ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರು ಮೃತ್ಯು; ಉನ್ನತಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

Date:

ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ 40 ಮಂದಿ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಅಗ್ನಿ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪದ ನುಡಿಗಳನ್ನು ಹಂಚಿಕೊಂಡಿದ್ದು, “ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ದುಃಖಕರವಾಗಿದೆ. ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಪರಿಹಾರ ಕಾರ್ಯಾಚರಣೆ ಕುರಿತು ಚರ್ಚಿಸಲು ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ಆಯೋಜಿಸಿದ್ದಾರೆ.

ಈ ನಡುವೆ, ಕುವೈತ್ ನಲ್ಲಿನ ಭಾರತೀಯ ರಾಯಭಾರಿ ಕಚೇರಿಯು ಈ ಅಗ್ನಿ ಅವಘಡದಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರಿಗೆ ಸಹಾಯವಾಣಿಯನ್ನು ತೆರೆದಿದ್ದು, ಭಾರತೀಯ ರಾಜತಾಂತ್ರಿಕ ಕಚೇರಿಯು ಅವರಿಗೆ ನೆರವು ಒದಗಿಸಲಿದೆ. ತುರ್ತು ಸಹಾಯವಾಗಿ +965-65505246 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಘಟನೆಯ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, “ಕುವೈತ್ ನಗರದಲ್ಲಿ ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಕಚೇರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಆಸ್ಪತ್ರೆಯಲ್ಲಿರುವ ಗಾಯಾಳುಗಳ ಬಗ್ಗೆಯೂ ನಿಗಾ ವಹಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಕುವೈತ್‌ಗೆ ಹೊರಟ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್ ಸಿಂಗ್

ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದಂತೆ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್ ಸಿಂಗ್ ಕುವೈತ್‌ಗೆ ಪ್ರಯಾಣಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ ಮಾಡಿರುವ ಅವರು “ಪ್ರಧಾನಿಯವರ ನಿರ್ದೇಶನದಂತೆ ಕುವೈತ್‌ಗೆ ಸಚಿವ ಕೀರ್ತಿ ವರ್ಧನ್ ಸಿಂಗ್
ಪ್ರಯಾಣಿಸಲಿದ್ದು, ಘಟನಾ ಸ್ಥಳದಲ್ಲಿದ್ದು ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ ನೆರವು ನೀಡುವ ನಿಟ್ಟಿನಲ್ಲಿ ಮೇಲ್ವಿಚಾರಣೆ ನೋಡಿಕೊಳ್ಳಲಿದ್ದಾರೆ ಮತ್ತು ಈ ದುರದೃಷ್ಟಕರ ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹವನ್ನು ತ್ವರಿತವಾಗಿ ಸ್ವದೇಶಕ್ಕೆ ಕರೆತರಲು ಕುವೈತ್‌ನ ಸ್ಥಳೀಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ನಾಳೆ ಬೆಳಗ್ಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್ ಸಿಂಗ್ ಕುವೈತ್‌ಗೆ ಪ್ರಯಾಣಿಸಲಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...