ಗಾಜಾದಲ್ಲಿ ಮುಂದುವರೆದ ಇಸ್ರೇಲ್ ಕ್ರೌರ್ಯ; 59 ಪ್ಯಾಲೆಸ್ತೀನಿಯರು ಸಾವು

Date:

ಗಾಜಾದಲ್ಲಿ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ವಾಯುದಾಳಿ ಮತ್ತು ಗುಂಡಿನ ದಾಳಿ ನಡೆಸಿದೆ. ಇಸ್ತ್ರೇಲ್ ಕ್ರೌರ್ಯಕ್ಕೆ ಕನಿಷ್ಠ 59 ಪ್ಯಾಲೆಸ್ತೀನಿರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ ಆಕ್ರಮಣ ಮುಂದುವರೆದಂತೆ, ಗಾಜಾ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಣೆ ಮತ್ತು ಒತ್ತೆಯಾಳುಗಳ ಬಿಡುಗಡೆ ಒಪ್ಪಂದಕ್ಕಾಗಿ ಅಂತರರಾಷ್ಟ್ರೀಯ ಒತ್ತಡ ಹೆಚ್ಚುತ್ತಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ, ತಮ್ಮ ರಾಷ್ಟ್ರವು ಗಾಜಾದಲ್ಲಿ ಹಮಾಸ್ ವಿರುದ್ಧದ ಕಾರ್ಯಾಚರಣೆಯನ್ನು ಪೂರ್ಣಗೊಳಿಸಬೇಕು ಎಂದು ಹೇಳಿಕೊಂಡಿದ್ದರು. ಅವರ ಈ ಹೇಳಿಕೆಯ ಬೆನ್ನಲ್ಲೇ ಶನಿವಾರ ರಾತ್ರಿ ಗಾಜಾದಲ್ಲಿ ದಾಳಿಗಳು ನಡೆದಿವೆ.

ನುಸೇರತ್ ನಿರಾಶ್ರಿತರ ಶಿಬಿರದ ಮೇಲೆ ಎರಡು ದಾಳಿಗಳು ನಡೆದಿದ್ದು, ಒಂದೇ ಕುಟುಂಬದ ಒಂಬತ್ತು ಜನರು ಸೇರಿದಂತೆ 15 ಮಂದಿ ಮೃತಪಟ್ಟಿದ್ದಾರೆ. ಇತರ ಪ್ರದೇಶಗಳಲ್ಲಿ ಹಲವಾರು ನಡೆದ ದಾಳಿಗಳಲ್ಲಿ 44 ಮಂದಿ ಮೃತಪಟ್ಟಿದ್ದಾರೆ ಎಂದು ಗಾಜಾದ ನಾಸರ್ ಆಸ್ಪತ್ರೆ ತಿಳಿಸಿದೆ. ಆದಾಗ್ಯೂ, ದಾಳಿಯ ಬಗ್ಗೆ ನಮಗೆ ತಿಳಿದಿಲ್ಲ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಜಾದ ಹೆಲೋ ಆಸ್ಪತ್ರೆಯ ಇನ್ಕ್ಯುಬೇಟರ್‌ಗಳಲ್ಲಿ 14 ಅಕಾಲಿಕ ಶಿಶುಗಳಿಗೆ ಚಿಕಿತ್ಸೆ ನೀಡಲಾಗಿದೆ. ಆದರೆ, ಕಟ್ಟಡದ ಮೇಲೆ ಹಾರುತ್ತಿರುವ ಡ್ರೋನ್‌ಗಳಿಂದಾಗಿ ಸೌಲಭ್ಯದ ಮುಖ್ಯ ದ್ವಾರವನ್ನು ಮುಚ್ಚಲಾಗಿದೆ. ಇಸ್ರೇಲ್ ಟ್ಯಾಂಕರ್‌ಗಳು ಗಾಜಾಗೆ ನುಗ್ಗುತ್ತಿವೆ ಎಂದು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ವಿಭಾಗದ ಮುಖ್ಯಸ್ಥ ಡಾ. ನಾಸರ್ ಬುಲ್ಬುಲ್ ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬೌದ್ಧರು, ಮುಸ್ಲಿಮರನ್ನು ಒಂದು ಮಾಡಿದೆ ಅಸ್ಮಿತೆಯ ಹೋರಾಟ: ಬಿಜೆಪಿ ಕುತಂತ್ರಕ್ಕಿಲ್ಲ ಆಸ್ಪದ

ಗಾಜಾ ಮೇಲೆ ಇಸ್ರೇಲ್‌ ದಾಳಿಗಳು ಹೆಚ್ಚುತ್ತಿರುವಂತೆ, ಗಾಜಾ-ಇಸ್ರೇಲ್ ಕದನ ವಿರಾಮಕ್ಕಾಗಿ ಇಸ್ರೇಲ್ ಮೇಲೆ ಇತ್ತಡ ಹೇರುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಹಲವು ರಾಷ್ಟ್ರಗಳು ಒತ್ತಾಯಿಸಿವೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ಟ್ರಂಪ್ ಸೋಮವಾರ ಭೇಟಿಯಾಗಲಿದ್ದಾರೆ.

ಶುಕ್ರವಾರ, ವರದಿಗಾರರೊಂದಿಗೆ ಮಾತನಾಡಿದ್ದ ಟ್ರಂಪ್, “ಉಭಯ ರಾಷ್ಟ್ರಗಳ ನಡುವೆ ಒತ್ತೆಯಾಳುಗಳನ್ನು ಮರಳಿ ಪಡೆಯುವ ಮತ್ತು ಯುದ್ಧವನ್ನು ಕೊನೆಗೊಳಿಸುವ ಒಪ್ಪಂದವು ಶೀಘ್ರವೆ ನಡೆಯಲಿದೆ” ಎಂದು ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...