ಹಮಾಸ್ ಮೇಲೆ ನಿರ್ಬಂಧ ಹೇರಲು ಭಾರತಕ್ಕೆ ಇಸ್ರೇಲ್ ಒತ್ತಡ

Date:

ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು, ಹಮಾಸ್ ಸಂಘಟನೆಯನ್ನು ನಿರ್ಮೂಲನೆಗೊಳಿಸಲು ಇಸ್ರೇಲ್ ಹವಣಿಸುತ್ತಿದೆ. ಶಾಂತಿ ಒಪ್ಪಂದದ ಸೋಗಿನಲ್ಲಿ ಗಾಝಾವನ್ನು ಪ್ಯಾಲೆಸ್ತೀನಿಯರಿಂದ ಕಿತ್ತುಕೊಳ್ಳಲು ಅಮೆರಿಕ ಕೂಡ ಇಸ್ರೇಲ್‌ಗೆ ಸಹಾಯ ಮಾಡುತ್ತಿದೆ. ಈ ನಡುವೆ, ಹಮಾಸ್‌ ಸಂಘಟನೆಯಲ್ಲಿ ‘ಭಯೋತ್ಪಾದಕ ಸಂಘಟನೆ’ ಎಂದು ಘೋಷಿಸುವಂತೆ ಭಾರತದ ಮೇಲೆ ಇಸ್ರೇಲ್‌ ಒತ್ತಡ ಹೇರುತ್ತಿದೆ.

ಇತ್ತೀಚೆಗೆ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ‘ಕಾಶ್ಮೀರ ಸಾಲಿಡಾರಿಟಿ ಡೇ’ ಸಮಾರಂಭ ನಡೆದಿದೆ. ಈ ಕಾರ್ಯಕ್ರಮದಲ್ಲಿ ಹಮಾಸ್‌ನ ಹಲವು ನಾಯಕರು ಭಾಗವಹಿಸಿದ್ದರು. ಹಮಾಸ್ ನಾಯಕರು ಮೊದಲ ಬಾರಿಗೆ ಲಷ್ಕರ್-ಇ-ತೊಯ್ಬಾ ಮತ್ತು ಜೈಶ್-ಇ-ಮೊಹ್ಮದ್ ಸಂಘಟನೆಗಳ ಜೊತೆ ಪಿಒಕೆಗೆ ಬಂದಿದ್ದರು. ಇದನ್ನೇ ದಾಳವಾಗಿ ಮಾಡಿಕೊಂಡಿರುವ ಇಸ್ರೇಲ್‌, ಭಾರತದ ಮೇಲೆ ಒತ್ತಡ ಹೇರುವುದನ್ನು ಮತ್ತೆ ಆರಂಭಿಸಿದೆ.

ಇಸ್ರೇಲ್‌ನ ರಾಜತಂತ್ರಿಕರು ಭಾರತೀಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಹಮಾಸ್‌ ಸಂಘಟನೆಯನ್ನುಯ ‘ಭಯೋತ್ಪಾದಕ ಸಂಘನೆ’ ಎಂದು ಘೋಷಿಸುವಂತೆ ಒತ್ತಡ ಹಾಕಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಜಾ ಮೇಲೆ ಇಸ್ರೇಲ್ ಕಳೆದ 2 ವರ್ಷಗಳಿಂದ ದಾಳಿ ನಡೆಸುತ್ತಲೇ ಇದೆ. ಈವರೆಗೆ ಸುಮಾರು 52,000ಕ್ಕೂ ಹೆಚ್ಚು ಮಂದಿಯನ್ನು ಕೊಂದಿದೆ. ಆದಾಗ್ಯೂ, 2023ರ ಅಕ್ಟೋಬರ್‌ನಲ್ಲಿ ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ್ದ ದಾಳಿಯನ್ನು ಮಾತ್ರವೇ ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರ ಖಂಡಿಸಿತ್ತು. ಇಸ್ರೇಲ್‌ ಪರವಾಗಿ ಮಾತನಾಡಿತ್ತು. ಆದರೂ, ಹಮಾಸ್‌ ಸಂಘಟನೆಯನ್ನು ಭಯೋತ್ಪಾದಕವೆಂದು ಘೋಷಿಸಿಲ್ಲ. ಸಂಘಟನೆ ಮೇಲೆ ನಿರ್ಬಂಧ, ನಿಷೇಧದಂತಹ ಕ್ರಮ ಕೈಗೊಂಡಿಲ್ಲ.

ಈಗಾಗಲೇ, ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟಗಳು ಹಮಾಸ್‌ ಸಂಘಟನೆಗೆ ಮೇಲೆ ನಿರ್ಬಂಧ ಹೇರಿವೆ. ಅಂತೆಯೇ, ಭಾರತ ಕೂಡ ನಿಷೇಧ ಹೇರಬೇಕೆಂದು ಇಸ್ರೇಲ್ ಒತ್ತಾಯಿಸುತ್ತಿದೆ.

ಈ ಹಿಂದೆ, ಮುಂಬೈನಲ್ಲಿ ದಾಳಿ ನಡೆಸಿದ್ದ ಪಾಕಿಸ್ತಾನದ ಎಲ್‌ಇಟಿ ಸಂಘಟನೆಯನ್ನು 2023ರಲ್ಲಿ ಇಸ್ರೇಲ್ ನಿಷೇಧಿಸಿತ್ತು. ಅಂತೆಯೇ, ಭಾರತ ಕೂಡ ಹಮಾಸ್‌ಅನ್ನು ನಿಷೇಧಿಸುತ್ತದೆ ಎಂದು ಭಾರತದಲ್ಲಿದ್ದ ಇಸ್ರೇಲ್ ರಾಯಭಾರಿ ನವೋರ್ ಗಿಲನ್ ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...