ಪಾಕಿಸ್ತಾನ | ಲಷ್ಕರ್-ಎ-ತಯ್ಯಬಾ ಭಯೋತ್ಪಾದಕ, ಹಫೀಜ್ ಸಯೀದ್‌ನ ಸಹಾಯಕ ಅಬು ಕತಾಲ್ ಹತ್ಯೆ

Date:

ಲಷ್ಕರ್-ಎ-ತಯ್ಯಬಾದ ಭಯೋತ್ಪಾದಕ, 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ಆಪ್ತ ಸಹಾಯಕ ಅಬು ಕತಾಲ್‌ನನ್ನು ಶನಿವಾರ ರಾತ್ರಿ ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ದಾಳಿಗಳನ್ನು ಅಬು ಕತಾಲ್ ಮಾಡಿಸಿದ್ದ ಎಂದು ಹೇಳಲಾಗಿದೆ.

ಅಬು ಕತಾಲ್ ನಿಜವಾದ ಹೆಸರು ಜಿಯಾ-ಉರ್-ರೆಹಮಾನ್ ಆಗಿದ್ದು, ತನ್ನ ಭದ್ರತಾ ಸಿಬ್ಬಂದಿಯೊಂದಿಗೆ ಸಂಜೆ 7 ಗಂಟೆ ಸುಮಾರಿಗೆ ಝೇಲಂ ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದಾಗ ಅಪರಿಚಿತ ದಾಳಿಕೋರರು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ವರದಿಯಾಗಿದೆ. ದಾಳಿಕೋರರು ಸುಮಾರು 15ರಿಂದ 20 ಸುತ್ತು ಗುಂಡು ಹಾರಿಸಿದ್ದು, ಅಬು ಕತಾಲ್ ಮತ್ತು ಅವರ ಭದ್ರತಾ ಸಿಬ್ಬಂದಿಗಳಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.

ಇದನ್ನು ಓದಿದ್ದೀರಾ? ರಿಯಾಸಿ ದಾಳಿ| ಉಗ್ರರು 20 ನಿಮಿಷಗಳ ಕಾಲ ಗುಂಡು ಹಾರಿಸಿದ್ದರು: ಮಾಜಿ ಸರಪಂಚ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಝೀಲಂ ಪ್ರದೇಶದ ದಿನಾ ಪಂಜಾಬ್ ವಿಶ್ವವಿದ್ಯಾಲಯದ ಬಳಿಯ ಜೀನತ್ ಹೋಟೆಲ್ ಬಳಿ ಈ ದಾಳಿ ನಡೆದಿದೆ. ಜಿಯಾ-ಉರ್-ರೆಹಮಾನ್ ಅವರ ಬೆಂಗಾವಲು ಪಡೆಯು ಹಾದುಹೋಗುತ್ತಿದ್ದಂತೆ, ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಅವರ ಆಪ್ತ ಸಹಾಯಕನಾಗಿದ್ದ ಅಬು ಕತಾಲ್, ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದ ದಾಳಿಯ ಆರೋಪಿಯಾಗಿದ್ದಾನೆ. ಈ ದಾಳಿಯಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...