ಸರ್ಕಾರಿ ಉದ್ಯೋಗಿಗಳ ಸಾಮೂಹಿಕ ವಜಾ; ಟ್ರಂಪ್ ಆದೇಶಕ್ಕೆ ನ್ಯಾಯಾಲಯ ತಡೆ

Date:

ಅಮೆರಿಕದ ಫೆಡರಲ್ (ಸರ್ಕಾರಿ) ಏಜೆನ್ಸಿಗಳಿಗೆ ಇತ್ತೀಚೆಗೆ ನೇಮಕಗೊಂಡಿದ್ದ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಲು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನೀಡಿದ್ದ ಆದೇಶಕ್ಕೆ ಫೆಡರಲ್ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ ಎಂದು ವರದಿಯಾಗಿದೆ.

ಉದ್ಯೋಗಿಗಳನ್ನು ವಜಾಗೊಳಿಸಲು ಟ್ರಂಪ್‌ಗೆ ಅಮೆರಿಕ ಸರ್ಕಾರದ ದಕ್ಷತೆ ಇಲಾಖೆ (DOGE) ಮುಖ್ಯಸ್ಥ ಎಲಾನ್‌ ಮಸ್ಕ್‌ ಸಲಹೆ ನೀಡಿದ್ದರು. ಅವರ ಸಲಹೆಯಂತೆ, ನೇಮಕಗೊಂಡು ಒಂದು ವರ್ಷ ಪೂರೈಸದ, ಒಂದು ವರ್ಷಕ್ಕೂ ಕಡಿಮೆ ಅನುಭವ ಹೊಂದಿರುವ ಎಲ್ಲ ಪ್ರೊಬೇಷನರಿ ಉದ್ಯೋಗಿಗಳನ್ನು ವಜಾಗೊಳಿಸಬೇಕು ಎಂದು ಫೆಡರಲ್ ಏಜೆನ್ಸಿಗಳಿಗೆ ಟ್ರಂಪ್ ಸರ್ಕಾರ ಆದೇಶಿಸಿತ್ತು. ಆಡಳಿತ ವೆಚ್ಚವನ್ನು ಕಡಿತಗೊಳಿಸಲು ಉದ್ಯೋಗಿಗಳನ್ನು ಸಾಮೂಹಿಕ ವಜಾಗೊಳಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿತ್ತು.

ಆದರೆ, ಉದ್ಯೋಗಿಗಳನ್ನು ವಜಾಗೊಳಿಸುವ ಅಧಿಕಾರಿ ʼಅಮೆರಿಕದ ಸಿಬ್ಬಂದಿ ನಿರ್ವಹಣೆʼ ಇಲಾಖೆಗೆ ಇಲ್ಲವೆಂದು ಸ್ಯಾನ್ ಫ್ರಾನ್ಸಿಸ್ಕೋದ ಜಿಲ್ಲಾ ನ್ಯಾಯಾಧೀಶ ವಿಲಿಯಂ ಅಲ್ಸುಪ್ ಹೇಳಿದ್ದಾರೆ. ಟ್ರಂಪ್ ಅದೇಶಕ್ಕೆ ತಡೆ ನೀಡಿದ್ದಾರೆ. ಉದ್ಯೋಗಿಗಳನ್ನು ವಜಾಗೊಳಿಸುವ ವಿಚಾರವಾಗಿ ಉದ್ಯೋಗಿಗಳಿಗೆ ಕಳಿಸಲಾಗಿರುವ ಇ-ಮೇಲ್‌ಗಳನ್ನು ಹಿಂಪಡೆಯುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಕ್ಷಣಾ ಇಲಾಖೆಯು ತನ್ನಲ್ಲಿರುವ 5,400 ಪ್ರೊಬೇಷನರಿ ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸಿತ್ತು. ತನ್ನ ಉದ್ಯೋಗಿಗಳಿಗೆ ವಜಾಗೊಳಿಸಿರುವುದಾಗಿ ಇ-ಮೇಲ್ ಕಳಿಸಿತ್ತು. ಆದರೆ, ಆ ಇ-ಮೇಲ್‌ಗಳನ್ನು ಕೋರ್ಟ್‌ ಅಮಾನ್ಯಗೊಳಿಸಿದೆ. ಉದ್ಯೋಗಿಗಳನ್ನು ಸೇವೆಯಲ್ಲಿ ಮುಂದುವರೆಸುವಂತೆಯೂ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...