ಮೂರು ದಿನಗಳ ಹಿಂದೆ ಅಬುಧಾಬಿಗೆ ತೆರಳಿದ್ದ ಮಂಡ್ಯದ ನಿವಾಸಿ ಕುಸಿದು ಬಿದ್ದು ಮೃತ್ಯು

Date:

ಮೂರು ದಿನಗಳ ಹಿಂದೆ ಯುನೈಟೆಡ್ ಅರಬ್ ಎಮಿರೇಟ್ಸ್‌ ‌ನ ರಾಜಧಾನಿ ಅಬುಧಾಬಿಗೆ ತೆರಳಿದ್ದ ಮಂಡ್ಯದ ನಿವಾಸಿಯೋರ್ವರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮಂಡ್ಯ ತಾಲೂಕಿನ ಗೂಬೆ ಹಳ್ಳದ ನಿವಾಸಿ ಅಬೂಬಕ್ಕರ್ (30) ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾವು ನಿವಾಸಿಯಾಗಿರುವ ಮುಹಮ್ಮದ್ ಎಂಬುವವರ ಮಗಳನ್ನು ವಿವಾಹವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ದಿನಗಳ ಹಿಂದಷ್ಟೇ ಅಬುಧಾಬಿಯ ಕೆಫೆಯೊಂದರಲ್ಲಿ ಕೆಲಸದ ನಿಮಿತ್ತ ತೆರಳಿದ್ದರು. ಶನಿವಾರ ಸಂಜೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಫೆಯಿಂದ ರೂಮಿಗೆ ತೆರಳಿದ್ದರು. ಮರಳಿ ಕೆಲಸಕ್ಕೆಂದು ಕೆಫೆಗೆ ಬರುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಕುಸಿದುಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಹೃದಯಾಘಾತದಿಂದ ನಿಧನರಾಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಸದ್ಯ ಮರಣೋತ್ತರ ಪರೀಕ್ಷೆ ಮಾಡಲು ಸ್ಥಳೀಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ಮೃತಪಟ್ಟ ಅಬೂಬಕ್ಕರ್ ಅವರು ಪತ್ನಿ, ಇಬ್ಬರು ಮಕ್ಕಳ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಅರಿತ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಸಮಾಜ ಸೇವೆಯಲ್ಲಿ ಸಕ್ರಿಯವಾಗಿರುವ ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್)ನ ಸ್ವಯಂ ಸೇವಕರು, ಮೃತರ ಸಂಪೂರ್ಣ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ, ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದ್ದು, ಮೃತದೇಹವನ್ನು ಸ್ವಂತ ಊರಿಗೆ ಕಳುಹಿಸುವ ಪ್ರಕ್ರಿಯೆಯನ್ನು ಶ್ರಮಿಸುತ್ತಿರುವುದಾಗಿ ತಿಳಿದು ಬಂದಿದೆ.

ಅಬುಧಾಬಿಯಲ್ಲಿ ಭಾನುವಾರ ವಾರದ ರಜಾದಿನವಾಗಿರುವ ಹಿನ್ನೆಲೆಯಲ್ಲಿ ಮೃತದೇಹವನ್ನು ರವಾನಿಸುವ ಪ್ರಕ್ರಿಯೆ ಸ್ವಲ್ಪ ತಡವಾಗಬಹುದು ಎಂದು ತಿಳಿದು ಬಂದಿದೆ.

ಕೆಸಿಎಫ್‌ ಯುಎಇ ನಾಯಕರಾದ ಸಮದ್ ಬೀರಾಲಿ, ಹಕೀಂ ತುರ್ಕಳಿಕೆ ಹಾಗೂ ಬ್ಯಾರೀಸ್ ಚೇಂಬರ್ಸ್ ಅಧ್ಯಕ್ಷ ಹಿದಾಯತ್ ಅಡ್ಡೂರು ಅವರು ಮೃತಪಟ್ಟ ಅಬೂಬಕ್ಕರ್ ಅವರ ಕುಟುಂಬದ ಸದಸ್ಯರ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಮಾಹಿತಿಯನ್ನು ಒದಗಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...