ಇಸ್ರೇಲ್-ಇರಾನ್ ಸಂಘರ್ಷ | ಮಂಗಳೂರಿನಿಂದ ಹಾರಿದ್ದ 2 ವಿಮಾನಗಳು ವಾಪಸ್; 48 ಫ್ಲೈಟ್‌ಗಳು ರದ್ದು

Date:

ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್‌ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ, ಮಂಗಳೂರಿನಿಂದ ದಮಾಮ್ ಮತ್ತು ಅಬುಧಾಬಿಗೆ ಹೊರಟಿದ್ದ ಎರಡು ವಿಮಾನಗಳು ಭಾರತಕ್ಕೆ ಮರಳಿಬಂದಿವೆ. ಮಂಗಳೂರಿನಿಂದ ದಮಾಮ್‌ಗೆ ಹಾರಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಸ್ಕತ್‌ನಲ್ಲಿ ಭೂಸ್ಪರ್ಶ ಮಾಡಿದ್ದರೆ, ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನವು ಮುಂಬೈಯಲ್ಲಿ ಇಳಿದಿದೆ. ಮಾತ್ರವಲ್ಲದೆ, ಮಧ್ಯಪ್ರಾಚ್ಯಕ್ಕೆ ತೆರಳಬೇಕಿದ್ದ 48 ವಿಮಾನಗಳ ಹಾರಾಟವನ್ನು ಕೂಡ ರದ್ದುಗೊಳಿಸಲಾಗಿದೆ.

ಸಂಘರ್ಷ ಉಲ್ಬಣದ ನಡುವೆಯೂ ಮಂಗಳವಾರ ಮುಂಜಾನೆ ಇರಾನ್ ಮೇಲೆ ಅಮೆರಿಕದ ದಾಳಿ ಮಾಡಿತು. ದಾಳಿ ನಡೆಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಏಕಪಕ್ಷೀಯವಾಗಿ ಇಸ್ರೇಲ್-ಇರಾನ್ ನಡುವೆ ಮಂಗಳವಾರ ಮುಂಜಾನೆ ಕದನ ವಿರಾಮ ಘೋಷಿಸಿದ್ದರು. ಆದರೆ, ಈ ಬಗ್ಗೆ ತಮ್ಮೊಂದಿಗೆ ಯಾವುದೇ ಮಾತುಕತೆ-ಒಪ್ಪಂದ ಮಾಡಿಕೊಂಡಿಲ್ಲ ಎಂದಿದ್ದ ಇರಾನ್ ಟ್ರಂಪ್ ಘೋಷಿಸಿದ್ದ ಕದನ ವಿರಾಮವನ್ನು ಅಲ್ಲಗಳೆದಿತ್ತು. ಇದೀಗ, ಇಸ್ರೇಲ್ ಮೇಲೆ ದಾಳಿ ನಡೆಸಿರುವ ಇರಾನ್, ‘ಈಗ ಕದನ ವಿರಾಮ ಜಾರಿಯಾಗಿದೆ’ ಎಂದು ಹೇಳಿದೆ.

ಆದಾಗ್ಯೂ, ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳು ತಮ್ಮ ವಾಯು ಪ್ರದೇಶಗಳನ್ನು ಮುಚ್ಚಿವೆ. ಹೀಗಾಗಿ, ಭಾರತದ ರಾಜಧಾನಿ ದೆಹಲಿ ಮತ್ತು ಮಧ್ಯಪ್ರಾಚ್ಯದ ವಿವಿಧ ದೇಶಗಳ ನಡುವೆ ಹಾರಾಟ ನಡೆಸಬೇಕಿದ್ದ ವಿಮಾನಗಳ ರದ್ದಾಗಿವೆ. ಅವುಗಳಲ್ಲಿ, ದೆಹಲಿ ವಿಮಾನ ನಿಲ್ದಾಣಕ್ಕೆ ಮಧ್ಯಪ್ರಾಚ್ಯದಿಂದ ಬರಬೇಕಿದ್ದ 28 ಮತ್ತು ದೆಹಲಿಯಿಂದ ಹೊರಡಬೇಕಿದ್ದ 20 ವಿಮಾನಗಳು ಸೇರಿದಂತೆ ಒಟ್ಟು 48 ವಿಮಾನಗಳು ರದ್ದಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಇಸ್ರೇಲ್-ಇರಾನ್ ಸಂಘರ್ಷ | ಭಾರತಕ್ಕೆ ಗಂಭೀರ ಸವಾಲುಗಳು, ಪರಿಣಾಮಗಳು

ದೆಹಲಿಗೆ ಬರಬೇಕಿದ್ದು ರದ್ದಾದ ವಿಮಾನಗಳಲ್ಲಿ ಏರ್ ಇಂಡಿಯಾದ 17, ಇಂಡಿಗೋದ 8 ಹಾಗೂ ಇತರ ವಿಮಾನಯಾನ ಸಂಸ್ಥೆಗಳ 3 ವಿಮಾನಳು ಸೇರಿವೆ.

ದೆಹಲಿಯಿಂದ ಹೊರಡಬೇಕಿದ್ದ ವಿಮಾನಗಳಲ್ಲಿ ಏರ್ ಇಂಡಿಯಾದ 10, ಇಂಡಿಗೋದ 7 ಮತ್ತು ಇತರ ವಿಮಾನಯಾನ ಸಂಸ್ಥೆಗಳ 3 ವಿಮಾನಗಳ ಹಾರಾಟ ರದ್ದಾಗಿದೆ.

“ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸುರಕ್ಷಿತ ಮತ್ತು ತಡೆರಹಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಲಭ್ಯವಿರುವ ಸುರಕ್ಷಿತ ವಿಮಾನ ಮಾರ್ಗಗಳಿಗಾಗಿ ಎದುರು ನೋಡುತ್ತಿದ್ದೇವೆ. ದಯವಿಟ್ಟು ನಮ್ಮ ಮೊಬೈಲ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಅಪ್‌ಡೇಟ್‌ಗಳನ್ನು ಪಡೆಯಿರಿ” ಎಂದು ಇಂಡಿಗೋ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...