ಕೆನಡಾ | ಜನಸಂದಣಿ ಪ್ರದೇಶಕ್ಕೆ ನುಗ್ಗಿದ ಕಾರು; ಹಲವರ ಸಾವು

Date:

ಕೆನಡಾದ ವ್ಯಾಂಕೋವರ್​ ನಗರದಲ್ಲಿ ಸ್ಥಳೀಯ ಉತ್ಸವ ನಡೆಯುತ್ತಿದ್ದ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ನೂರಾರು ಜನರಿದ್ದ ಸ್ಥಳದ ಮೇಲೆ ಹರಿದ ಪರಿಣಾಮ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಕೆಲವು ವಾಹನಗಳು ಕೂಡ ಜಖಂಗೊಂಡಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ದಾಳಿಯೋ ಅಥವಾ ಅಪಘಾತವೋ ಎಂಬುದನ್ನು ಪೊಲೀಸರು ಇಲ್ಲಿಯವೆರೆಗೂ ದೃಢಪಡಿಸಿಲ್ಲ.

ಉತ್ಸವದ ವೇಳೆ ಕಪ್ಪು ಬಣ್ಣದ ಎಸ್‌ಯುವಿ ಕಾರು ವೇಗವಾಗಿ ಧಾವಿಸಿ ಜನಸಂದಣಿಯ ಮೂಲಕ ಚಲಿಸುತ್ತಿದ್ದ ಹಲವು ಜನರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾರಿನ ಚಾಲಕ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದಾನೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಈ ಭೀಕರ ಘಟನೆಯ ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದ್ದು, ಕಾರು ದಾಳಿಯ ನಂತರ ಶವಗಳು ಬೀದಿಯಲ್ಲಿ ಬಿದ್ದಿರುವುದನ್ನು ತೋರಿಸುತ್ತವೆ. ವೈದ್ಯಕೀಯ ಸಿಬ್ಬಂದಿ, ಸ್ಥಳೀಯ ಕಾರ್ಯಕರ್ತರು ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಧಾವಿಸುತ್ತಿರುವುದು ದೃಶ್ಯಗಳಲ್ಲಿ ಕಂಡುಬರುತ್ತಿದೆ.

ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿ ಎಕ್ಸ್‌ನಲ್ಲಿ ಬರೆದಿರುವ ಕೆನಡಾ ಪ್ರಧಾನಿ ಮಾರ್ಕ್‌ ಕಾರ್ನಿ, ಮರಣ ಹೊಂದಿದ ಮತ್ತು ಗಾಯಗೊಂಡವರ ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪವನ್ನು ಅರ್ಪಿಸುತ್ತೇನೆ. ನಾವೆಲ್ಲರೂ ನಿಮ್ಮ ನೋವಿನಲ್ಲಿ ದುಃಖಿತರಾಗಿದ್ದೇನೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಗಾಯಗೊಂಡವರಿಗೆ ನೆರವು ನೀಡಲು ಎಲ್ಲ ರೀತಿಯ ತುರ್ತುಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...