ಹೊಸ ವರ್ಷದ ಮೊದಲ ದಿನವೇ ಜಪಾನ್‌ಗೆ ಆಘಾತ: ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ

Date:

2024ರ ಹೊಸ ವರ್ಷದ ಮೊದಲ ದಿನವೇ ಜಪಾನ್‌ಗೆ ಪ್ರಕೃತಿ ಆಘಾತ ನೀಡಿದೆ. ಈಶಾನ್ಯ ಜಪಾನ್‌ನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.

ರಿಕ್ಟರ್ ಮಾಪಕದಲ್ಲಿ 7.4ರಿಂದ 7.6ರವರೆಗೂ ಭೂಕಂಪನ ಸಂಭವಿಸಿರುವ ಬಗ್ಗೆ ದಾಖಲಾಗಿದ್ದು, ಜಪಾನ್‌ನ ಈಶಾನ್ಯ ಭಾಗದ ನನಾವೋ ಎಂಬಲ್ಲಿ ಭೂಕಂಪನದ ಕೇಂದ್ರ ಬಿಂದು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಪಾನ್‌ನ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಕರಾವಳಿ ಭಾಗದ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಭೂಕಂಪದಿಂದ ಸಾವು ನೋವು ಆದ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಜಪಾನ್ ರಾಜಧಾನಿ ಟೋಕಿಯೋ ನಗರ ಒಳಗೊಂಡಂತೆ ದೇಶಾದ್ಯಂತ ಭೂಕಂಪದ ಅನುಭವ ಆಗಿದೆ ಎಂದು ವರದಿಯಾಗಿದೆ. ಹೊಸ ವರ್ಷದ ಮೊದಲ ದಿನವೇ ಭಯಭೀತರಾದ ಜನರು, ಭೂಕಂಪನದ ವೇಳೆ ವಿಶಾಲ ಸ್ಥಳಗಳಲ್ಲಿ ಗುಂಪು ಗುಂಪಾಗಿ ಕೂತಿರುವ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಭೂಕಂಪನದ ವೇಳೆ ನದಿಯ ನೀರು ರೌದ್ರಾವತಾರ ತಾಳಿರುವ ದೃಶ್ಯ, ಇಶಿಕಾವಾ ಪ್ರಿಫೆಕ್ಚರ್‌ನಲ್ಲಿರುವ ಸ್ಥಳೀಯ ಶಿಂಕನ್‌ಸೆನ್ ನಿಲ್ದಾಣದಲ್ಲಿ ರೈಲು ಅಲುಗಾಡುತ್ತಿರುವುದು ಸೇರಿದಂತೆ ಮನೆ, ಸೂಪರ್ ಮಾರ್ಕೆಟ್‌ಗಳಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬೀಳುತ್ತಿರುವ ದೃಶ್ಯಾವಳಿಗಳು ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...