Israel-Iran conflict | ಇರಾನ್‌ ನೆಲದಿಂದ 110 ವಿದ್ಯಾರ್ಥಿಗಳು ಭಾರತಕ್ಕೆ ಆಗಮನ

Date:

ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಸುರಕ್ಷಿತವಾಗಿ ಬುಧವಾರ ತಡರಾತ್ರಿ ನವದೆಹಲಿಗೆ ಬಂದಿಳಿದಿದೆ.

ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ‘ಆಪರೇಷನ್ ಸಿಂಧು’ ಎಂದು ಹೆಸರಿಟ್ಟಿದ್ದು, ಕಾರ್ಯಾಚರಣೆ ಮೂಲಕ ಭಾರತೀಯರನ್ನು ಸ್ಥಳಾಂತರಿಸಲಾಗುತ್ತಿದೆ.

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಈ ಪೈಕಿ 110 ಮಂದಿ ಇರಾನ್ ಗಡಿ ದಾಟಿ ನೆರೆಯ ಅರ್ಮೇನಿಯಾ ದೇಶಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳನ್ನು ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ನೆರವಿನೊಂದಿಗೆ ಸ್ವದೇಶಕ್ಕೆ ಕರೆಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮಲ್ಲಿ ವಿಮಾನಗಳು ಸಿದ್ಧವಾಗಿವೆ. ಇಂದು (ಗುರುವಾರ) ನಾವು ಮತ್ತೊಂದು ವಿಮಾನವನ್ನು ಕಳುಹಿಸುತ್ತೇವೆ. ನಾವು ತುರ್ಕಮೆನಿಸ್ತಾನದಿಂದ ಇನ್ನೂ ಕೆಲವು ಜನರನ್ನು ಸ್ಥಳಾಂತರಿಸುತ್ತಿದ್ದೇವೆ. ಕಾರ್ಯಾಚರಣೆ 24 ಗಂಟೆ ನಡೆಯುತ್ತಿದೆ. ಇರಾನ್‌ನಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ ಕಾರಣ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ಹೆಚ್ಚಿನ ವಿಮಾನಗಳನ್ನು ಕಳುಹಿಸುತ್ತೇವೆ” ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ತಿಳಿಸಿದ್ದಾರೆ.

4 ಸಾವಿರಕ್ಕಿಂತ ಹೆಚ್ಚಿನ ಭಾರತೀಯರು ಇರಾನ್‌ನಲ್ಲಿ ನೆಲೆಸಿದ್ದಾರೆ. ಇವರಲ್ಲಿ ಅರ್ಧಕ್ಕಿಂತ ಹೆಚ್ಚಿನವರು ವಿದ್ಯಾರ್ಥಿಗಳು. ಇರಾನ್‌ನಲ್ಲಿರುವ ಭಾರತೀಯರು, ದೇಶಕ್ಕೆ ಮರಳಲು ತುರ್ತು ಸಹಾಯವಾಣಿ ಮೂಲಕ ಟೆಹರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಪರ್ಕಿಸಬಹುದು. ನವದೆಹಲಿಯಲ್ಲೂ ಸಹಾಯವಾಣಿ ಪ್ರಾರಂಭಿಸಲಾಗಿದೆ.

ಇರಾನ್‌ ನಲ್ಲಿರುವ ಭಾರತೀಯರು ಟೆಹ್ರಾನ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ತುರ್ತು ಸಹಾಯವಾಣಿ +989010144557, +989128109115; +989128109109.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...