ಇಸ್ರೇಲ್‌ನಿಂದ ವೈಮಾನಿಕ ದಾಳಿ, ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆ!

Date:

‌ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ ಎಂದು ವರದಿಯಾಗಿದೆ.

ಈ ಕುರಿತು ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ. ಜೊತೆಗೆ ಇರಾನ್‌ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳು ಹತರಾಗಿರುವ ಸಾಧ್ಯತೆಯಿದೆ ಎಂದೂ ಇಸ್ರೇಲ್ ಸೇನೆ ತಿಳಿಸಿದೆ.

ಹಾಗೆಯೇ ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡ‌ರ್ ಹೊಸೇನ್‌ ಸಲಾಮಿ ಸಹ ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಸರ್ಕಾರಿ ಮಾಧ್ಯಮ ಶುಕ್ರವಾರ ದೃಢಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇರಾನ್ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಟೆಹ್ರಾನ್‌ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದೆ. ಟೆಹ್ರಾನ್‌‍ನಲ್ಲಿ ಭಾರಿ ಸ್ಫೋಟದ ಸದ್ದುಗಳು ಕೇಳಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಹೆಚ್ಚಿನ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಟೆಹ್ರಾನ್ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಬೆನ್ನಲ್ಲೇ ಇರಾನ್‌ನಿಂದ ಪ್ರತಿ ದಾಳಿ ನಿರೀಕ್ಷೆ ಮಾಡುತ್ತಿರುವ ಇಸ್ರೇಲ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಇಸ್ರೇಲ್‌ನ ಈ ಕಾರ್ಯಾಚರಣೆಯನ್ನು ‘ರೈಸಿಂಗ್ ಲಯನ್’ ಎಂದು ಕರೆದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ‘ನಾವು ಇರಾನ್ ಅಣ್ವಸ್ತ್ರ ಯೋಜನೆಯ ಮೇಲೆ ದಾಳಿ ನಡೆಸಿದ್ದೇವೆ. ಇರಾನ್‌ನ ಗುರಿ ನಿರ್ದೇಶಿತ ಕ್ಷಿಪಣಿ ಯೋಜನೆಯ ಮೇಲೆಯೂ ದಾಳಿ ನಡೆಸಲಾಗಿದೆ’ ಎಂದು ಹೇಳಿದ್ದಾರೆ.

ಇಸ್ರೇಲ್‌ ಮೇಲೆ ಪ್ರತಿ ದಾಳಿ

ಇಸ್ರೇಲ್ ಮೇಲೆ 100 ಡ್ರೋನ್‌ಗಳನ್ನು ಹಾರಿಸಲಾಗಿದೆ ಎಂದು ಇರಾನ್ ಸೇನೆ ತಿಳಿಸಿದೆ.

“ಕಳೆದ ಕೆಲವು ಗಂಟೆಗಳಲ್ಲಿ, ಇರಾನ್ ಇಸ್ರೇಲ್ ಕಡೆಗೆ 100 ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ. ಇಸ್ರೇಲ್‌ನಿಂದ ನಮ್ಮ ರಕ್ಷಣಾ ವ್ಯವಸ್ಥೆ ಮೇಲಿನ ಬೆದರಿಕೆಗಳನ್ನು ತಡೆಯಲು ನಾವು ಸನ್ನದ್ಧರಾಗಿದ್ದೇವೆ” ಎಂದು ಸೇನಾ ಮುಖ್ಯ ವಕ್ತಾರ ಬ್ರಿಗೇಡಿಯರ್ ಜನರಲ್ ಎಫೀ ಡೆಫ್ರಿನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...