ಟಿ20 ವಿಶ್ವಕಪ್: ಅಮೆರಿಕ ತಂಡದಲ್ಲಿ ಕನ್ನಡಿಗ ಕ್ರಿಕೆಟರ್‌ಗೆ ಸ್ಥಾನ

Date:

ಜೂನ್‌ 2 ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ತಂಡದಲ್ಲಿ ಚಿಕ್ಕಮಗಳೂರಿನ ಕನ್ನಡಿಗ ನಾಸ್ತುಷ್ ಕೆಂಜಿಗೆ ಸ್ಥಾನ ಪಡೆದಿದ್ದಾರೆ. ಇವರು ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್‌ ಕೆಂಜಿಗೆ ಅವರ ಪುತ್ರರಾಗಿದ್ದಾರೆ.

ಅಲ್‌ರೌಂಡರ್‌ ಆಗಿರುವ 33 ವರ್ಷದ ನಾಸ್ತುಷ್ ಕೆಂಜಿಗೆ 40 ಏಕದಿನ ಪಂದ್ಯವನ್ನಾಡಿ 38 ವಿಕೆಟ್‌ ಕಬಳಿಸುವುದರ ಜೊತೆ ಬ್ಯಾಟಿಂಗ್‌ನಲ್ಲಿ 357 ರನ್‌ ಕೂಡ ಬಾರಿಸಿದ್ದಾರೆ.

ತಮಿಳುನಾಡು, ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುವಾಗ ಹಲವು ಕ್ರಿಕೆಟ್‌ ಕ್ಲಬ್‌ಗಳಲ್ಲಿ ಆಟವಾಡಿದ್ದಾರೆ. ಉದ್ಯಾನ ನಗರಿಯ ಕ್ಲಬ್‌ಗಳಲ್ಲಿ ಆಟವಾಡುವ ಸಂದರ್ಭದಲ್ಲಿ ಟೀಂ ಇಂಡಿಯಾದ ಕ್ರಿಕೆಟಿಗರಾದ ರಾಬಿನ್‌ ಉತ್ತಪ್ಪ, ಮಾಯಾಂಕ್‌ ಅಗರ್‌ವಾಲ್‌ ಹಾಗೂ ಶ್ರೇಯಸ್ ಗೋಪಾಲ್‌ ಜೊತೆ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲಸದ ನಿಮಿತ್ತ ಅಮೆರಿಕಕ್ಕೆ ತೆರಳಿರುವ ಅವರು ಅಲ್ಲಿನ ಕ್ಲಬ್‌ಗಳಲ್ಲಿ ಕ್ರಿಕೆಟ್‌ ಆಡುತ್ತಿರುವ ಸಂದರ್ಭದಲ್ಲಿ ಆಯ್ಕೆಗಾರರ ಕಣ್ಣಿಗೆ ಬಿದ್ದು 2017ರಲ್ಲಿ ಅಮೆರಿಕ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಗೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ರಾಡಿಯಲ್ಲಿ ಕಳೆದು ಹೋದದ್ದು ಹೆಣ್ಣಿನ ಘನತೆ ಅಷ್ಟೇ ಅಲ್ಲ, ʼಸಾಮಾಜಿಕ ಶೀಲʼ ಬೀದಿಗೆ ಬಿದ್ದಿದೆ

ತಾಯ್ನಾಡು ಚಿಕ್ಕಮಗಳೂರಿಗೆ ಬಂದಾಗಲೆಲ್ಲ ಸ್ಥಳೀಯರ ಜೊತೆ ಕ್ರಿಕೆಟ್ ಆಡುತ್ತಾರೆ. 2021ರ ಟಿ20 ವಿಶ್ವಕಪ್‌ನ ಅರ್ಹತಾ ಸುತ್ತಿನಲ್ಲಿ ಅಮೆರಿಕದ ಪರವಾಗಿ ಸ್ಕಾಟ್‌ಲ್ಯಾಂಡ್, ನಮೀಬಿಯಾ, ಜಿಂಬಾಬ್ವೆ ಸೇರಿದಂತೆ ಹಲವು ತಂಡಗಳ ವಿರುದ್ಧ ಆಡಿದ್ದಾರೆ.

ಪ್ರಸ್ತುತ ಅಮೆರಿಕ ತಂಡದಲ್ಲಿ ಬಹುತೇಕ ಭಾರತೀಯ ಮೂಲದ ಆಟಗಾರರೇ ಇದ್ದಾರೆ. ಅಮೆರಿಕ ತಂಡದ ನಾಯಕ ಮೊನಾಂಕ್ ಪಟೇಲ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿತೀಶ್ ಕುಮಾರ್, ಸೌರಭ್ ನೇತ್ರಾವಲ್ಕರ್ ಭಾರತೀಯ ಮೂಲದ ಆಟಗಾರರಾಗಿದ್ದಾರೆ.

ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ 2015ರ ಪುರುಷರ ವಿಶ್ವಕಪ್ ತಂಡದ ಕೋರಿ ಆ್ಯಂಡರ್ಸನ್‌ ಸಹ ಅಮೆರಿಕ ತಂಡದಲ್ಲಿ ಸ್ಥಾನ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...