದಿದೆ ಎಂದು ಗಾಜಾ ಆರೋಗ್ಯ ಅಧಿಕಾರಿಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ತಿಳಿಸಿದೆ.

ಪ್ಯಾಲೆಸ್ತೀನ್ ಸ್ವಾತಂತ್ರ್ಯಕ್ಕಾಗಿ ಹಮಾಸ್‌ ಬಂಡುಕೋರರು ಹೋರಾಟ ನಡೆಸುತ್ತಿದ್ದಾರೆ. ಹೋರಾಟದ ಭಾಗವಾಗಿ, 2023ರ ಅಕ್ಟೋಬರ್ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ದಾಳಿ ನಡೆಸಿತು. ಅಂದಿನಿಂದ, ಗಜಾ ಮೇಲೆ ಇಸ್ರೇಲ್ ಮೇಲೆ ನಿರಂತರವಾಗಿ ಕ್ರೌರ್ಯ ಎಸಗುತ್ತಿದೆ. ಈವರೆಗೆ, 65,000ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರನ್ನು ಇಸ್ರೇಲ್‌ ಕೊಂದಿದೆ. ಸತ್ತವರಲ್ಲಿ ಅರ್ಧದಷ್ಟು ಜನರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...