ವಿಶ್ವ ಶೌಚಾಲಯ ದಿನದಂದು ಒಳಚರಂಡಿಗೆ ಇಳಿದ ಬಿಲ್ ಗೇಟ್ಸ್

Date:

ನವೆಂಬರ್‌ 19ರ ವಿಶ್ವ ಶೌಚಾಲಯ ದಿನದ ಅಂಗವಾಗಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್‌ ಗೇಟ್ಸ್ ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್‌ನಲ್ಲಿನ ಒಳಚರಂಡಿಗೆ ಇಳಿದು ತ್ಯಾಜ್ಯ ನೀರನ್ನು ಪರಿಶೀಲಿಸಿದ್ದಾರೆ.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿರುವ ಬಿಲ್‌ ಗೇಟ್ಸ್, ”ಈ ವರ್ಷದ ವಿಶ್ವ ಶೌಚಾಲಯ ದಿನದಂದು ನಾನು ಬ್ರಸೆಲ್ಸ್‌ನ ಒಳಚರಂಡಿ ವ್ಯವಸ್ಥೆಯ ಹಿಂದಿನ ಇತಿಹಾಸ ಹಾಗೂ ಜಾಗತಿಕ ಆರೋಗ್ಯದಲ್ಲಿ ತ್ಯಾಜ್ಯನೀರಿನ ಪಾತ್ರವನ್ನು ಅನ್ವೇಷಿಸಿದೆ” ಎಂದು ಬರೆದುಕೊಂಡಿದ್ದಾರೆ.

“ಚರಂಡಿಯಲ್ಲಿ ದುರ್ವಾಸನೆ ಮತ್ತು ಇಲಿಗಳಿವೆ” ಎಂದು 68 ವರ್ಷದ ಗೇಟ್ಸ್ ವಿಡಿಯೋದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ರಸೆಲ್ಸ್‌ ನಗರದ ಒಳಚರಂಡಿ ಇತಿಹಾಸದ ಬಗ್ಗೆ ಬಿಲ್‌ ಗೇಟ್ಸ್‌ ತಾವು ಹಂಚಿಕೊಂಡಿರುವ ವಿಡಿಯೋದಲ್ಲಿ, 1800 ರ ದಶಕದಲ್ಲಿ ಈ ನಗರದ ಸೆನ್ನೆ ನದಿಗೆ ಕೊಳಚೆನೀರು ಸೇರಿ ಅದು ಭಯಾನಕ ಕಾಲರಾ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಯಿತು ಎಂಬುದನ್ನು ತಿಳಿಸುತ್ತಾರೆ.

ಈ ಸುದ್ದಿ ಓದಿದ್ದೀರಾ? ಗುಜರಾತ್, ಮಧ್ಯಪ್ರದೇಶದ ಗ್ರಾಮೀಣ ಕಾರ್ಮಿಕರಿಗೆ ದೇಶದಲ್ಲೇ ಅತ್ಯಂತ ಕಡಿಮೆ ದಿನಗೂಲಿ: ಆರ್‌ಬಿಐ

ಬಿಲ್‌ ಗೇಟ್ಸ್ ಅವರು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಸಹ-ಸಂಸ್ಥಾಪಕರಾಗಿದ್ದಾರೆ. ಈ ಸಂಸ್ಥೆ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿನ ನೈರ್ಮಲ್ಯ ಸೇರಿದಂತೆ ಜಾಗತಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸ್ವಚ್ಛಗೊಳಿಸುವ ಕೆಲಸವನ್ನು ಕೂಡ ಮಾಡುತ್ತದೆ.

ಕಳೆದ ಕೆಲವು ವರ್ಷಗಳಿಂದ ಪ್ರತಿ ವರ್ಷದ ವಿಶ್ವ ಶೌಚಾಲಯ ದಿನದಂದು ಬಿಲ್‌ಗೇಟ್ಸ್ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಅತ್ಯಂತ ಹೆಚ್ಚು ಮಲಿನಗೊಂಡಿರುವ ನಗರಗಳು ಮತ್ತು ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...