ಜಕಾರ್ತಾ ಬೆಂಕಿ ದುರಂತ: ಹೊತ್ತಿ ಉರಿದ ಬೃಹತ್ ಕಟ್ಟಡ; 20 ಮಂದಿ ಸಾವು

Date:

ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಏಳು ಅಂತಸ್ತಿನ ಕಟ್ಟಡದಲ್ಲಿ ಭೀಕರ ಬೆಂಕಿ ದುರಂತ ಸಂಭವಿಸಿದ್ದು, ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹಲವರು ದಟ್ಟವಾದ ಹೊಗೆಯಿಂದಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಭೀತಿ-ಆತಂಕ ಉಂಟಾಗಿದೆ.

“ದುರ್ಘಟನೆಯಲ್ಲಿ 15 ಮಹಿಳೆಯರು ಮತ್ತು ಐವರು ಪುರುಷರು – ಒಟ್ಟು 20 ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಅವರಲ್ಲಿ, ಒಬ್ಬರು ಗರ್ಭಿಣಿಯೂ ಇದ್ದಾರೆ” ಎಂದು ಕೇಂದ್ರ ಜಕಾರ್ತಾ ಪೊಲೀಸ್ ಮುಖ್ಯಸ್ಥ ಸುಸತ್ಯೊ ಪೂರ್ಣೊಮೊ ಕೊಂಡ್ರೊ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಕಿಯನ್ನು ನಂದಿಸಿ, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರದೇಶವನ್ನು ದಟ್ಟ ಕಪ್ಪು ಹೊಗೆ ಆವರಿಸಿಕೊಂಡಿದೆ. ಹತ್ತಿರದ ನಿವಾಸಿಗಳು ಮತ್ತು ಕಚೇರಿ ಸಿಬ್ಬಂದಿಗಳು ತಮ್ಮ ಕಟ್ಟಡಗಳಿಂದ ಓಡಿಹೋಗುತ್ತಿದ್ದಾರೆ.

ಬೆಂಕಿಗೆ ಆಹುತಿಯಾಗಿರುವ ಕಟ್ಟಡವು ಹಲವಾರು ಕಚೇರಿಗಳ ಸಂಕೀರ್ಣವಾಗಿದೆ. ಗಣಿಗಾರಿಕೆ, ಕೃಷಿ, ಡ್ರೋನ್‌ ಸೇರಿದಂತೆ ಪ್ರಮುಖ ಉದ್ಯಮಗಳ ಕಚೇರಿಗಳು ಈ ಕಟ್ಟಡದಲ್ಲಿವೆ ಅಧಿಕಾರಿಗಳು ತಿಳಿಸಿರುವುದಾಗಿ ‘ರಾಯಿಟರ್ಸ್’ ವರದಿ ಮಾಡಿದೆ.

ಕಳೆದ ತಿಂಗಳು ಹಾಂಗ್ ಕಾಂಗ್‌ನ ತೈ ಪೊ ಜಿಲ್ಲೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಆ ಘಟನೆಯಲ್ಲಿ ಸುಮಾರು 160 ಜನರು ಸಾವನ್ನಪ್ಪಿದ್ದರು. ಇತ್ತೀಚೆಗೆ, ಗೋವಾದ ನೈಟ್‌ಕ್ಲಬ್‌ವೊಂದು ಹೊತ್ತಿ ಉರಿದಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಈ ದುರಂತಗಳ ನಡುವೆಯೇ ಮತ್ತೊಂದು ದುರಂತ ಜಕಾರ್ತದಲ್ಲಿ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...