ಯುದ್ಧ ವರದಿ: ಇರಾನ್‌ನ ಪ್ರಮುಖ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿಯ ವಿಡಿಯೋ ಬಿಡುಗಡೆಗೊಳಿಸಿದ ಇಸ್ರೇಲ್

Date:

ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಪ್ರಮುಖ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ವಿಡಿಯೋಗಳನ್ನು ಇಸ್ರೇಲ್ ರಕ್ಷಣಾ ಪಡೆಗಳು (IDF) ಭಾನುವಾರ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಬಿಡುಗಡೆಗೊಳಿಸಿದೆ.

“ವೀಕ್ಷಿಸಿ: ಆಪರೇಷನ್ ‘ರೋರಿಂಗ್ ಲಯನ್’ ಪ್ರಾರಂಭವಾದ ನಂತರ ಮೊದಲ ಬಾರಿಗೆ, ಐಎಎಫ್ ಟೆಹ್ರಾನ್‌ನ ಹೃದಯಭಾಗದಲ್ಲಿರುವ ಇರಾನಿನ ಭಯೋತ್ಪಾದಕ ಆಡಳಿತಕ್ಕೆ ಸೇರಿದ ಕೇಂದ್ರಗಳ ಮೇಲೆ ದಾಳಿ ಮಾಡುತ್ತಿದೆ” ಎಂದು ಇಸ್ರೇಲ್ ರಕ್ಷಾಣ ಪಡೆ ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ಇದನ್ನು ಓದಿದ್ದೀರಾ? ಇರಾನ್ ಪರಮೋಚ್ಛ ನಾಯಕ ಖಮೇನಿ ಹತ್ಯೆ: ಜಮ್ಮು ಕಾಶ್ಮೀರ, ಲಡಾಖ್‌ನಲ್ಲಿ ಪ್ರತಿಭಟನೆ; ಶೋಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಇರಾನ್‌ನ ಹಲವು ಉನ್ನತ ಅಧಿಕಾರಿಗಳ ಹತ್ಯೆ ನಡೆದಿದೆ. ಸದ್ಯ ಹಲವು ದೇಶಗಳು ಇಸ್ರೇಲ್, ಅಮೆರಿಕದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ, ಈ ದಾಳಿಗಳನ್ನು ಖಂಡಿಸಿವೆ.

ಈ ದಾಳಿಗೆ ಪ್ರತೀಕಾರವಾಗಿ ಟೆಹ್ರಾನ್ ಕೂಡಾ ದಾಳಿ ನಡೆಸಿದೆ. ಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ.

ಈ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಮಾತನಾಡಿದ ಆಂಟೋನಿಯಾ ಗುಟೆರೆಸ್, “ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಗಂಭೀರ ಬೆದರಿಕೆಯಿದೆ. ಮಿಲಿಟರಿ ಕ್ರಮವು ಯಾರೂ ನಿಯಂತ್ರಿಸಲಾಗದ ಘಟನೆಗಳ ಸರಪಣಿಯನ್ನು ಸೃಷ್ಟಿಸುವ ಅಪಾಯವನ್ನು ಉಂಟು ಮಾಡಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಸಂಘರ್ಷದ ನಡುವೆ ಜಾಗತಿಕವಾಗಿ ವಿಮಾನ ಹಾರಾಟಕ್ಕೆ ಅಡಚಣೆ ಉಂಟಾಗಿದೆ. ಹಲವು ದೇಶಗಳು ಗಲ್ಫ್ ಮೊದಲಾದ ರಾಷ್ಟ್ರಗಳಿಗೆ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ...