ಮೈಕ್ರೋಸಾಫ್ಟ್ ತಂತ್ರಾಂಶದಲ್ಲಿ ತಾಂತ್ರಿಕ ತೊಂದರೆ: ವಿಶ್ವಾದ್ಯಂತ ವಿಮಾನ, ಬ್ಯಾಂಕ್, ಷೇರು ಮುಂತಾದ ಸೇವೆಗಳಲ್ಲಿ ವ್ಯತ್ಯಯ

Date:

ಮೈಕ್ರೋಸಾಫ್ಟ್ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಯುಂಟಾದ ಕಾರಣ ಕಂಪ್ಯೂಟರ್‌ನಲ್ಲಿ ಮೈಕ್ರೋಸಾಫ್ಟ್‌ ಅವಲಂಬಿಸಿದ್ದ ಹಲವು ಸೇವೆಗಳಿಗೆ ತೊಂದರೆಯುಂಟಾಗಿದೆ. ವಿಶ್ವದಾದ್ಯಂತ ವಿಮಾನ, ಬ್ಯಾಂಕ್‌, ಷೇರು ಮಾರುಕಟ್ಟೆ, ಪಾವತಿ ಸೇವೆ ಹಾಗೂ ತುರ್ತು ಸೇವೆಗಳಲ್ಲಿ ವ್ಯತ್ಯಯವುಂಟಾಗಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮೈಕ್ರೋಸಾಫ್ಟ್, “ನಮ್ಮ ದುರಸ್ತಿ ಕಾರ್ಯಚಟುವಟಿಕೆಗಳು ನಡೆಯುತ್ತಿರುವುದರಿಂದ ಹಲವು ಸೇವೆಗಳಲ್ಲಿ ಸುಧಾರಣೆಯಾಗುತ್ತಿರುವುದು ಮುಂದುವರಿದಿದೆ” ಎಂದು ತಿಳಿಸಿದೆ.

ಮೈಕ್ರೋಸಾಫ್ಟ್‌ನಲ್ಲಿ ಭದ್ರತಾ ಪರಿಹಾರಕ್ಕಾಗಿ ಒದಗಿಸಿರುವ ಸೈಬರ್‌ ಸೆಕ್ಯೂರಿಟಿ ವೇದಿಕೆಯಾದ ಕ್ರೌಡ್‌ಸ್ಟ್ರೈಕ್‌ ಫಾಲ್ಕಾನ್ ವೈಫಲ್ಯದಿಂದಾಗಿ ತಾಂತ್ರಿಕ ದೋಷ ಸಂಭವಿಸಿದೆ. ಈ ಸಮಸ್ಯೆಯನ್ನು ಹಲವು ಗಂಟೆಗಳ ಕಾಲ ಪರಿಹರಿಸಲು ಸಮಯವುಂಟಾದ ಕಾರಣ ಹಲವು ಸೇವೆಗಳಲ್ಲಿ ವ್ಯತ್ಯಯವುಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಮೆರಿಕ | ಚುನಾವಣೆಯಿಂದ ಹಿಂದೆ ಸರಿಯಿರಿ; ಜೋ ಬೈಡನ್‌ಗೆ ಒಬಾಮಾ ಸೇರಿ ಪ್ರಮುಖ ನಾಯಕರ ಒತ್ತಾಯ

ಭಾರತದಲ್ಲೂ ಕೂಡ ವಿಮಾನ ಕಾರ್ಯಾಚರಣೆಗಳು, ಪಾವತಿ ವ್ಯವಸ್ಥೆಗಳು ಹಾಗೂ ವಾಣಿಜ್ಯ ಚಟುವಟಿಕೆ ಸೇರಿದಂತೆ ಹಲವು ಸೇವೆಗಳಲ್ಲಿ ಸಮಸ್ಯೆಯುಂಟಾಗಿದೆ. ಹಲವು ವಿಮಾನ ನಿಲ್ದಾಣಗಳಲ್ಲಿ ವಿಮಾನಗಳು ವಿಳಂಬವಾಗಿ ಪ್ರಯಾಣಿಕರು ಬಹು ದೂರದವರೆಗಿನ ಸರದಿ ಸಾಲಿನಲ್ಲಿ ಕಾಯುತ್ತಿದ್ದಾರೆ.  ಇಂಡಿಗೋ, ಆಕಾಸ ಹಾಗೂ ಸ್ಪೈಸ್‌ಜೆಟ್ ಸೇರಿ ಹಲವು ವಿಮಾನ ನಿಲ್ದಾಣಗಳಲ್ಲಿ ಬುಕ್ಕಿಂಗ್‌ ಹಾಗೂ ಆಗಮನ ಸೇವೆಗಳಿಗೆ ತೊಂದರೆಯಾಗಿದೆ.

ವಿಮಾನ ನಿಲ್ದಾಣದಲ್ಲಿ ತೊಂದರೆಯುಂಟಾಗಿರುವ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಿದ್ದು, ಸಮಸ್ಯೆಯನ್ನು ಪರಿಹರಿಸಲು ಮೈಕ್ರೊಸಾಫ್ಟ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಇಂಗ್ಲೆಂಡ್, ಅಮೆರಿಕ, ಜರ್ಮನಿ, ನೆದರ್‌ಲ್ಯಾಂಡ್ಸ್, ಸ್ಪೇನ್‌ ಸೇರಿದಂತೆ ಹಲವು ದೇಶಗಳ ವಿಮಾನ ನಿಲ್ದಾಣಗಳಲ್ಲಿ ಸಮಸ್ಯೆಯುಂಟಾಗಿದೆ.

ಭಾರತದ ಬಿಎಸ್‌ಸಿ, ಎನ್‌ಎಸ್‌ಸಿ, ಲಂಡನ್‌ ಸ್ಟಾಕ್‌ ಎಕ್ಸ್‌ಚೇಂಚ್‌ ಸೇರಿದಂತೆ ಹಲವು ದೇಶಗಳ ಷೇರು ಮಾರುಕಟ್ಟೆಗಳಲ್ಲಿ ವ್ಯತ್ಯಯವುಂಟಾಗಿದೆ.

ಟಿವಿ ಪ್ರಸಾರ ಸ್ಥಗಿತ

ವಿಶ್ವದಾದ್ಯಂತ ಹಲವು ದೇಶಗಳ ಟಿವಿ ಪ್ರಸಾರ ಸೇವೆಯಲ್ಲಿಯೂ ಸ್ಥಗಿತವುಂಟಾಗಿದೆ. ಇಂಗ್ಲೆಂಡಿನ ಸ್ಕೈ ನ್ಯೂಸ್, ಸುದ್ದಿ ಮಾಧ್ಯಮ ಅಸೋಸಿಯೇಟೆಡ್ ಪ್ರೆಸ್ ಕೂಡ ತೊಂದರೆ ಅನುಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...