ಕೇರಳದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ಭಾರತ ಹೇಳಿದ್ದೇನು?

Date:

ಕೊಲೆ ಪ್ರಕರಣದಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್‌ ನ್ಯಾಯಾಲಯವು ಮರಣದಂಡಣೆ ಶಿಕ್ಷೆ ವಿಧಿಸಿದೆ. ಮರಣದಂಡನೆ ಶಿಕ್ಷೆಯನ್ನು ಅಲ್ಲಿನ ಅಧ್ಯಕ್ಷ ಶಾದ್ ಅಲ್-ಅಲಿಮಿ ಅನುಮೋದಿಸಿದ್ದಾರೆ. ಆ ಶಿಕ್ಷೆಯಿಂದ ಪ್ರಿಯಾ ಅವರನ್ನು ಪಾರು ಮಾಡಲು ಅವರ ಕುಟುಂಬಕ್ಕೆ ಬೇಕಾದ ಎಲ್ಲ ರೀತಿಯ ಸಹಾಯ ಒದಗಿಸುವುದಾಗಿ ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

ಯೆಮನ್‌ ಪ್ರಜೆ ತಲಾಲ್ ಅಬ್ದೋ ಮೆಹದಿ ಅವರನ್ನು ಕೊಲೆ ಮಾಡಿದ ಅಪರಾಧದಲ್ಲಿ ನರ್ಸ್‌ ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಹತ್ಯೆಗೀಡಾದ ವ್ಯಕ್ತಿಯ ಕುಟುಂಬದಿಂದ ಪ್ರಿಯಾ ಅವರು ಕ್ಷಮೆ ಪಡೆಯಲು ಒಂದು ತಿಂಗಳ ಕಾಲಾವಕಾಶವಿದೆ. ಈ ಅವಧಿಯೊಳಗೆ ಅವರು ಕ್ಷಮೆ ಪಡೆಯಲು ಸಾಧ್ಯವಾಗದಿದ್ದರೆ, ಅವರನ್ನು ಮರಣದಂಡನೆಗೆ ಗುರಿಪಡಿಸಲಾಗುತ್ತದೆ ಎಂದು ಯೆಮನ್ ಹೇಳಿದೆ.

ಮೃತ ತಲಾಲ್ ಅಬ್ದೋ ಅವರ ಕುಟುಂಬವು ಕ್ಷಮೆ ನೀಡುವುದರ ಮೇಲೆ ಪ್ರಿಯಾ ಅವರ ಬಿಡುಗಡೆ ಅಥವಾ ಶಿಕ್ಷೆಯ ಪ್ರಮಾಣ ಕಡಿಮೆಯಾಗುವುದು ಅವಲಂಬಿತವಾಗಿದೆ. ಮೃತ ವ್ಯಕ್ತಿಯ ಕುಟುಂಬವು ಪ್ರಿಯಾ ಅವರನ್ನು ಕ್ಷಮಿಸಿ, ಪರಿಹಾರ ಹಣವನ್ನು ಸ್ವೀಕರಿಸಿದರೆ ಆಕೆಯ ಮರಣದಂಡನೆಯನ್ನು ಮನ್ನಾ ಮಾಡಲು ಅವಕಾಶವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಹೇಳಿಕೆ ಬಿಡುಗಡೆ ಮಾಡಿದ್ದು, “ಪ್ರಿಯಾ ಅವರ ಕುಟುಂಬವು ಪರ್ಯಾಯ ಆಯ್ಕೆಗಳನ್ನು ಹುಡುಕುತ್ತಿದೆ ಎಂಬುದು ನಮಗೆ ಅರಿವಾಗಿದೆ. ಆ ಕುಟುಂಬಕ್ಕೆ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯಹಸ್ತವನ್ನು ಚಾಚಲಿದೆ” ಎಂದು ಹೇಳಿದ್ದಾರೆ.

ಮೃತ ವ್ಯಕ್ತಿಯ ಕುಟುಂಬದಿಂದ ಕ್ಷಮಾಪಣೆ ಪಡೆಯುವ ಕುರಿತು ಚರ್ಚೆಗಳು ನಡೆಯುತ್ತಿವೆ. ಪ್ರಿಯಾ ಅವರ ಪರವಾಗಿ ನೇಮಕವಾಗಿದ್ದ ವಕೀಲರಿಗೆ ಪಾವತಿ ವಿಳಂಬವಾಗಿದ್ದು, ಮಾತುಕತೆ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ. ತಮಗೆ ನೀಡಬೇಕಾದ ಶುಲ್ಕವನ್ನು ಪೂರ್ಣವಾಗಿ ನೀಡದ ಹೊರತು ಮಾತುಕತೆಯನ್ನು ಮುಂದುವರೆಸುವುದಿಲ್ಲ ಎಂದು ವಕೀಲರು ಹೇಳಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...