ಗಾಜಾ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಸಚಿವ ಸಂಪುಟ ಸಮ್ಮತಿ; ಭಾನುವಾರದಿಂದ ಜಾರಿ

Date:

ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯಕ್ಕೆ ಕೊನೆಗೂ ಫುಲ್‌ಸ್ಟಾಪ್‌ ಬಿದ್ದಿದೆ. ಹಮಾಸ್ ಮತ್ತು ಇಸ್ರೇಲ್‌ ನಡುವೆ ಕದನ ವಿರಾಮ ಘೋಷಿಸಲಾಗಿದೆ. ಈ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಸಚಿವ ಸಂಪುಟ ಶನಿವಾರ ಸಮ್ಮತಿ ಸೂಚಿಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಸಿದೆ.

ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದವನ್ನು ಅಂಗೀಕರಿಸಲಾಗಿದೆ. ಪ್ಯಾಲೆಸ್ತೀನಿಯರ ಮೇಲೆ 15 ತಿಂಗಳಿನಿಂದ ನಡೆಯುತ್ತಿರುವ ಕ್ರೌರ್ಯಕ್ಕೆ ಅಂತ್ಯಕಾಣಲಿದೆ.

“ಹಮಾಸ್‌ ಮತ್ತು ಇಸ್ರೇಲ್‌ ವಶದಲ್ಲಿರುವ ಉಭಯ ರಾಷ್ಟ್ರಗಳ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಒಪ್ಪಂದದೊಂದಿಗೆ ಕದನ ವಿರಾಮವನ್ನು ಅನುಮೋದಿಸಲಾಗಿದೆ. ಒತ್ತೆಯಾಳುಗಳ ಬಿಡುಗಡೆ ಭಾನುವಾರದಿಂದ ಜಾರಿಯಾಗಲಿದೆ” ಎಂದು ಇಸ್ರೇಲ್ ಸರ್ಕಾರ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರವೇ ಕದನ ವಿರಾಮ ಘೋಷಿಸಲಾಗಿತ್ತು. ಆದಾಗ್ಯೂ, ಇಸ್ರೇಲ್ ತನ್ನ ಕ್ರೌರ್ಯದ ದಾಳಿಯನ್ನು ಮುಂದುವರೆಸಿತ್ತು. ಗಾಜಾದ ಖಾನ್‌ ಯೂನಿಸ್‌ನ ಪಶ್ಚಿಮದಲ್ಲಿರುವ ಮಾವಾಸಿ ಪ್ರದೇಶದಲ್ಲಿ ಇಸ್ರೇಲ್ ವಿಮಾನ ದಾಳಿ ನಡೆಸಿದ್ದು, ಐದು ಜನರನ್ನು ಬಲಿ ಪಡೆದಿದೆ ಎಂದು ಗಾಜಾ ವೈದ್ಯರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...