ಲೆಬನಾನ್: ಪ್ಯಾಲೆಸ್ಟೀನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ; 13 ಸಾವು

Date:

ದಕ್ಷಿಣ ಲೆಬನಾನ್‌ನ ಸಿದಾನ್ ನಗರದ ಬಳಿಯ ಐನ್ ಅಲ್-ಹಿಲ್ವೆ ಪ್ಯಾಲೆಸ್ಟೀನ್ ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 9 ಮಂದಿಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ದೃಢಪಡಿಸಿದೆ.

ದಾಳಿಯು ಶಿಬಿರದ ಖಾಲಿದ್ ಬಿನ್ ವಲೀದ್ ಮಸೀದಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ಒಂದು ಕಾರನ್ನು ಗುರಿಯಾಗಿಸಿತ್ತು. ಆದರೆ ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶಕ್ಕೂ ಹಾನಿಯಾಗಿದೆ. ಸಾವಿನ ಸಂಖ್ಯೆಯಲ್ಲಿ ಬಹುತೇಕರು 18 ವರ್ಷಕ್ಕಿಂತ ಕಡಿಮೆ ವಯಸ್ಸಿನರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇಸ್ರೇಲ್ ರಕ್ಷಣಾ ಪಡೆ (IDF) ಈ ದಾಳಿಯನ್ನು ಸಮರ್ಥಿಸಿಕೊಂಡು, “ಹಮಾಸ್‌ನ ತರಬೇತಿ ಕೇಂದ್ರ ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪೆಹ್ಲೂಖಾನ್‌ಗೆ ಬಗೆದ ಅದೇ ದ್ರೋಹ ಕಾದಿದೆಯೇ ಅಖ್ಲಾಕ್‌ಗೆ?

ಆದರೆ ಹಮಾಸ್ ಈ ಆರೋಪವನ್ನು ಸಂಪೂರ್ಣವಾಗಿ ನಿರಾಕರಿಸಿದೆ. ದಾಳಿ ನಡೆದಿದ್ದು ಯಾವುದೇ ತರಬೇತಿ ಕೇಂದ್ರದ ಮೇಲಲ್ಲ, ಬದಲಿಗೆ ಶಿಬಿರದ ಫುಟ್‌ಬಾಲ್ ಆಟದ ಮೈದಾನ ಮತ್ತು ಸ್ಪೋರ್ಟ್ಸ್ ಕ್ಲಬ್ ಸಮೀಪದಲ್ಲಿ ಎಂದು ತಿಳಿಸಿದೆ. “ನಮ್ಮ ಯುವಕರು ಆಟವಾಡುತ್ತಿದ್ದ ಸ್ಥಳದಲ್ಲಿ ಮಕ್ಕಳನ್ನು ಕೊಂದಿದ್ದಾರೆ” ಎಂದು ಹಮಾಸ್ ಆಕ್ರೋಶ ವ್ಯಕ್ತಪಡಿಸಿದೆ.

ಲೆಬನಾನ್ ಸರ್ಕಾರ ಈ ದಾಳಿಯನ್ನು “ಕಳೆದ ವರ್ಷದ ಶಾಂತಿ ಒಪ್ಪಂದದ ಗಂಭೀರ ಉಲ್ಲಂಘನೆ” ಎಂದು ಖಂಡಿಸಿದೆ. 2024 ನವೆಂಬರ್‌ನಲ್ಲಿ ಅಮೆರಿಕ ಮಧ್ಯಸ್ಥಕೆಯಲ್ಲಿ ಇಸ್ರೇಲ್-ಹಿಜ್ಬುಲ್ಲಾ ನಡುವೆ ಒಪ್ಪಂದವಾಗಿದ್ದರೂ, ಈ ಒಪ್ಪಂದದ ನಂತರ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿಗಳಲ್ಲಿ ಸತ್ತವರ ಸಂಖ್ಯೆ 270 ದಾಟಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಈ ಘಟನೆಯ ನಂತರಲೂ ಉದ್ವಿಗ್ನತೆ ಮುಂದುವರಿದಿದೆ. ನವೆಂಬರ್ 20ರಂದು ದಕ್ಷಿಣ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಗುರಿಗಳ ಮೇಲೆ ಇಸ್ರೇಲ್ ಹೊಸ ದಾಳಿ ನಡೆಸಿದ್ದು, ಓರ್ವ ಮಹಿಳೆ ಮೃತಪಟ್ಟು 11 ಮಂದಿ ಗಾಯಗೊಂಡಿದ್ದಾರೆ.

ಪ್ಯಾಲೆಸ್ಟೀನ್ ಗುಂಪುಗಳು, ಲೆಬನಾನ್ ಸರ್ಕಾರ ಮತ್ತು ಯೆಮನ್‌ನ ಹೂತಿ ಬೆಂಬಲಿತ ಸರ್ಕಾರ ಈ ದಾಳಿಯನ್ನು ಖಂಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...