ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಇಟಲಿಯಲ್ಲಿ ಮಹಾತ್ಮ ಗಾಂಧಿ ವಿಗ್ರಹ ಧ್ವಂಸ

Date:

ಉದ್ಘಾಟನೆಗೊಂಡ ಕೆಲವೇ ಗಂಟೆಗಳಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳು ಮಹಾತ್ಮ ಗಾಂಧಿ ಅವರ ವಿಗ್ರಹವನ್ನು ಧ್ವಂಸಗೊಳಿಸಿರುವ ಆಘಾತಕಾರಿ ಘಟನೆ ಇಟಲಿಯಲ್ಲಿ ನಡೆದಿದೆ. ವಿಗ್ರಹವಿದ್ದ ಸ್ಥಳದಲ್ಲಿ ಖಲಿಸ್ತಾನಿ ಉಗ್ರ ಹರ್‌ದೀಪ್‌ ಸಿಂಗ್ ನಿಜ್ಜರ್ ಬಗ್ಗೆ ವಿವಾದಾತ್ಮಕ ಬರಹಗಳನ್ನು ಆರೋಪಿಗಳು ಬರೆದಿದ್ದಾರೆ.

ಘಟನೆಯ ನಡೆದ ಕೆಲವೇ ಹೊತ್ತಿನಲ್ಲಿ ಸ್ಥಳವನ್ನು ಸ್ವಚ್ಛಗೊಳಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿ7 ಶೃಂಗಸಭೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಒಂದು ದಿನ ಬಾಕಿಯಿರುವಾಗ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

50ನೇ ಜಿ7 ಶೃಂಗಸಭೆ ಇಟಲಿಯ ಬೋರ್ಜೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ಜೂನ್‌ 13ರಿಂದ 15ರವರೆಗೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್‌ ಮೋಹನ್‌ ಕ್ವಾತ್ರಾ ಅವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಅಪುಲಿಯಾಗೆ ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ನಾಳೆ ಆಗಮಿಸಲಿದ್ದಾರೆ.

ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಂಡ ಬಗ್ಗೆ ಭಾರತದ ಅಧಿಕಾರಿಗಳು ಇಟಲಿಯ ಅಧಿಕಾರಿಗಳ ಬಳಿ ಚರ್ಚಿಸಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕ್ವಾತ್ರಾ ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಇದೇ ರೀತಿಯ ಘಟನೆ ಕೆನಡಾದಲ್ಲಿ ಸಂಭವಿಸಿತ್ತು. ಕೆನಡಾದ ಬ್ರಿಟಿಷ್‌ ಕೊಲಂಬಿಯಾ ಪ್ರಾಂತ್ಯದಲ್ಲಿನ ವಿವಿ ಕ್ಯಾಂಪಸ್‌ನಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳು ಮಹಾತ್ಮ ಗಾಂಧಿಯ ವಿಗ್ರಹವನ್ನು ಧ್ವಂಸಗೊಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...