ಇಸ್ರೇಲ್ – ಹಮಾಸ್ ಸಂಘರ್ಷದಲ್ಲಿ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರ ಸಾವು

Date:

ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್ – ಹಮಾಸ್ ಸಂಘರ್ಷದಲ್ಲಿ ಸುಮಾರು 20,000 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಲ್ಲಲಾಗಿದೆ ಎಂದು ಹಮಾಸ್ ನಿಯಂತ್ರಿತ ಪ್ರದೇಶದಲ್ಲಿನ ಆರೋಗ್ಯ ಅಧಿಕಾರಿಗಳು ಡಿಸೆಂಬರ್ 22 ರಂದು ತಿಳಿಸಿದ್ದಾರೆ.

ಮೃತರ ಸಂಖ್ಯೆಯು ಗಾಜಾ ಭೂಪ್ರದೇಶದ ಯುದ್ಧಪೂರ್ವ ಜನಸಂಖ್ಯೆಯ ಸುಮಾರು ಶೇ.1 ರಷ್ಟಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಅಲ್ಲದೆ ಕಳೆದ 11 ವಾರಗಳಲ್ಲಿ ಈ ಭೂಪ್ರದೇಶದ ಸುಮಾರು ಶೇ. 85ರಷ್ಟು ಜನರನ್ನು ಸ್ಥಳಾಂತರಿಸಿದೆ. ಹಲವು ಭೂಪ್ರದೇಶಗಳನ್ನು ನೆಲಸಮಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ ಹೋರಾಟದಲ್ಲಿ 20,057 ಸಾವುಗಳು ಸಂಭವಿಸಿದೆ. ಇದು ಹೋರಾಟಗಾರರು ಮತ್ತು ನಾಗರಿಕ ಸಾವುಗಳ ನಡುವೆ ಹೆಚ್ಚು ವ್ಯತ್ಯಾಸವನ್ನು ಹೊಂದಿಲ್ಲ. ಮೃತಪಟ್ಟವರಲ್ಲಿ ಸರಿಸುಮಾರು ಮೂರನೇ ಎರಡರಷ್ಟು ಮಹಿಳೆಯರು ಹಾಗೂ ಅಪ್ರಾಪ್ತರು ಎಂದು ಅಂಕಿಅಂಶ ತಿಳಿಸುತ್ತದೆ. ಸಂಘರ್ಷದಲ್ಲಿ 53,320 ಪ್ಯಾಲೆಸ್ತೀನಿಯರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಪ್ರೀಮ್ ಕೋರ್ಟ್ ತೀರ್ಪಿಗೆ ತಿರುಮಂತ್ರ ಹಾಕಿದ ಮೋದಿ ಸರ್ಕಾರ!

ಅಕ್ಟೋಬರ್ 7 ರಂದು ಹಮಾಸ್ ಹೋರಾಟಗಾರರು ಇಸ್ರೇಲ್‌ ಮೇಲೆ ದಾಳಿ ಮಾಡಿದ ನಂತರ ಸಂಘರ್ಷ ಶುರುವಾಯಿತು.

ಇಸ್ರೇಲ್ ಸಾವಿರಾರು ವೈಮಾನಿಕ ದಾಳಿಗಳನ್ನು ನಡೆಸಿದ್ದು, ಹಮಾಸ್‌ನ ಮಿಲಿಟರಿ ಸಾಮರ್ಥ್ಯಗಳನ್ನು ನಾಶಮಾಡುವ ಯೋಜನೆ ಇದಾಗಿದ್ದು, ದಾಳಿಯಲ್ಲಿ ಗಾಜಾದ ಬಹುತೇಕ ಪ್ರದೇಶ ನಾಶಗೊಂಡಿದೆ. ಇಸ್ರೇಲ್ ಸೇನೆಯು ಸುಮಾರು 7,000 ಹಮಾಸ್ ಹೋರಾಟಗಾರರನ್ನು ಕೊಲ್ಲಲಾಗಿದೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳುತ್ತಾರೆ. ಆದರೆ ತಮ್ಮ ಸಮರ್ಥನೆಗೆ ಯಾವುದೇ ಪುರಾವೆಗಳನ್ನು ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...