ಇಸ್ರೇಲ್‌-ಇರಾನ್ ಸಂಘರ್ಷ | ತಕ್ಷಣವೇ ಟೆಹ್ರಾನ್‌ ತೊರೆಯುವಂತೆ ಜನರಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಕರೆ

Date:

ಇಸ್ರೇಲ್ ಮತ್ತು ಇರಾನ್ ಸಂಘರ್ಷ ಮುಂದುವರಿದಿದ್ದು, ಐದನೇ ದಿನವಾದ ಮಂಗಳವಾರ ಸಹ ಎರಡು ದೇಶಗಳು ಪರಸ್ಪರ ದಾಳಿ ನಡೆಸಿವೆ. ಈ ನಡುವೆ ‘ತಕ್ಷಣವೇ ಟೆಹ್ರಾನ್‌ ತೊರೆಯುವಂತೆ’ ಜನರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ನೀಡಿದ್ದಾರೆ.‌

ಟ್ರಂಪ್ ಅವರ ಈ ಹೇಳಿಕೆಯಿಂದಾಗಿ ಇರಾನ್ ಜನ ತಮ್ಮ ಮೇಲೆ ದೊಡ್ಡ ದಾಳಿ ನಡೆಯುವ ಸಾಧ್ಯತೆ ಇರಬಹುದು ಎಂದು ಆತಂಕಗೊಂಡಿದ್ದಾರೆ. ಟ್ರಂಪ್ ಅವರು ಎಕ್ಸ್‌ ತಾಣದಲ್ಲಿ ಬೆಳಿಗ್ಗೆ 3 ಗಂಟೆಗೆ ಟ್ವೀಟ್‌ ಮಾಡಿ, 1 ಕೋಟಿ ಜನಸಂಖ್ಯೆ ಇರುವ ಇರಾನಿನ ರಾಜಧಾನಿ ಟೆಹ್ರಾನ್ ತೊರೆಯಲು ಸೋಶಿಯಲ್ ಮೀಡಿಯಾ ಮೂಲಕ ಸಂದೇಶ ಕೊಟ್ಟಿದ್ದಾರೆ.

“ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿ ತಡೆಯುವ ಒಪ್ಪಂದವನ್ನು ಇರಾನ್‌ ತಿರಸ್ಕರಿಸಿದೆ. ನಾನು ಹೇಳಿದ ಒಪ್ಪಂದಕ್ಕೆ ಇರಾನ್ ಸಹಿ ಹಾಕಬೇಕಿತ್ತು. ಇದು ಎಂತಹ ಅವಮಾನ. ಸರಳವಾಗಿ ಹೇಳುವುದಾದರೆ ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ. ನಾನು ಅದನ್ನು ಮತ್ತೆ ಮತ್ತೆ ಹೇಳಿದ್ದೇನೆ! ಟೆಹ್ರಾನ್‌ ಜನತೆ ತಕ್ಷಣವೇ ಟೆಹ್ರಾನ್ ಅನ್ನು ತೊರೆಯಬೇಕು” ಎಂದು ಟ್ರಂಪ್‌ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೋಸ್ಟ್​ ಮೂಲಕ ಅಮೆರಿಕ ಅಧ್ಯಕ್ಷ ಇರಾನ್‌ಗೆ ಬೆದರಿಕೆ ಹಾಕಿದ್ದಾರೆ ಮತ್ತು ಇರಾನ್ ತಾನು ಹೇಳಿದ ಒಪ್ಪಂದಕ್ಕೆ ಸಹಿ ಹಾಕಬೇಕಿತ್ತು ಎಂದು ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಹೊತ್ತಲ್ಲಿ ಈ ಪೋಸ್ಟ್​ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...