ಚೀನಾ | ಭಾರೀ ಮಳೆಯಿಂದಾಗಿ ಭೂಕುಸಿತ; 11 ಮಂದಿ ಮೃತ್ಯು

Date:

ಟೈಫೂನ್ ಗೇಮಿ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ ಆಗ್ನೇಯ ಚೀನಾದಲ್ಲಿ ಭಾನುವಾರ ಭೂಕುಸಿತ ಉಂಟಾಗಿದೆ. ಮನೆಯೊಂದಕ್ಕೆ ಮಣ್ಣು ಕುಸಿದು ಹನ್ನೊಂದು ಜನರು ಸಾವನ್ನಪ್ಪಿದ್ದಾರೆ ಎಂದು ಚೀನಾ ಮಾಧ್ಯಮಗಳು ತಿಳಿಸಿದೆ.

ಇನ್ನು ಚೀನಾದ ಶಾಂಘೈನಲ್ಲಿ ತೀವ್ರ ಗಾಳಿಯಿಂದಾಗಿ ನೆಲಸಮವಾಗಿದ್ದ ಮರಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ ಎಂದು ಡಿಜಿಟಲ್ ಸುದ್ದಿ ಸಂಸ್ಥೆ ದಿ ಪೇಪರ್ ವರದಿ ಮಾಡಿದೆ.

ಚೀನಾದಲ್ಲಿ ಗುರುವಾ ಭೂಕುಸಿತ ಉಂಟು ಮಾಡಿದ ಟೈಫೂನ್ ಗೇಮಿ ಚಂಡಮಾರುತವು ದುರ್ಬಲಗೊಂಡಿದ್ದು, ಟೈಫೂನ್ ಗೇಮಿ ಚಂಡಮಾರುತದಿಂದ ಚೀನಾದಲ್ಲಿ ಸಂಭವಿಸಿದ ಮೊದಲ ಸಾವು ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚೀನಾ | ಶಾಪಿಂಗ್ ಸೆಂಟರ್‌ನಲ್ಲಿ ಬೆಂಕಿ ಅವಘಡ; 14 ಮಂದಿ ಸಾವು

ಚೀನಾವನ್ನು ತಲುಪುವ ಮೊದಲು ಟೈಫೂನ್ ಗೇಮಿ ಫಿಲಿಪೈನ್ಸ್‌ಗೆ ಅಪ್ಪಳಿಸಿದ್ದು ಫಿಲಿಪೈನ್ಸ್‌ನಲ್ಲಿ ಭಾರೀ ಮಳೆ ಸುರಿದಿದೆ. ಟೈಫೂನ್ ಗೇಮಿ ಚಂಡಮಾರುತದಿಂದ ಚೀನಾದಲ್ಲಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ. ಬಳಿಕ ತೈವಾನ್ ದ್ವೀಪದಾದ್ಯಂತ ಚಂಡಮಾರುತ ವ್ಯಾಪಿಸಿದ್ದು ಅಲ್ಲಿ ಸುಮಾರು ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಇನ್ನು ಹುನಾನ್ ಪ್ರಾಂತ್ಯದ ಹೆಂಗ್ಯಾಂಗ್ ನಗರದ ವ್ಯಾಪ್ತಿಯ ಯುಯೆಲಿನ್ ಗ್ರಾಮದಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಕೆಸರು ನೀರು ಮನೆಯೊಳಗೆ ನುಗ್ಗಿದೆ. ಪ್ರತ್ಯೇಕ ಘಟನೆಯಲ್ಲಿ 18 ಮಂದಿ ಮಣ್ಣಿನಡಿ ಸಿಲುಕಿದ್ದು, ಆರು ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...