ಅಮೆರಿಕದ ಜಿಲ್ಲಾ ನ್ಯಾಯಾಧೀಶರಿಂದ ಟ್ರಂಪ್‌ ಆಡಳಿತ ನೀಡಿದ ಭಾರತೀಯ ವಿದ್ಯಾರ್ಥಿ ಗಡಿಪಾರು ಆದೇಶಕ್ಕೆ ತಡೆ

Date:

ವಾಷಿಂಗ್ಟನ್‌ನ ಜಾರ್ಜ್‌ಟೌನ್‌ ವಿವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿ ಬಾದರ್‌ ಖಾನ್‌ ಸೂರಿ ಅವರ ಗಡಿಪಾರಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತ ನೀಡಿದ ಆದೇಶಕ್ಕೆ ಫೆಡರಲ್‌ ನ್ಯಾಯಾಧೀಶರು ತಡೆ ನೀಡಿದ್ದಾರೆ.

ವಿದ್ಯಾರ್ಥಿಯನ್ನು ಗಡಿಪಾರು ಮಾಡಿರುವುದು ಅಮೆರಿಕದ ವಿದೇಶಾಂಗ ನೀತಿ ಉಲ್ಲಂಘಿಸಲಿದೆ ಎಂದು ವಿದ್ಯಾರ್ಥಿ ಪರ ವಕೀಲರು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ ನಂತರ ತಡೆ ನೀಡಲಾಗಿದೆ.

ಅಮೆರಿಕದ ಜಿಲ್ಲಾ ನ್ಯಾಯಾಧೀಶ ಪೆಟ್ರಿಷಿಯಾ ಗೈಲ್ಸ್ ಅವರು ವರ್ಜಿನಿಯಾದ ಅಲೆಕ್ಸಾಂಡ್ರಿಯಾದಲ್ಲಿ ಹೊರಡಿಸಿದ ಮೂರು ಪ್ಯಾರಾಗಳ ಆದೇಶದ ಪ್ರಕಾರ, ಈ ಆದೇಶವನ್ನು ನ್ಯಾಯಾಲಯವು ರದ್ದುಗೊಳಿಸುವವರೆಗೂ ಜಾರಿಯಲ್ಲಿರುತ್ತದೆ. ಇದರರ್ಥ, ನ್ಯಾಯಾಲಯವು ಇದನ್ನು ರದ್ದುಗೊಳಿಸಲು ಅಥವಾ ಮಾರ್ಪಡಿಸಲು ನಿರ್ಧರಿಸುವವರೆಗೂ ಈ ಆದೇಶ ಅಥವಾ ನಿರ್ಬಂಧವು ಜಾರಿಯಲ್ಲಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಯಾಂಕಿ ಕೆರೆಯಲ್ಲಿ ಸರ್ಕಾರಿ ಪ್ರಾಯೋಜಿತ ಮೌಢ್ಯಾರತಿ, ಯಾರಿಗಾಗಿ?

ಹೋಮ್‌ಲ್ಯಾಂಡ್‌ ಸೆಕ್ಯುರಿಟಿ ಇಲಾಖೆಯು ಬಾದರ್ ಖಾನ್ ಸೂರಿಯನ್ನು ಪ್ಯಾಲೆಸ್ತೀನ್‌ನ ಹಮಾಸ್‌ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾನೆಂದು ಆರೋಪಿಸಿದ್ದಲ್ಲದೆ, ಬಾದರ್‌ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಮಾಸ್ ಪರ ಪ್ರಚಾರ ಮತ್ತು ಯಹೂದಿ ವಿರೋಧಿ ನೀತಿಯನ್ನು ಹರಡಿದ್ದಾರೆಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಮಾರ್ಚ್ 15ರಂದು, ರಾಜ್ಯ ಸಚಿವ ಮಾರ್ಕೊ ರೂಬಿಯೋ ಅವರು ಸೂರಿ ಅವರನ್ನು ಗಡಿಪಾರು ಮಾಡಲು ಆದೇಶಿಸಿದ್ದರು.

ಬಾದರ್‌ ಖಾನ್‌ ಸೂರಿ ಅವರ ವಕೀಲರು ಹೋಮ್‌ಲ್ಯಾಂಡ್‌ ಸೆಕ್ಯುರಿಟಿ ಇಲಾಖೆ ಆರೋಪವನ್ನು ತಳ್ಳಿಹಾಕಿದ್ದು, ಹಮಾಸ್‌ ಸಂಘಟನೆ ಜೊತೆ ತಮ್ಮ ಕಕ್ಷಿದಾರರು ಯಾವುದೇ ನಂಟು ಹೊಂದಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.

ಸೂರಿ ಅವರು ಅಮೆರಿಕದಲ್ಲಿ ವಿದ್ಯಾರ್ಥಿ ವೀಸಾದ ಮೇಲೆ ವಾಸಿಸುತ್ತಿದ್ದು, ಅಮೆರಿಕದ ನಾಗರಿಕರೊಬ್ಬರನ್ನು ವಿವಾಹವಾಗಿದ್ದಾರೆ. ಅವರ ವಕೀಲರ ಪ್ರಕಾರ, ಅವರನ್ನು ಲೂಯಿಸಿಯಾನಾದ ಅಲೆಕ್ಸಾಂಡ್ರಿಯಾದಲ್ಲಿ ಸೆರೆಮನೆಯಲ್ಲಿಡಲಾಗಿದೆ. ಮಾ. 17 ರ ಮಧ್ಯರಾತ್ರಿ ಫೆಡರಲ್‌ ಏಜೆಂಟ್‌ಗಳು ವರ್ಜೇನಿಯಾದ ಸೂರಿ ಅವರ ಮನೆಯ ಬಳಿ ಬಲವಂತವಾಗಿ ಬಂಧಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...