ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ, ಉದ್ವಿಗ್ನ ಸ್ಥಿತಿ ನಿರ್ಮಾಣ

Date:

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಇಸ್ರೇಲ್ ದಾಳಿಯನ್ನು ಇರಾನ್ ಖಚಿತಪಡಿಸಿದೆ. ದಾಳಿ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

“ಇಸ್ರೇಲ್ ಇರಾನ್‌ ನಲ್ಲಿ ದಾಳಿಗಳನ್ನು ನಡೆಸಿದೆ” ಎಂದು ಇಬ್ಬರು ಅಮೆರಿಕದ ಅಧಿಕಾರಿಗಳು ರಾಯಿಟರ್ಸ್‌ಗೆ ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಅಮೆರಿಕ ಭಾಗಿಯಾಗಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಟೆಹ್ರಾನ್‌ನಲ್ಲಿ ಭಾರಿ ಸ್ಪೋಟದ ಸದ್ದುಗಳು ಕೇಳಿಸಿರುವ ಹಿನ್ನೆಲೆಯಲ್ಲಿ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಟೆಹ್ರಾನ್ ಮೇಲೆ ಕ್ಷಿಪಣಿ ಹಾಗೂ ಡೋನ್ ದಾಳಿ ಬೆನ್ನಲ್ಲೇ ಇರಾನ್‌ನಿಂದ ಪ್ರತಿ ದಾಳಿ ನಿರೀಕ್ಷೆ ಮಾಡುತ್ತಿರುವ ಇಸ್ರೇಲ್‌ನ ರಕ್ಷಣಾ ಸಚಿವ ಇಸ್ರೇಲ್‌ ಕಾಟ್ಜ್‌ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲ್‌ ನಾದ್ಯಂತ ಸೈರನ್‌ಗಳು ಮೊಳಗುತ್ತಿದ್ದಂತೆ, ಇರಾನ್ ವಿರುದ್ಧದ ವೈಮಾನಿಕ ದಾಳಿ ಮುಂದುವರಿದಿರುವ ನಡುವೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಭದ್ರತಾ ಸಚಿವ ಸಂಪುಟದ ತುರ್ತು ಸಭೆಯನ್ನು ಕರೆದಿದ್ದಾರೆ. ಇಸ್ರೇಲ್‌ನೊಂದಿಗೆ ಹೆಚ್ಚಿದ ಉದ್ವಿಗ್ನತೆಯ ನಂತರ, ದೇಶದ ವಾಯು ರಕ್ಷಣಾ ವ್ಯವಸ್ಥೆಯು ಸಂಪೂರ್ಣ ಎಚ್ಚರಿಕೆಯಿಂದಿದೆ ಎಂದು ವರದಿಯಾಗಿದೆ.

“ಇರಾನ್‌ನ ಅಣ್ವಸ್ತ್ರ ಹಾಗೂ ಮಿಲಿಟರಿ ಭೀತಿಯನ್ನು ನಿರ್ಮೂಲನೆ ಮಾಡುವವರೆಗೂ ಈ ಕಾರ್ಯಾಚರಣೆಯು ಮುಂದುವರಿಯಲಿದೆ. ಅಲ್ಲದೆ ಇಸ್ರೇಲ್ ನಡೆಸಿರುವ ಕಾರ್ಯಾಚರಣೆಯನ್ನು ‘ರೈಸಿಂಗ್ ಲಯನ್’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಂಬೋಧಿಸಿದ್ದಾರೆ.

ಕಮಾಂಡ‌ರ್ ಹೊಸೇನ್‌ ಸಲಾಮಿ ಸಾವು

ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡ‌ರ್ ಹೊಸೇನ್‌ ಸಲಾಮಿ ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಸರ್ಕಾರಿ ಮಾಧ್ಯಮ ಶುಕ್ರವಾರ ದೃಢಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...