ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡುತ್ತೇನೆ: ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಘೋಷಣೆ

Date:

ಮುಂದಿನ ತಿಂಗಳು ನಡೆಯಲಿರುವ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ. ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಬುಧವಾರ ಘೋಷಿಸಿದ್ದಾರೆ.

ಟೋಕಿಯೊದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಶಿದಾ, “ಎಲ್‌ಡಿಪಿಯ ಚುಕ್ಕಾಣಿ ಹಿಡಿಯಲು ಇದು ಹೊಸ ಮುಖಕ್ಕೆ ಕೊಡಬೇಕಾದ ಸಮಯವಾಗಿದೆ. ನಾನು ಹೊಸ ನಾಯಕತ್ವವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ” ಎಂದು ಹೇಳಿದರು.

“ಈ ಚುನಾವಣೆಯಲ್ಲಿ, ಎಲ್‌ಡಿಪಿ ಬದಲಾಗುತ್ತಿದೆ. ಪಕ್ಷವು ಹೊಸ ಎಲ್‌ಡಿಪಿ ಎಂದು ಜನರಿಗೆ ತೋರಿಸುವುದು ಅವಶ್ಯಕ” ಎಂದು ಕಿಶಿದಾ ಸುದ್ದಿಗಾರರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚೀನಾ ಆತಂಕದ ನಡುವೆ ಒಂದಾದ ಸಾಂಪ್ರದಾಯಿಕ ಶತ್ರುಗಳು; ಜಪಾನ್‌ ಪ್ರಧಾನಿ ಫ್ಯುಮಿಯೋ ಕಿಶಿಡಾ ದಕ್ಷಿಣ ಕೊರಿಯಾ ಭೇಟಿ

“ಇದಕ್ಕಾಗಿ, ಪಾರದರ್ಶಕ ಮತ್ತು ಮುಕ್ತ ಚುನಾವಣೆಗಳು, ಮುಕ್ತ ಮತ್ತು ಹುರುಪಿನ ಚರ್ಚೆ ಮುಖ್ಯವಾಗಿದೆ. ಎಲ್‌ಡಿಪಿ ಬದಲಾಗುತ್ತದೆ ಎಂದು ತೋರಿಸಲು ಅತ್ಯಂತ ಸ್ಪಷ್ಟವಾದ ಮೊದಲ ಹೆಜ್ಜೆ ನಾನು ಬದಿಗೆ ಸರಿಯುವುದು. ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ” ಎಂದು ಘೋಷಿಸಿದ್ದಾರೆ.

ಕಿಶಿದಾ ಅವರು ಮೂರು ವರ್ಷಗಳ ಅವಧಿಗೆ ಸೆಪ್ಟೆಂಬರ್ 2021ರಲ್ಲಿ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ಸ್ವಲ್ಪ ಸಮಯದ ನಂತರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...