ಗಾಜಾ ಕದನ ವಿರಾಮಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ; ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ

Date:

ಮಧ್ಯಪ್ರಾಚ್ಯದಲ್ಲಿ ಶಾಂತಿಯತ್ತ ಮಹತ್ವದ ಹೆಜ್ಜೆಯಾಗಿ, ಇಸ್ರೇಲ್ ಮತ್ತು ಹಮಾಸ್ ಗಾಜಾ ಕದನ ವಿರಾಮ ಯೋಜನೆಯ ಮೊದಲ ಹಂತಕ್ಕೆ ಒಪ್ಪಂದ ಮಾಡಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ಘೋಷಿಸಿದ್ದಾರೆ.

ಟ್ರಂಪ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿರುವ ಪೋಸ್ಟ್ ನಲ್ಲಿ, “ಇಸ್ರೇಲ್ ಮತ್ತು ಹಮಾಸ್ ನಡುವೆ ಗಾಜಾದ ಕದನ ವಿರಾಮದ ಮೊದಲ ಹಂತಕ್ಕೆ ಒಪ್ಪಂದ ತಲುಪಿದೆ. ಇದು ಶಾಂತಿಯ ಪ್ರಾರಂಭದ ಹೊಸ ಅಧ್ಯಾಯವಾಗಿದೆ” ಎಂದು ಹೇಳಿದ್ದಾರೆ. ಈ ವಾರಾಂತ್ಯದಲ್ಲಿ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲು ಈಜಿಪ್ಟ್‌ಗೆ ಭೇಟಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕದನ ವಿರಾಮ ಮಾತುಕತೆಯಲ್ಲಿ ಪ್ರಮುಖ ಮಧ್ಯವರ್ತಿಯಾಗಿದ್ದ ಖತರ್, “ಒಪ್ಪಂದದ ಮೊದಲ ಹಂತದ ಎಲ್ಲಾ ಷರತ್ತುಗಳು ಮತ್ತು ಅನುಷ್ಠಾನ ಕ್ರಮಗಳ ಕುರಿತು ಸ್ಪಷ್ಟತೆಗೆ ತಲುಪಲಾಗಿದೆ” ಎಂದು ಅಧಿಕೃತ ಪ್ರಕಟಣೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಬಿಹಾರ ಗೆಲ್ಲಲು ಮೋದಿ ರಣತಂತ್ರ- ಹಣದ ಹೊಳೆ, ಆಶ್ವಾಸನೆಗಳ ಮಳೆ!

ಹಮಾಸ್ ತನ್ನ ಪ್ರಕಟಣೆಯಲ್ಲಿ, “ಗಾಝಾದ ಮೇಲಿನ ಯುದ್ಧವನ್ನು ಕೊನೆಗೊಳಿಸುವುದು, ಆಕ್ರಮಣವನ್ನು ಹಿಂತೆಗೆದುಕೊಳ್ಳುವುದು, ಮಾನವೀಯ ಸಹಾಯದ ನಿರ್ವಿಘ್ನ ಪ್ರವೇಶ ಹಾಗೂ ಕೈದಿಗಳ ವಿನಿಮಯಕ್ಕೆ ಸಂಬಂಧಿಸಿದ ಷರತ್ತುಗಳ ಮೇಲೆ ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ತಿಳಿಸಿದೆ.

ಇದೇ ವೇಳೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗುರುವಾರ ಸರ್ಕಾರದ ತುರ್ತು ಸಭೆಯನ್ನು ಕರೆಯುವ ಮೂಲಕ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಲು ಮುಂದಾಗಿದ್ದಾರೆ. “ಇದು ಇಸ್ರೇಲ್‌ಗೆ ಒಳ್ಳೆಯ ದಿನವಾಗಿದೆ. ನಮ್ಮ ಎಲ್ಲ ಒತ್ತೆಯಾಳುಗಳನ್ನು ವಾಪಸ್ ಕರೆತರಲು ಸರ್ಕಾರ ಬದ್ಧವಾಗಿದೆ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

2023ರ ಅಕ್ಟೋಬರ್‌ ನಿಂದ ಇಸ್ರೇಲ್ ನಡೆಸಿದ ಗಾಝಾ ಯುದ್ಧದಲ್ಲಿ ಕನಿಷ್ಠ 67,183 ಮಂದಿ ಮೃತಪಟ್ಟಿದ್ದು, 169,841 ಮಂದಿ ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನ್ ನ ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳಿವೆ. ಇನ್ನೂ ಹೆಚ್ಚಿನ ಜನರು ನಾಶವಾದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ. 2023ರ ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ 1,139 ಮಂದಿ ಸಾವನ್ನಪ್ಪಿದರು. ಸುಮಾರು 200 ಮಂದಿಯನ್ನು ಹಮಾಸ್ ಒತ್ತೆಯಾಳುಗಳಾಗಿರಿಸಿಕೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...